ನೋಡ್ ಶಿವ.. ದಿನಬಳಕೆಗೆ ಈ ಬೈಕ್‌ಗಳು ಹೆಚ್ಚು ಸೂಕ್ತ.. ಬೆಲೆಯೂ ಅಗ್ಗ, ಟಾಪ್ ಮೈಲೇಜ್!

ಪ್ರತಿಯೊಬ್ಬರಿಗೂ ದಿನನಿತ್ಯದ ಬಳಕೆಗಾಗಿ ದ್ವಿಚಕ್ರ ವಾಹನಗಳು ತೀರಾ ಅನಿವಾರ್ಯವಾಗಿವೆ. ಅದರಲ್ಲೂ ಕೆಲಸಕ್ಕೆ ಹೋಗುವವರಿಗೆ ಬೈಕ್‌ಗಳು ಬೇಕೇ ಬೇಕು. ಆದರೆ, ಬಹುತೇಕರಿಗೆ ಯಾವ ಮೋಟಾರ್‌ಸೈಕಲ್‌ನ್ನು ತೆಗೆದುಕೊಂಡಿರೆ ಒಳಿತು.. ಅದು ದೀರ್ಘಕಾಲ ಬಾಳಿಕೆ ಬರುತ್ತದೆ ಎಂಬ ಹಲವು ಗೊಂದಲವಿರುತ್ತದೆ. ನೀವು ಹೊಚ್ಚ ಹೊಸ ಬೈಕ್‌ವೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, ಹೋಂಡಾ ಲಿವೋ, ಹೀರೋ ಗ್ಲಾಮರ್, ಟಿವಿಎಸ್ ರೇಡಿಯನ್, ಹೋಂಡಾ ಸಿಡಿ 110 ಡ್ರೀಮ್ ಹಾಗೂ ಬಜಾಜ್ ಸಿಟಿ 110 ಎಕ್ಸ್ ಮಾಡೆಲ್‌ಗಳು ಹೆಚ್ಚು ಸೂಕ್ತವಾಗಲಿವೆ. ಬನ್ನಿ.. ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ.

ಹೋಂಡಾ ಲಿವೋ (Honda Livo): ಈ ಮೋಟಾರ್‌ಸೈಕಲ್‌ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಸಿಗಲಿದ್ದು, ರೂ.82,951 ರಿಂದ 86,951 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಇದರಿಂದ ಮಧ್ಯಮ ವರ್ಗದ ಜನರು ಕೂಡ ಸುಲಭವಾಗಿ ಕೊಂಡುಕೊಳ್ಳಬಹುದು. ನೂತನ ಬೈಕ್ ಪರ್ಲ್ ಇಗ್ನಿಯಸ್ ಬ್ಲ್ಯಾಕ್ ಮತ್ತು ಪರ್ಲ್ ಸೈರನ್ ಬ್ಲ್ಯೂ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ.

Best Bikes For Day-To-Day Use Livo Glamour Radeon cd 110 dream CT 110X

ಹೊಸ ಹೋಂಡಾ ಲಿವೋ ಬೈಕ್ 109.51 ಸಿಸಿ ಒಬಿಡಿ-2ಬಿ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 7,500 ಆರ್‌ಪಿಎಂನಲ್ಲಿ 8.68 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 5,500 ಆರ್‌ಪಿಎಂನಲ್ಲಿ 9.30 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 4-ಸ್ಪೀಡ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿದೆ. 70 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಈ ಮೋಟಾರ್‌ಸೈಕಲ್‌ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್‌, ಎಂಜಿನ್ ಸ್ಟಾರ್ಟ್/ಸ್ಟಾಪ್ ಸ್ವಿಚ್ ಹಾಗೂ ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) ಡುಯಲ್-ಸ್ಪ್ರಿಂಗ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

Best Bikes For Day-To-Day Use Livo Glamour Radeon cd 110 dream CT 110X

ಹೀರೋ ಗ್ಲಾಮರ್ (Hero Glamour): ಇದು ಕೂಡ ಜನಪ್ರಿಯ ಬೈಕ್ ಆಗಿದೆ. ರೂ83,765 ರಿಂದ ರೂ.89,079 (ಎಕ್ಸ್-ಶೋರೂಂ) ದರದಲ್ಲಿ ಸಿಗುತ್ತದೆ. ಡ್ರಮ್ ಬ್ರೇಕ್ & ಡಿಸ್ಕ್ ಬ್ರೇಕ್ ಎಂಬ ರೂಪಾಂತರಗಳನ್ನು (ವೇರಿಯೆಂಟ್) ಹೊಂದಿದೆ. ಕ್ಯಾಂಡಿ ಬ್ಲೇಜಿಂಗ್ ರೆಡ್, ಟೆಕ್ನೋ ಬ್ಲೂ-ಬ್ಲಾಕ್ ಮತ್ತು ಸ್ಪೋರ್ಟ್ಸ್ ರೆಡ್-ಬ್ಲಾಕ್ ಎಂಬ ಬಣ್ಣಗಳನ್ನು ಪಡೆದಿದೆ.

ಈ ಹೊಸ ಮೋಟಾರ್‌ಸೈಕಲ್‌ 124.7 ಸಿಸಿ ಸಾಮರ್ಥ್ಯದ ಸಿಂಗಲ್-ಸಿಲಿಂಡರ್, ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 10.72 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 10.6 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದ್ದು, 55 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Best Bikes For Day-To-Day Use Livo Glamour Radeon cd 110 dream CT 110X

ನೂತನ ಹೀರೋ ಗ್ಲಾಮರ್ ಬೈಕ್ ಡಿಜಿಟಲ್ ಇನ್‌ಸ್ಟ್ರುಮೆಂಟೇಶನ್ ಸ್ಕ್ರೀನ್, ಸ್ಮಾರ್ಟ್‌ಫೋನ್ ಚಾರ್ಜಿಂಗ್ ಪೋರ್ಟ್ ಮತ್ತು ಐಡಲ್ ಸ್ಟಾರ್ಟ್-ಸ್ಟಾಪ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್ ಮತ್ತು ಹಿಂಭಾಗ (ರೇರ್) ಟ್ವಿನ್ ಶಾಕ್ ಅಬ್ಸಾರ್ಬರ್‌ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಸುರಕ್ಷತೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ಟಿವಿಎಸ್ ರೇಡಿಯನ್ (TVS Radeon): ಈ ಬೈಕ್ ಭಾರೀ ಕಡಿಮೆ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಇದು ರೂ.75274 ರಿಂದ 84518 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಇದರೊಂದಿಗೆ ಆಕರ್ಷಕ ಬಣ್ಣಗಳೊಂದಿಗೂ ಸಿಗಲಿದ್ದು, ಸ್ಟಾರ್‌ಲೈಟ್ ಬ್ಲೂ, ಮೆಟಲ್ ಬ್ಲ್ಯಾಕ್ & ಟೈಟಾನಿಯಂ ಗ್ರೇ ಎಂಬ ಬಣ್ಣಗಳನ್ನು ಪಡೆದಿದೆ.

Best Bikes For Day-To-Day Use Livo Glamour Radeon cd 110 dream CT 110X

ಹೊಸ ರೇಡಿಯನ್ ಮೋಟಾರ್‌ಸೈಕಲ್‌ 109.7 ಸಿಸಿ ಸಿಂಗಲ್-ಸಿಲಿಂಡರ್ ಸಾಮರ್ಥ್ಯದ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 8.08 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 8.7 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಜೊತೆಗೆ 73.68 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್‌ನಂತಹ ಹಲವು ವೈಶಿಷ್ಟ್ಯಗಳಿವೆ.

ಹೋಂಡಾ ಸಿಡಿ 110 ಡ್ರಿಮ್ (Honda CD 110 Dream): ಇದೊಂದು ಅಗ್ಗದ ಬೈಕ್ ಆಗಿದೆ. ರೂ.76,401 (ಎಕ್ಸ್-ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಬ್ಲ್ಯಾಕ್ ವಿತ್ ಬ್ಲೂ, ಬ್ಲ್ಯಾಕ್ ವಿತ್ ರೆಡ್, ಬ್ಲ್ಯಾಕ್ ವಿತ್ ಗ್ರೀನ್ ಮತ್ತು ಬ್ಲ್ಯಾಕ್ ವಿತ್ ಗ್ರೇ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ಈ ಮೋಟಾರ್‌ಸೈಕಲ್‌ 109. 51 ಸಿಸಿ ಏರ್-ಕೋಲ್ಡ್, ಫ್ಯುಯೆಲ್-ಇಂಜೆಕ್ಟ್ದ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 7500 ಆರ್‌ಪಿಎಂನಲ್ಲಿ 8.7 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 5500 ಆರ್‌ಪಿಎಂನಲ್ಲಿ 9.30 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 65 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ನೂತನ ಹೋಂಡಾ ಸಿಡಿ 110 ಡ್ರಿಮ್ ಬೈಕ್ ಅನಲಾಗ್ ಇನ್ಸ್ಟ್ರುಮೆಂಟ್ ಸೆಟಪ್, ಸ್ಟಾರ್ಟ್/ ಸ್ಟಾಪ್ ಸ್ವಿಚ್ ಹಾಗೂ ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸವಾರರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ. ಈ ಬೈಕ್ ಸರಿ ಸುಮಾರು 112 ಕೆಜಿ ತೂಕವಿದ್ದು, 9.1 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ.

ಬಜಾಜ್ ಸಿಟಿ 110 ಎಕ್ಸ್ (Bajaj CT 110X): ಈ ಬೈಕ್ ರೂ.70,381 (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಇದು ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಮ್ಯಾಟ್ ವೈಲ್ಡ್ ಗ್ರೀನ್, ಎಬೊನಿ ಬ್ಲ್ಯಾಕ್-ರೆಡ್ ಹಾಗೂ ಎಬೊನಿ ಬ್ಲ್ಯಾಕ್-ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ಹೊಸ ಬಜಾಜ್ ಸಿಟಿ 110 ಎಕ್ಸ್ ಮೋಟಾರ್‌ಸೈಕಲ್‌ 115.45 ಸಿಸಿ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಹೊಂದಿದೆ. 7000 ಆರ್‌ಪಿಎಂನಲ್ಲಿ 8.6 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 5000 ಆರ್‌ಪಿಎಂನಲ್ಲಿ 9.81ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 70 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಈ ಬೈಕ್ 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಟ್ವಿನ್ ಪಾಡ್ ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಕ್ರ್ಯಾಶ್ ಗಾರ್ಡ್, ಗೈಟರ್ಡ್ ಫೋರ್ಕ್, ಮೆಟಲ್ ಬೆಲ್ಲಿ ಪ್ಯಾನ್, ಹೆಡ್‌ಲೈಟ್ ಗಾರ್ಡ್ ಮತ್ತು ರಬ್ಬರ್ ಟ್ಯಾಂಕ್ ಪ್ಯಾಡ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) ಟ್ವಿನ್ ಶಾಕ್ ಅಬ್ಸಾರ್ಬರ್ ಸೆಟಪ್‌ ಆಯ್ಕೆಯನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, April 14, 2025, 16:45 [IST]
English summary
Best bikes for day to day use livo glamour radeon cd 110 dream ct 110x
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+