ಗ್ರಾಮ & ಪಟ್ಟಣಗಳಿಗೆ ಈ ಎಲೆಕ್ಟ್ರಿಕ್ ಟೂ-ವೀಲರ್‌ಗಳು ಬೆಸ್ಟ್.. 69,000 ಆರಂಭಿಕ ಬೆಲೆ, ಸಖತ್ ರೇಂಜ್!
ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು (Electric Two Wheelers) ನಿಧಾನವಾಗಿ ಪಾರುಪತ್ಯ ಮೆರೆಯುವುದಕ್ಕೆ ಶುರು ಮಾಡಿವೆ. ಗ್ರಾಹಕರು ಕೂಡ ದಿನನಿತ್ಯದ ಬಳಕೆಗಾಗಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಅದರಲ್ಲೂ ಎಲೆಕ್ಟ್ರಿಕ್ ಮೊಪೆಡ್ ಹಾಗೂ ಸ್ಕೂಟರ್‌ಗಳನ್ನು ಎಲ್ಲ ವಯೋಮಾನದ ಜನರು, ಹಳ್ಳಿ ಹಾಗೂ ಪಟ್ಟಣಗಳೆಂಬ ಭೇದಭಾವವಿಲ್ಲದೆ ಸುಲಭವಾಗಿ ಬಳಕೆ ಮಾಡಬಹುದು. ನೀವು ಹೊಚ್ಚ ಹೊಸ ಎಲೆಕ್ಟ್ರಿಕ್ ದ್ವಿಚಕ್ರ ವಾಹನವೊಂದನ್ನು ಖರೀದಿ ಮಾಡಲು ಯೋಚಿಸಿದ್ದೀರಾ.. ಹಾಗಾದರೆ ಕಡಿಮೆ ಬೆಲೆಗೆ ದೊರೆಯುವ ಹೋಂಡಾ ಕ್ಯೂಸಿ1, ಕೈನೆಟಿಕ್ ಇ-ಲೂನಾ, ಹೀರೋ ವಿಡಾ ವಿ2, ಟಿವಿಎಸ್ ಐಕ್ಯೂಬ್, ಬಜಾಜ್ ಚೇತಕ್ ಹಾಗೂ ಎಥರ್ 450ಎಸ್ ಮಾಡೆಲ್‌ಗಳು ಹೆಚ್ಚು ಸೂಕ್ತವಾಗಲಿವೆ.
ಹೋಂಡಾ ಕ್ಯೂಸಿ1 (Honda QC1): ಇದೊಂದು ಪ್ರಮುಖ ಎಲೆಕ್ಟ್ರಿಕ್ ಸ್ಕೂಟರ್ ಆಗಿದ್ದು, ರೂ.90,000 (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ. 1.5 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 80 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ. ಎಲ್‌ಸಿಡಿ ಡಿಸ್‌ಪ್ಲೇ ಮತ್ತು ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಸಾಕೆಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಕೈನೆಟಿಕ್ ಇ-ಲೂನಾ (Kinetic E-Luna): ಇದು ಮೊಪೆಡ್ ಆಗಿದ್ದು, ಹಲವು ವಿಧದಲ್ಲಿ ಖರೀದಿಗೆ ದೊರೆಯುತ್ತದೆ. ಈ ಮೊಪೆಡ್‌ನ ಎಕ್ಸ್2 (X2) ಮಾಡೆಲ್, ರೂ.69,990 (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 2 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಪೂರ್ತಿ ಚಾರ್ಜ್‌ನಲ್ಲಿ 110 ಕಿ.ಮೀ ಓಡುತ್ತದೆ. 50 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ.
ಹೀರೋ ವಿಡಾ ವಿ2 (Hero Vida V2): ಈ ಎಲೆಕ್ಟ್ರಿಕ್ ಸ್ಕೂಟರ್ ವಿವಿಧ ರೂಪದಲ್ಲಿ ಖರೀದಿಗೆ ದೊರೆಯುತ್ತದೆ. ಇದರ ವಿ2 ಲೈಟ್ ಮಾಡೆಲ್, ರೂ.96,000 (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. 2.2 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದ್ದು, ಭರ್ತಿ ಚಾರ್ಜ್‌ನಲ್ಲಿ 94 ಕಿ.ಮೀ ಕ್ರಮಿಸುತ್ತದೆ. 69 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ರೈಡ್ & ಇಕೋ ಎಂಬ ರೈಡಿಂಗ್ ಮೋಡ್‌ಗಳನ್ನು ತನ್ನದಾಗಿಸಿಕೊಂಡಿದೆ.

ಟಿವಿಎಸ್ ಐಕ್ಯೂಬ್ (TVS iQube): ಇದು ಕೂಡ ನಾನಾ ಬಗೆಯ ಆಯ್ಕೆಯಲ್ಲಿ ಗ್ರಾಹಕರಿಗೆ ದೊರೆಯುತ್ತದೆ. ಈ ಎಲೆಕ್ಟ್ರಿಕ್ ಸ್ಕೂಟರ್‌ನ 2.2 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಹೊಂದಿರುವ ಮಾಡೆಲ್, ರೂ.1.07 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 75 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ. ಜೊತೆಗೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.
ಬಜಾಜ್ ಚೇತಕ್ (Bajaj Chetak): ಈ ಎಲೆಕ್ಟ್ರಿಕ್ ಸ್ಕೂಟರ್ ಸಹ ಹಲವು ವಿಧದಲ್ಲಿ ಲಭ್ಯವಾಗುತ್ತದೆ. ಇದರ '2903' ಮಾಡೆಲ್, ರೂ.1.10 ರಿಂದ ರೂ.1.14 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 2.88 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಪಡೆದಿದ್ದು, ಪೂರ್ತಿ ಚಾರ್ಜ್‌ನಲ್ಲಿ 123 ಕಿ.ಮೀ ಓಡುತ್ತದೆ. 63 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ.

ಎಥರ್ 450ಎಸ್ (Ather 450S): ಈ ಎಲೆಕ್ಟ್ರಿಕ್ ಸ್ಕೂಟರ್ ರೂ.1.29 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 2.9 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 122 ಕಿ.ಮೀ ಕ್ರಮಿಸುತ್ತದೆ. ಕಲರ್-ಎಲ್‌ಸಿಡಿ ಸ್ಕ್ರೀನ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications