99,000.. 59 ಕಿ.ಮೀ ಮೈಲೇಜ್.. ಜನಪ್ರಿಯ ಹೀರೋ ಡೆಸ್ಟಿನಿ 125ಗೆ ಬದಲಿ ಆಯ್ಕೆಯಾಗಬಲ್ಲ 3 ಸ್ಕೂಟರ್‌ಗಳಿವು!

ಹೀರೋ ಡೆಸ್ಟಿನಿ 125 (Hero Destini 125) ಪ್ರಮುಖ ಸ್ಕೂಟರ್ ಆಗಿದ್ದು, ರೂ.99,000 ರಿಂದ ರೂ.1.13 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 124 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಪಡೆದಿದ್ದು, 59 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಡಿಜಿಟಲ್ ಡಿಸ್‌ಪ್ಲೇ, ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಬೂಟ್ ಲ್ಯಾಂಪ್ ಮತ್ತು ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸವಾರರ ರಕ್ಷಣೆಗಾಗಿ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ. ನೀವು 'ಡೆಸ್ಟಿನಿ 125' ಪರ್ಯಾಯವಾಗಿ ಈ 6 ಸ್ಕೂಟರ್‌ಗಳನ್ನು ಕೂಡ ಖರೀದಿ ಮಾಡಬಹುದು. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಟಿವಿಎಸ್ ಜುಪಿಟರ್ 125 (TVS Jupiter 125):

ಇದು ಜನಪ್ರಿಯ ಸ್ಕೂಟರ್ ಆಗಿದ್ದು, 'ಹೀರೋ ಡೆಸ್ಟಿನಿ 125'ಗೆ ಬದಲಾಗಿ ತೆಗೆದುಕೊಳ್ಳಬಹುದು. ಅದಕ್ಕೆ ತಕ್ಕಂತೆ ರೂ.1.11 ಲಕ್ಷದಿಂದ ರೂ.1.24 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 124 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 57 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ಯುಎಸ್‌‍ಬಿ ಚಾರ್ಜಿಂಗ್ ಸಾಕೆಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

Best 6 Alternative scooters for Hero Destini 125 Jupiter Activa Access Fascino Dio QC1

ಹೋಂಡಾ ಆಕ್ಟಿವಾ 125 (Honda Activa 125):

ಈ ಸ್ಕೂಟರ್‌ನ್ನು 'ಡೆಸ್ಟಿನಿ'ಗೆ ಪರ್ಯಾಯವಾಗಿ ಕೊಂಡುಕೊಳ್ಳಬಹುದು. ಇದು ರೂ.1.22 ಲಕ್ಷದಿಂದ ರೂ.1.33 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 123 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 47 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಟಿಎಫ್‌ಟಿ ಕನ್ಸೋಲ್ ಮತ್ತು ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

ಸುಜುಕಿ ಆಕ್ಸೆಸ್ 125 (Suzuki Access 125):

ಇದನ್ನು ಸಹ 'ಹೀರೋ ಡೆಸ್ಟಿನಿ 125'ಗೆ ಬದಲಾಗಿ ಮನೆಗೆ ತರಬಹುದು. ಈ ಸ್ಕೂಟರ್ ರೂ.87,000 ರಿಂದ 98,000 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 124 ಸಿಸಿ ಪೆಟ್ರೋಲ್ ಎಂಜಿನ್‌ ಒಳಗೊಂಡಿದ್ದು, 47 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಹಾಗೂ ಸ್ಮಾರ್ಟ್‌ಫೋನ್ ಕನೆಕ್ಟಿವಿಟಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

Best 6 Alternative scooters for Hero Destini 125 Jupiter Activa Access Fascino Dio QC1

ಯಮಹಾ ಫ್ಯಾಸಿನೊ 125 (Yamaha Fascino 125):

ಇದು ಪ್ರಖ್ಯಾತ ಸ್ಕೂಟರ್ ಆಗಿದ್ದು, 'ಡೆಸ್ಟಿನಿ 125'ಗೆ ಪರ್ಯಾಯವಾಗಿ ಖರೀದಿ ಮಾಡಬಹುದು. ಅದಕ್ಕೆ ಅನುಗುಣವಾಗಿ ರೂ.1.01 ಲಕ್ಷದಿಂದ ರೂ.1.21 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 125 ಸಿಸಿ ಎಂಜಿನ್ ಪಡೆದಿದ್ದು, 68 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಪ್ಯಾನೆಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

Best 6 Alternative scooters for Hero Destini 125 Jupiter Activa Access Fascino Dio QC1

ಹೋಂಡಾ ಡಿಯೋ 125 (Honda Dio 125):

ಈ ಸ್ಕೂಟರ್‌ನ್ನು 'ಡೆಸ್ಟಿನಿ'ಗೆ ಬದಲಾಗಿ ತೆಗೆದುಕೊಳ್ಳಬಹುದು. ಇದು ರೂ.1.16 ಲಕ್ಷದಿಂದ ರೂ.1.29 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 123 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 48 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

Best 6 Alternative scooters for Hero Destini 125 Jupiter Activa Access Fascino Dio QC1

ಹೋಂಡಾ ಕ್ಯೂಸಿ1 (Honda QC1):

ಇದೊಂದು ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ. ಆದರೂ 'ಹೀರೋ ಡೆಸ್ಟಿನಿ 125'ಗೆ ಪರ್ಯಾಯವಾಗಿ ಕೊಂಡುಕೊಳ್ಳಬಹುದು. ಈ ಸ್ಕೂಟರ್ 90,000 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಹೊಂದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 80 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಎಲ್‌ಸಿಡಿ ಡಿಸ್‌ಪ್ಲೇ, ಅನಲಾಗ್ ಕೀ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

Best 6 Alternative scooters for Hero Destini 125 Jupiter Activa Access Fascino Dio QC1

ಒಟ್ಟಾರೆಯಾಗಿ ಈ ಸ್ಕೂಟರ್‌ಗಳು ಒಂದಕ್ಕಿಂತ ಒಂದು ಚೆನ್ನಾಗಿದ್ದು, ಸಾಕಷ್ಟು ಅತ್ಯಾಧುನಿಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದಿವೆ. ಜೊತೆಗೆ ಕೈಗೆಟುಕುವ ಬೆಲೆಯಲ್ಲಿಯೂ ಕೂಡ ಗ್ರಾಹಕರ ಖರೀದಿಗೆ ಲಭ್ಯವಿವೆ.. ಇವುಗಳಲ್ಲಿ 'ಹೀರೋ ಡೆಸ್ಟಿನಿ 125'ಗೆ ಬದಲಾಗಿ ನೀವು ಯಾವ ಸ್ಕೂಟರ್‌ನ್ನು ಖರೀದಿಸುವಿರಿ ಎಂಬುದನ್ನು ಕಾಮೆಂಟ್ ಮಾಡಿ ತಿಳಿಸಿರಿ.

Article Published On: Tuesday, June 17, 2025, 15:07 [IST]
English summary
Best 6 alternative scooters for hero destini 125 jupiter activa access fascino dio qc1
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+