ಬಡವರು ತೆಗೆದುಕೊಳ್ಳಬಹುದು: ಇವೇ 5 ಜನಪ್ರಿಯ 125 ಸಿಸಿ ಸ್ಕೂಟರ್‌ಗಳು.. 64 ಕಿ.ಮೀವರೆಗೆ ಮೈಲೇಜ್.. ಬೆಲೆಯೂ ಕಮ್ಮಿ!

ದೇಶದಲ್ಲಿ ಸ್ಕೂಟರ್‌ಗಳಿಗೆ ಹೆಚ್ಚಿನ ಬೇಡಿಕೆಯಿದೆ. ಇವು ದಿನಬಳಕೆಗೆ ಹೆಚ್ಚು ಸೂಕ್ತವಾಗಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ನೀವು ಹೊಚ್ಚ ಹೊಸ 125 ಸಿಸಿ ಸ್ಕೂಟರ್‌ವೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, ಹೋಂಡಾ ಆಕ್ಟಿವಾ 125, ಟಿವಿಎಸ್ ಎನ್‌ಟಾರ್ಕ್ 125, ಸುಜುಕಿ ಆಕ್ಸೆಸ್ 125, ಹೀರೋ ಡೆಸ್ಟಿನಿ 125 ಹಾಗೂ ಟಿವಿಎಸ್ ಜುಪಿಟರ್ 125ಗಳು ಅತ್ಯುತ್ತಮ ಆಯ್ಕೆಯಾಗಲಿವೆ. ಬನ್ನಿ, ಈ ಸ್ಕೂಟರ್‌ಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಹೋಂಡಾ ಆಕ್ಟಿವಾ 125 (Honda Activa 125):

ಇದು ಜನಮೆಚ್ಚಿನ ಸ್ಕೂಟರ್ ಆಗಿದೆ. ಕೈಗೆಟುಕುವ ದರದಲ್ಲೂ ಖರೀದಿಗೆ ಲಭ್ಯವಿದೆ. ರೂ.89,152 ರಿಂದ 92,796 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಪಡೆದಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಪರ್ಲ್ ಸೈರನ್ ಬ್ಲೂ, ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್, ರೆಬೆಲ್ ರೆಡ್ ಮೆಟಾಲಿಕ್ ಹಾಗೂ ಪರ್ಲ್ ಪ್ರೆಶಿಯಸ್ ವೈಟ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 162 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,260 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

Best Five 125 cc scooters Honda Activa TVS NTORQ Suzuki Access Hero Destini And TVS Jupiter

ನೂತನ 'ಆಕ್ಟಿವಾ 125' ಸ್ಕೂಟರ್, 123.92 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 47 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 4.2 ಇಂಚಿನ ಟಿಎಫ್‌ಟಿ ಕನ್ಸೋಲ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಹಾಗೂ ಐಡಲ್ ಸ್ಟಾರ್ಟ್-ಸ್ಟಾಪ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಟಿವಿಎಸ್ ಎನ್‌ಟಾರ್ಕ್ 125 (TVS NTORQ 125):

ಈ ಸ್ಕೂಟರ್‌ನ್ನು ಎಲ್ಲ ವರ್ಗದ ಖರೀದಿಸಲು ಸಾಧ್ಯವಾಗಲಿದೆ. 86,900 ರಿಂದ 1.03 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೆಚ್ಚು ಅತ್ಯಾಧುನಿಕವಾದ ಸ್ಪೋರ್ಟಿ ವಿನ್ಯಾಸವನ್ನು ಒಳಗೊಂಡಿದೆ. ನಾರ್ಡೊ ಗ್ರೇ, ಹಾರ್ಲೆಕ್ವಿನ್ ಬ್ಲೂ, ಟರ್ಕೋಯಿಸ್ ಬ್ಲೂ, ಬ್ಲೇಜ್ ಬ್ಲೂ, ರೇಸ್ ರೆಡ್, ಡಾರ್ಕ್ ಬ್ಲ್ಯಾಕ್ ಮತ್ತು ನಿಯಾನ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 155 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,285 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

Best Five 125 cc scooters Honda Activa TVS NTORQ Suzuki Access Hero Destini And TVS Jupiter

ಹೊಸ 'ಎನ್‌ಟಾರ್ಕ್ 125' ಸ್ಕೂಟರ್, 124.8 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 48.5 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್, ಬ್ಲೂಟೂತ್ ಕನೆಕ್ಟಿವಿಟಿ, ನ್ಯಾವಿಗೇಷನ್ ಅಸಿಸ್ಟ್ ಹಾಗೂ ಲಾಸ್ಟ್ ಪಾರ್ಕಿಂಗ್ ಲೊಕೇಶನ್ ಅಸಿಸ್ಟ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಕೊಂಡಿದೆ.

ಸುಜುಕಿ ಆಕ್ಸೆಸ್ 125 (Suzuki Access 125):

ಇದೊಂದು ಪ್ರಖ್ಯಾತ ಸ್ಕೂಟರ್ ಆಗಿದೆ. ರೂ.80,572 ರಿಂದ ರೂ.97,166 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 124-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 45 ರಿಂದ 64 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 4.2 ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಮತ್ತು ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್‌ನಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

Best Five 125 cc scooters Honda Activa TVS NTORQ Suzuki Access Hero Destini And TVS Jupiter

ಹೀರೋ ಡೆಸ್ಟಿನಿ 125 (Hero Destini 125):

ಈ ಸ್ಕೂಟರ್‌ನ್ನು ಗ್ರಾಹಕರು ಮೆಚ್ಚಿಕೊಂಡಿದ್ದಾರೆ. ರೂ.83,997 ರಿಂದ ರೂ.84,919 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 124 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 59 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಡಿಸ್‌ಪ್ಲೇ, ಬೂಟ್ ಲ್ಯಾಂಪ್ & ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

ಟಿವಿಎಸ್ ಜುಪಿಟರ್ 125 (TVS Jupiter 125):

ಇದು ಪ್ರಮುಖ ಸ್ಕೂಟರ್ ಆಗಿದೆ. ರೂ.83,250 ರಿಂದ ರೂ.92 250 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 124.8 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 50 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಟರ್ನ್-ಬೈ-ಟರ್ನ್ ನ್ಯಾವಿಗೇಶನ್ ಮತ್ತು ಯುಎಸ್‌‍ಬಿ ಚಾರ್ಜಿಂಗ್ ಸಾಕೆಟ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.

More from DriveSpark

Article Published On: Sunday, December 7, 2025, 19:48 [IST]
English summary
Best five 125 cc scooters honda activa tvs ntorq suzuki access hero destini and tvs jupiter
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+