ಬ್ರೋ.. ಬ್ರೋ.. ಐಫೋನ್ ಪ್ರೊ ಮ್ಯಾಕ್ಸ್‌ಗಿಂತ ಅಗ್ಗವಾದ 5 ಪ್ರಮುಖ ಎಲೆಕ್ಟ್ರಿಕ್ ಸ್ಕೂಟರ್‌ಗಳಿವು!
ಭಾರತದಲ್ಲಿ ನಿಧಾನವಾಗಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಕೊಳ್ಳುವತ್ತ ಗ್ರಾಹಕರು ಆಸಕ್ತಿ ತೋರಿಸುತ್ತಿದ್ದಾರೆ. ಅದರಲ್ಲೂ ಕೆಲವು ಸ್ಕೂಟರ್‌ಗಳ ಬೆಲೆ ಸ್ಮಾರ್ಟ್‌ಫೋನ್‌ಗಿಂತ ಅಗ್ಗವಿದೆ. ಸದ್ಯ ಐಫೋನ್ 16 ಪ್ರೊ (iPhone 16 Pro) ರೂ.1.44 ಲಕ್ಷದಿಂದ ರೂ.1.84 ಲಕ್ಷದವರೆಗೆ ಮಾರಾಟವಾಗುತ್ತಿದೆ. ನೀವು ಅದಕ್ಕಿಂತಲೂ ಕಡಿಮೆ ಬೆಲೆಗೆ ಹೊಚ್ಚ ಹೊಸ ಸ್ಕೂಟರ್‌ನ್ನು ಮನೆಗೆ ತರಲು ಸಾಧ್ಯವಾಗಲಿದೆ. ನಾವಿಲ್ಲಿ ಕೈಗೆಟುಕುವ ದರದಲ್ಲಿ ಲಭ್ಯವಿರುವ 5 ಪ್ರಮುಖ ಎಲೆಕ್ಟ್ರಿಕ್ ಸ್ಕೂಟರ್‌ಗಳ ವಿಶೇಷತೆಗಳ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.
ಅಲ್ಟ್ರಾವೈಲೆಟ್ ಟೆಸ್ಸೆರಾಕ್ಟ್ (Ultraviolette Tesseract):
ಈ ಎಲೆಕ್ಟ್ರಿಕ್ ಸ್ಕೂಟರ್ ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಸಿಗುತ್ತದೆ. ರೂ.1.45 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಅತಿ ಶೀಘ್ರದಲ್ಲೇ ವಿತರಣೆಯು ಶುರುವಾಗಲಿದೆ. ಹೆಚ್ಚು ಶಕ್ತಿಯುತವಾದ 3.5 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್), 5 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 6 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ 3 ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ ಕ್ರಮವಾಗಿ 162 ರಿಂದ 261 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ.

ಹೊಸ ಟೆಸ್ಸೆರಾಕ್ಟ್ ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲೈಟ್ ಮತ್ತು ಎಲ್ಇಡಿ ಡಿಆರ್‌ಎಲ್‌ಗಳನ್ನು ಒಳಗೊಂಡಿದೆ. ಟಿಎಫ್‌ಟಿ ಟಚ್‌ಸ್ಕ್ರೀನ್ ಕ್ಲಸ್ಟರ್, ಕೀಲೆಸ್ ಆಕ್ಸೆಸ್, ಪಾರ್ಕ್ ಅಸಿಸ್ಟ್, ಹಿಲ್-ಹೋಲ್ಡ್, ಕ್ರೂಸ್ ಕಂಟ್ರೋಲ್, ನ್ಯಾವಿಗೇಷನ್ ಹಾಗೂ ಮ್ಯೂಸಿಕ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಎಆರ್‌ಎಎಸ್ (ಅಡ್ವಾನ್ಸ್ಡ್ ರೈಡರ್ ಅಸಿಸ್ಟೆನ್ಸ್ ಸಿಸ್ಟಮ್), ಡುಯಲ್ ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.
ಹೀರೋ ವಿಡಾ ವಿ2 ಪ್ರೊ (Hero Vida V2 Pro):
ಇದು ರೂ.1.20 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 3.94 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 165 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 2.9 ಸೆಕೆಂಡುಗಳಲ್ಲಿ 0 ರಿಂದ 40 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ನೂತನ ವಿಡಾ ವಿ2 ಪ್ರೊ ಸ್ಕೂಟರ್ ಗ್ಲಾಸಿ ಬ್ಲ್ಯಾಕ್, ಮ್ಯಾಟ್ ಅಬ್ರಾಕ್ಸ್ ಆರೆಂಜ್, ಮ್ಯಾಟ್ ವೈಟ್, ಗ್ಲಾಸಿ ಸ್ಪೋರ್ಟ್ಸ್ ರೆಡ್, ನೆಕ್ಸಸ್ ಬ್ಲೂ ಗ್ರೇ ಹಾಗೂ ಮ್ಯಾಟ್ ಸಯಾನ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 7-ಇಂಚಿನ ಟಿಎಫ್‌ಟಿ ಟಚ್‌ಸ್ಕ್ರೀನ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಕೀಲೆಸ್ ಎಂಟ್ರಿ ಹಾಗೂ ಕ್ರೂಸ್ ಕಂಟ್ರೋಲ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.
ಓಲಾ ಎಸ್1 ಪ್ರೊ ಪ್ಲಸ್ (Ola S1 Pro Plus):
ಈ ಎಲೆಕ್ಟ್ರಿಕ್ ಸ್ಕೂಟರ್ ರೂ.1.48 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 4 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 5.2 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 242 ರಿಂದ 320 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. 141 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಟಿಎಫ್‌ಟಿ ಟಚ್‌ಸ್ಕ್ರೀನ್ ಡಿಸ್‌ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಡುಯಲ್ ಡಿಸ್ಕ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

ಎಥರ್ ರಿಜ್ಟಾ (Ather Rizta):
ಇದು ಅಗ್ಗದ ದರದಲ್ಲೂ ಲಭ್ಯವಿದೆ. ರೂ.1.11 ಲಕ್ಷದಿಂದ ರೂ.1.47 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 2.9 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) & 3.7 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 123 ರಿಂದ 160 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 7-ಇಂಚಿನ ಸ್ಕ್ರೀನ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.
ಸಿಂಪಲ್ ಒನ್ (Simple One):
ಈ ಎಲೆಕ್ಟ್ರಿಕ್ ಸ್ಕೂಟರ್ ರೂ.1.66 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 5.0 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. 248 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. 105 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 2.77 ಸೆಕಂಡುಗಳಲ್ಲಿ 0 ರಿಂದ 40 ಕೆಎಂಪಿಹೆಚ್ ವೇಗವನ್ನು ಒಳಗೊಂಡಿದೆ. ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.


Click it and Unblock the Notifications