ಒಮ್ಮೆ ಪುಲ್ ಟ್ಯಾಂಕ್ ಮಾಡಿದರೆ ಸಾಕು.. ಊರು ತುಂಬಾ ಓಡಾಡಬಹುದು, ಗರಿಷ್ಠ ಮೈಲೇಜ್.. ಬೆಲೆಯೂ ಕಮ್ಮಿ!
ಭಾರತದಲ್ಲಿ ಹೆಚ್ಚು ಮೈಲೇಜ್ (Mileage) ನೀಡುವ ಬೈಕ್‌ಗಳಿಗೆ ಭಾರೀ ಬೇಡಿಕೆಯಿದೆ. ಗ್ರಾಹಕರು ಕೂಡ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ನೀವು ದಿನನಿತ್ಯದ ಬಳಕೆಗಾಗಿ ಕಮ್ಮಿ ಬೆಲೆಗೆ ಉತ್ತಮ ಇಂಧನ ದಕ್ಷತೆ ಹೊಂದಿರುವ ಮೋಟಾರ್‌ಸೈಕಲ್‌ವೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ ಬಜಾಜ್ ಪ್ಲಾಟಿನಾ 100, ಬಜಾಜ್ ಪಲ್ಸರ್ ಎನ್125, ಹೋಂಡಾ ಶೈನ್ 100, ಹೀರೋ ಸ್ಪ್ಲೆಂಡರ್ ಪ್ಲಸ್ ಹಾಗೂ ಟಿವಿಎಸ್ ಸ್ಪೋರ್ಟ್ ಬೈಕ್‌ಗಳು ಅತ್ಯುತ್ತಮ ಆಯ್ಕೆಯಾಗಲಿವೆ. ಬನ್ನಿ, ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಯೋಣ.
ಬಜಾಜ್ ಪ್ಲಾಟಿನಾ 100 (Bajaj Platina 100):
ಅತಿ ಹೆಚ್ಚು ಮೈಲೇಜ್ ನೀಡುವ ಬೈಕ್‌ಗಳಲ್ಲಿ 'ಪ್ಲಾಟಿನಾ 100' ಕೂಡ ಪ್ರಮಖವಾಗಿದೆ. ಅಗ್ಗದ ದರದಲ್ಲೂ ಲಭ್ಯವಿದ್ದು, ರೂ.71,000 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 102 ಸಿಸಿ ಏರ್-ಕೂಲ್ಡ್ ಪೆಟ್ರೋಲ್ ಎಂಜಿನ್ ಹಾಗೂ 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 75 ರಿಂದ 90 ಕಿ.ಮೀ ವರೆಗೂ ಮೈಲೇಜ್ ಕೊಡುತ್ತದೆ.

ಈ ಮೋಟಾರ್‌ಸೈಕಲ್ ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಎಲೆಕ್ಟ್ರಿಕ್ ಸ್ಟಾರ್ಟರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. 117 ಕೆಜಿ ತೂಕವಿದ್ದು, 11 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಪಡೆದಿದೆ. 70 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಸಿಬಿಎಸ್ (ಕಂಬೈನ್ಡ್ ಬ್ರೇಕ್ ಸಿಸ್ಟಮ್) ಮತ್ತು ಡ್ರಮ್ ಬ್ರೇಕ್‌ಗಳನ್ನು ಕೂಡ ತನ್ನದಾಗಿಸಿಕೊಂಡಿದೆ.
ಬಜಾಜ್ ಪಲ್ಸರ್ 125 (Bajaj Pulsar 125):
ಇದು ಗರಿಷ್ಠ ಮೈಲೇಜ್ ನೀಡುವುದಕ್ಕೆ ಹೆಸರುವಾಸಿಯಾಗಿದ್ದು, ಬಹುಮುಖ್ಯವಾಗಿ ದೇಶದ ಯುವಕರನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿಪಡಿಸಲಾಗಿದೆ. ಅದಕ್ಕೆ ತಕ್ಕಂತೆ ಬಜೆಟ್ ಬೆಲೆಯಲ್ಲಿಯೂ ಸಿಗಲಿದೆ. ಕನಿಷ್ಠ ರೂ.86,000 ಹಾಗೂ ಗರಿಷ್ಠ ರೂ.95,000 (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಮನೆಗೆ ತರಬಹುದು.

ನೂತನ ಪಲ್ಸರ್ ಮೋಟಾರ್‌ಸೈಕಲ್ 124.4 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ & 5-ಸ್ವೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 51 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಫುಲ್ - ಡಿಜಿಟಲ್ ಕನ್ಸೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.
ಹೋಂಡಾ ಶೈನ್ 100 (Honda Shine 100):
ಈ ಬೈಕ್ ವಿನ್ಯಾಸಕ್ಕೆ ಗ್ರಾಹಕರು ಮಾರುಹೋಗಿದ್ದಾರೆ. ರೂ.68,000 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 98.98 ಸಿಸಿ ಪೆಟ್ರೋಲ್ ಎಂಜಿನ್ & 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 65 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. ಟ್ವಿನ್ ಪಾಡ್ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ಸೈಡ್-ಸ್ಟ್ಯಾಂಡ್ ಸೆನ್ಸರ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳಿದ್ದು, ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

ಹೀರೋ ಸ್ಪ್ಲೆಂಡರ್ ಪ್ಲಸ್ (Hero Splendor Plus):
ಇದು ಸತತ 2 ದಶಕಗಳಿಂದಲೂ ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ರೂ.79,000 ದಿಂದ ರೂ.83,000 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 97.2 ಸಿಸಿ ಏರ್-ಕೂಲ್ಡ್, ಸಿಂಗಲ್-ಸಿಲಿಂಡರ್ ಪೆಟ್ರೋಲ್ ಮತ್ತು 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 73 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ಟಿವಿಎಸ್ ಸ್ಪೋರ್ಟ್ (TVS Sport):
ಈ ಬೈಕ್ ವಿಶ್ವಾಸಾರ್ಹತೆಗೆ ಹೆಸರುವಾಸಿಯಾಗಿದ್ದು, ರೂ.69 522 (ಎಕ್ಸ್-ಶೋರೂಂ) ದರವಿದೆ. 109.7 ಸಿಸಿ-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಮತ್ತು 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 70 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. ಬಲ್ಬ್ ಟೈಪ್ ಹೆಡ್‌ಲೈಟ್, ಎಲ್‌ಇಡಿ ಡಿಆರ್‌ಎಲ್‌ಗಳು ಹಾಗೂ ಸೆಲ್ಫ್ ಸ್ಟಾರ್ಟ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.


Click it and Unblock the Notifications