ದಿನಾಲೂ ಕೆಲಸಕ್ಕೆ ಹೋಗಬೇಕೇ.. ಬೆಸ್ಟ್ ಮೈಲೇಜ್‌ನ 7 ಬೈಕ್‌ಗಳಿವು, ಬೆಲೆಯೂ ತುಂಬಾ ಕಡಿಮೆ!

ಪ್ರತಿನಿತ್ಯ ಕಚೇರಿ ಕೆಲಸಕ್ಕೆ ತೆರಳುವವರಿಗೆ ಮೋಟಾರ್‌ಸೈಕಲ್‌ಗಳು ತೀರಾ ಅನಿವಾರ್ಯವಾಗಿವೆ. ಆದರೆ, ಹಲವರಿಗೆ ಯಾವ ಬೈಕ್ ತೆಗೆದುಕೊಂಡರೆ ಹೆಚ್ಚು ಒಳಿತು. ಅದು ದೀರ್ಘಕಾಲ ಬಾಳಿಕೆ ಬರುತ್ತದೆಯೇ.. ಬಜೆಟ್ ಬೆಲೆಯಲ್ಲಿ ಸಿಗುತ್ತಾ.. ಗರಿಷ್ಠ ಮೈಲೇಜ್ ನೀಡುತ್ತದೆಯೇ ಎಂಬಿತ್ಯಾದಿ ಗೊಂದಲಗಳಿರುತ್ತವೆ. ನಾವಿಲ್ಲಿ ದಿನಬಳಕೆಗೆ ಹೆಚ್ಚು ಸೂಕ್ತವಾರುವುದರೊಂದಿಗೆ ಜಾಸ್ತಿ ಮೈಲೇಜ್ ಕೊಡಬಲ್ಲ 7 ಪ್ರಮುಖ ಮೋಟಾರ್‌ಸೈಕಲ್‌ಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.

ಮೊದಲಿಗೆ ಬಜಾಜ್ ಸಿಟಿ110ಎಕ್ಸ್ (Bajaj CT 110X) ಬೈಕ್ ಬಗ್ಗೆ ಮಾತನಾಡೋಣ. ಇದು ಅತ್ಯಂತ ಕಡಿಮೆ ಬೆಲೆಯಲ್ಲಿ ಖರೀದಿಗೆ ದೊರೆಯಲಿದ್ದು, ಬಡ ಹಾಗೂ ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಈ ಮೋಟಾರ್‌ಸೈಕಲ್‌, ರೂ.70,000 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 115.45 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಹೊಂದಿದ್ದು, 70 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Best 7 Mileage Bikes CT 110X Platina Passion Xtreme Pulsar SP 125 Shine

ಬಜಾಜ್ ಪ್ಲಾಟಿನಾ 110 (Bajaj Platina 110) ಕೂಡ ಜನಪ್ರಿಯ ಮೋಟಾರ್‌ಸೈಕಲ್‌ ಆಗಿದ್ದು, ಭಾರೀ ಅಗ್ಗದ ದರದಲ್ಲಿ ಖರೀದಿಗೆ ಲಭ್ಯವಿದೆ. ಇದು ರೂ.71,000 ರಿಂದ 74,000 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಈ ಮೋಟಾರ್‌ಸೈಕಲ್‌ ಬೆಲೆಗೆ ತಕ್ಕಂತೆ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. 115.45 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದ್ದು, 70 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಹೀರೋ ಪ್ಯಾಶನ್ ಪ್ಲಸ್ (Hero Passion Plus) ಬೈಕ್ ಕುರಿತಂತೆ ಹೇಳುವುದಾದರೆ, ಇದು ರೂ.79,000 ರಿಂದ ರೂ.81,000 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 97.2 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಹೊಂದಿದ್ದು, 70 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಡಿಜಿಟಲ್ ಅನಲಾಗ್ ಕ್ಲಸ್ಟರ್ ಮತ್ತು ಮೊಬೈಲ್ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Best 7 Mileage Bikes CT 110X Platina Passion Xtreme Pulsar SP 125 Shine

ಹೀರೋ ಎಕ್ಸ್‌ಟ್ರೀಮ್ 125ಆರ್ (Hero Xtreme 125R) ಮೋಟಾರ್‌ಸೈಕಲ್‌ ಬಗ್ಗೆ ತಿಳಿಯುವುದಾದರೆ, ಈ ಬೈಕ್ ರೂ.98,000 ರಿಂದ ರೂ.1.06 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 124.7 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದ್ದು, 66 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಸವಾರರ ರಕ್ಷಣೆಗಾಗಿ ಡಿಸ್ಕ್ ಬ್ರೇಕ್ ಆಯ್ಕೆಯನ್ನು ಹೊಂದಿದೆ.

ಬಜಾಜ್ ಪಲ್ಸರ್ ಎನ್ಎಸ್ 125 (Bajaj Pulsar NS 125) ಸಹ ಪ್ರಖ್ಯಾತ ಬೈಕ್ ಎಂದೇ ಹೆಸರುವಾಸಿಯಾಗಿದೆ. ಇದು ರೂ.1.12 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಖರೀದಿಗೆ ದೊರೆಯುತ್ತದೆ. 124.45 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದ್ದು, 64.75 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Best 7 Mileage Bikes CT 110X Platina Passion Xtreme Pulsar SP 125 Shine

ಹೋಂಡಾ ಎಸ್‌ಪಿ 125 (Honda SP 125) ಮೋಟಾರ್‌ಸೈಕಲ್‌ ಕುರಿತಂತೆ ಮಾತನಾಡುವುದಾದರೆ, ಇದು ಅತಿ ಕಡಿಮೆ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ರೂ.89,000 ರಿಂದ ರೂ.99,999 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 123.94 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 60 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಕಡೆಯದಾಗಿ ಹೋಂಡಾ ಶೈನ್ 100 (Honda Shine 100) ಬೈಕ್ ಬಗ್ಗೆ ಹೇಳುವುದಾದರೆ, ಈ ಮೋಟಾರ್‌ಸೈಕಲ್‌ ರೂ.68,600 ರಿಂದ ರೂ.70,521 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 98.98 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದ್ದು, 55 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಟ್ವಿನ್-ಪಾಡ್ ಇನ್ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, May 9, 2025, 8:30 [IST]
English summary
Best 7 mileage bikes ct 110x platina passion xtreme pulsar sp 125 shine
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+