1 ಲೀ.ಗೆ 65 ರಿಂದ 90 ಕಿ.ಮೀವರೆಗೆ ಮೈಲೇಜ್: ಕೇವಲ 56 ಸಾವಿರದಿಂದ ಶುರು, 5 ಜನಪ್ರಿಯ 100 ಸಿಸಿ ಬೈಕ್‌ಗಳು!
ಭಾರತದಲ್ಲಿ 100 ಸಿಸಿ ಸಾಮರ್ಥ್ಯದ ಬೈಕ್‌ಗಳು, ಕೈಗೆಟುಕುವ ಬೆಲೆ ಹಾಗೂ ಭರ್ಜರಿ ಮೈಲೇಜ್ ನೀಡುವುದಕ್ಕೆ ಹೆಸರುವಾಸಿಯಾಗಿವೆ. ನೀವು ದಿನಬಳಕೆಗೆ ಹೊಚ್ಚ ಹೊಸ ಮೋಟಾರ್‌ಸೈಕಲ್‌ವೊಂದನ್ನು ಕೊಂಡುಕೊಳ್ಳಲು ಆಲೋಚಿಸಿದ್ದೀರಾ.. ಹಾಗಾದರೆ ಈ ವಿಭಾಗದಲ್ಲಿ ಖರೀದಿಗೆ ದೊರೆಯುವ ಬಜಾಜ್ ಪ್ಲಾಟಿನಾ 100, ಹೋಂಡಾ ಶೈನ್ 100, ಹೀರೋ ಪ್ಯಾಶನ್ ಪ್ಲಸ್, ಹೀರೋ ಸ್ಪ್ಲೆಂಡರ್ ಪ್ಲಸ್ ಹಾಗೂ ಹೀರೋ ಹೆಚ್ಎಫ್ ಡಿಲಕ್ಸ್ ಮಾಡೆಲ್‌ಗಳು ಬೆಸ್ಟ್ ಚಾಯ್ಸ್ ಆಗಲಿವೆ. ಬನ್ನಿ, ಇವುಗಳ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಬಜಾಜ್ ಪ್ಲಾಟಿನಾ 100 (Bajaj Platina 100):
ಇದು ಜನಪ್ರಿಯ ಬೈಕ್ ಆಗಿ ಹೊರಹೊಮ್ಮಿದೆ. ಅತ್ಯಂತ ಕಡಿಮೆ ಬೆಲೆಗೂ ಲಭ್ಯವಿದೆ. ರೂ.65,407 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಬಡ ಹಾಗೂ ಮಧ್ಯಮ ವರ್ಗದ ಗ್ರಾಹಕರು ಕೂಡ ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ತುಂಬಾ ಸರಳವಾದ ವಿನ್ಯಾಸವನ್ನು ಹೊಂದಿದೆ. ಬ್ಲ್ಯಾಕ್-ರೆಡ್, ಬ್ಲ್ಯಾಕ್-ಸಿಲ್ವರ್, ಬ್ಲ್ಯಾಕ್-ಗೋಲ್ಡ್ ಮತ್ತು ಬ್ಲ್ಯಾಕ್-ಬ್ಲ್ಯೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 200 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,255 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

ನೂತನ 'ಪ್ಲಾಟಿನಾ 100' ಹೆಚ್ಚು ಶಕ್ತಿಶಾಲಿ ಪವರ್‌ಟ್ರೇನ್‌ನ್ನು ಹೊಂದಿದೆ. 102 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 90 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ & ಎಲೆಕ್ಟ್ರಿಕ್ ಸ್ಟಾರ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸವಾರರಿಗೂ ಗರಿಷ್ಠ ಒದಗಿಸುತ್ತದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.
ಹೋಂಡಾ ಶೈನ್ 100 (Honda Shine 100):
ಈ ಮೋಟಾರ್‌ಸೈಕಲ್, ಅಗ್ಗದ ದರದಲ್ಲಿ ಸಿಗುತ್ತದೆ. ರೂ.65,561 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಖರೀದಿ ಮಾಡಬಹುದು. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಆರೆಂಜ್ ವಿತ್ ಬ್ಲ್ಯಾಕ್, ಗ್ರೀನ್ ವಿತ್ ಬ್ಲ್ಯಾಕ್, ಗ್ರೇ ವಿತ್ ಬ್ಲ್ಯಾಕ್, ಬ್ಲ್ಯೂ ವಿತ್ ಬ್ಲ್ಯಾಕ್ & ರೆಡ್ ವಿತ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ. 168 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,245 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

ಹೊಸ 'ಶೈನ್ 100' ಬಲಿಷ್ಠವಾದ ಪವರ್‌ಟ್ರೇನ್‌ನ್ನು ತನ್ನದಾಗಿಸಿಕೊಂಡಿದೆ. 98.98-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 65 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. ಟ್ವಿನ್-ಪಾಡ್ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ಸಿಂಗಲ್-ಪೀಸ್ ಸೀಟ್‌ನಂತಹ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.
ಹೀರೋ ಪ್ಯಾಶನ್ ಪ್ಲಸ್ (Hero Passion Plus):
ಇದು ವಿಶ್ವಾಸಾರ್ಹ ಬೈಕ್ ಆಗಿದ್ದು, ಕೈಗೆಟುಕುವ ಬೆಲೆಯಲ್ಲಿ ದೊರೆಯುತ್ತದೆ. ರೂ.76,691 ರಿಂದ ರೂ.78,074 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 97.2 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 60 ರಿಂದ 70 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಅನಲಾಗ್ ಕ್ಲಸ್ಟರ್ & ಇಂಟಿಗ್ರೇಟೆಡ್ ಬ್ರೇಕಿಂಗ್ ಸಿಸ್ಟಮ್ ಸೇರಿದಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ಹೊಂದಿದೆ. ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

ಹೀರೋ ಸ್ಪ್ಲೆಂಡರ್ ಪ್ಲಸ್ (Hero Splendor Plus):
ಈ ಮೋಟಾರ್‌ಸೈಕಲ್‌ನ್ನು ದಶಕಗಳಿಂದ ಶ್ರೀಸಾಮಾನ್ಯರು ಮೆಚ್ಚಿಕೊಂಡಿದ್ದಾರೆ. ರೂ.73,902 ರಿಂದ ರೂ.76,437 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 97.2 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 70 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಹಾಗೂ ಬ್ಲೂಟೂತ್ ಕನೆಕ್ಟಿವಿಟಿಯಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಡಿಸ್ಕ್ & ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಹೀರೋ ಹೆಚ್ಎಫ್ ಡಿಲಕ್ಸ್ (Hero HF Deluxe):
ಇದೊಂದು ನಂಬಿಕಾರ್ಹ ಬೈಕ್ ಆಗಿದೆ. ರೂ.55,992 ರಿಂದ ರೂ.68,485 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 97.2-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 70 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟೋ ಗಾರ್ಡ್, ಐಡಲ್ ಸ್ಟಾಪ್-ಸ್ಟಾರ್ಟ್ ಸಿಸ್ಟಮ್ ಹಾಗೂ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.


Click it and Unblock the Notifications








