1 ಲೀಟರ್‌ಗೆ 70 ಕಿ.ಮೀ ಮೈಲೇಜ್.. ಬಂಗಾರದಂತಹ ಬೈಕ್, ತಿಂಗಳಿಗೆ ರೂ.2,000 EMI.. ಆನ್-ರೋಡ್ ಬೆಲೆ ಎಷ್ಟು?
ಬಜಾಜ್ ಸಿಟಿ 110ಎಕ್ಸ್ (Bajaj CT 110X) ಪ್ರಮುಖ ಮೋಟಾರ್‌ಸೈಕಲ್ ಆಗಿದೆ. ಇದು ತುಂಬಾ ಚೆನ್ನಾಗಿರುವ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ರೂ.72,179 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ನೀವು ಹೊಸದೊಂದು ಬೈಕ್ ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, 'ಸಿಟಿ 110ಎಕ್ಸ್' ಅತ್ಯುತ್ತಮವಾದ ಆಯ್ಕೆಯಾಗಲಿದೆ. ನಾವಿಲ್ಲಿ ಈ ಮೋಟಾರ್‌ಸೈಕಲ್‌ನ ಆನ್-ರೋಡ್ ಬೆಲೆ, ಇಎಂಐ, ಕಾರ್ಯಕ್ಷಮತೆ ಮತ್ತು ವೈಶಿಷ್ಟ್ಯಗಳ ಕುರಿತಂತೆ ಎಲ್ಲ ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.
ನೂತನ ಬಜಾಜ್ ಸಿಟಿ 110ಎಕ್ಸ್ ಬೈಕ್ ರೂ.87,711 ವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.2,000 ಡೌನ್-ಪೇಮೆಂಟ್ ಪಾವತಿಸಿ ಖರೀದಿ ಮಾಡಿದರೆ, ರೂ.67,711 ವರೆಗೆ ಸಾಲವಿರುತ್ತದೆ. ಅದಕ್ಕೆ ಶೇಕಡ 6% ಬಡ್ಡಿ ಹಾಕಿ 3 ವರ್ಷಕ್ಕೆ ಮಾಸಿಕ 2,000 ವರೆಗೆ ಇಐಎಂ ಕಟ್ಟಬೇಕು.

ಇದು ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಎಲ್ಇಡಿ ಹೆಡ್‌ಲೈಟ್, ಹ್ಯಾಲೊಜೆನ್ ಟೈಲ್ ಲೈಟ್ ಹಾಗೂ ಇಂಡಿಕೇಟರ್‌ಗಳನ್ನು ಪಡೆದಿದೆ. ಮ್ಯಾಟ್ ವೈಲ್ಡ್ ಗ್ರೀನ್, ಎಬೊನಿ ಬ್ಲ್ಯಾಕ್-ರೆಡ್ ಹಾಗೂ ಎಬೊನಿ ಬ್ಲ್ಯಾಕ್-ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಈ ಮೋಟಾರ್‌ಸೈಕಲ್ 1998 ಎಂಎಂ ಉದ್ದ, 753 ಎಂಎಂ ಅಗಲ ಹಾಗೂ 1098 ಎಂಎಂ ಎತ್ತರವಿದೆ. ಜೊತೆಗೆ 170 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1285 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 127 ಕೆಜಿ ತೂಕವಿದೆ. ಆಸನ ಎತ್ತರವು 810 ಎಂಎಂ ಇದೆ.
ಹೊಸ ಬಜಾಜ್ ಸಿಟಿ 110ಎಕ್ಸ್ ಬೈಕ್ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 115.45 ಸಿಸಿ ಸಿಂಗಲ್-ಸಿಲಿಂಡರ್, ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 7,000 ಆರ್‌ಪಿಎಂನಲ್ಲಿ 8.6 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 5,000 ಆರ್‌ಪಿಎಂನಲ್ಲಿ 9.81 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 70 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 11 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಪಡೆದಿದೆ.
ನೂತನ ಸಿಟಿ 110ಎಕ್ಸ್ ಮೋಟಾರ್‌ಸೈಕಲ್ 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 8 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಇದು ಸ್ಪೀಡೋಮೀಟರ್, ಓಡೋಮೀಟರ್, ಟ್ರಿಪ್ ಮೀಟರ್ ಹೊಂದಿರುವ ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್‌ನ್ನು ಒಳಗೊಂಡಿದೆ.
ಈ ಬಜಾಜ್ ಸಿಟಿ 110ಎಕ್ಸ್ ಮೋಟಾರ್‌ಸೈಕಲ್ ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಪ್ರಿ-ಲೋಡ್ ಅಡ್ಜಸ್ಟೇಬಲ್ ಟ್ವಿನ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಸಿಬಿಎಸ್ (ಕಂಬೈನ್ಡ್ ಬ್ರೇಕಿಂಗ್ ಸಿಸ್ಟಮ್) ಹಾಗೂ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ. 7-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಈ ಬೈಕ್‌ಗೆ ಟಿವಿಎಸ್ ರೇಡಿಯನ್ ಹಾಗೂ ಹೋಂಡಾ ಶೈನ್ 100 ಡಿಎಕ್ಸ್ ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.
ಟಿವಿಎಸ್ ರೇಡಿಯನ್:
ಇದು ರೂ.73,518 ರಿಂದ ರೂ. 86,845 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 109.7 ಸಿಸಿ, ಸಿಂಗಲ್-ಸಿಲಿಂಡರ್, ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 73 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಮೆಟಲ್ ಬ್ಲ್ಯಾಕ್, ಆಲ್ ಬ್ಲ್ಯಾಕ್, ಟೈಟಾನಿಯಂ ಗ್ರೇ, ರಾಯಲ್ ಪರ್ಪಲ್ ಹಾಗೂ ಸ್ಟಾರ್‌ಲೈಟ್ ಬ್ಲ್ಯೂ ಎಂಬ ಬಣ್ಣಗಳನ್ನು ಪಡೆದಿದೆ. ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.
ಹೋಂಡಾ ಶೈನ್ 100 ಡಿಎಕ್ಸ್:
ಈ ಬೈಕ್ ರೂ.74,959 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 98.98 ಸಿಸಿ ಸಿಂಗಲ್-ಸಿಲಿಂಡರ್, ಫ್ಯುಯೆಲ್-ಇಂಜೆಕ್ಟೆಡ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 70 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಎಲ್‌ಸಿಡಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್ ಆಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.


Click it and Unblock the Notifications








