ಆಫೀಸ್‌ಗೆ ತೆರಳುವವರಿಗೆ ಬೆಸ್ಟ್.. 1 ಲೀ. ಪೆಟ್ರೋಲ್‌ಗೆ 90 ಕಿ.ಮೀ ಮೈಲೇಜ್! ಬೆಲೆಯೂ ಅಗ್ಗ, ಈ ಬೈಕ್‌ನ ಹೊಸ ದರವೆಷ್ಟು?

ಬಜಾಜ್ ಪ್ಲಾಟಿನಾ (Bajaj Platina) ಜಗಮೆಚ್ಚಿದ ಬೈಕ್ ಆಗಿದ್ದು, ದಿನಬಳಕೆಗೆ ಹೆಚ್ಚು ಸೂಕ್ತವಾಗಿದೆ. ಸೆ.22 ರಿಂದ ಪರಿಷ್ಕೃತ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರಗಳು ಅಧಿಕೃತವಾಗಿ ಜಾರಿಗೊಂಡಿವೆ. ಇದರ ಸಂಪೂರ್ಣ ಪ್ರಯೋಜನವು 'ಪ್ಲಾಟಿನಾ' ಮೋಟಾರ್‌ಸೈಕಲ್‌ಗೂ ಲಭ್ಯವಿದೆ. ಹಳೆಯ ದರಗಳಿಗೆ ಹೋಲಿಕೆ ಮಾಡಿದರೆ, ಈ ಬೈಕ್ ಬೆಲೆಯೂ ರೂ.5000 ದಷ್ಟು ಇಳಿಕೆಯಾಗಿದೆ. ನಾವಿಲ್ಲಿ ಈ ಮೋಟಾರ್‌ಸೈಕಲ್‌ನ ಹೊಸ 'ಎಕ್ಸ್-ಶೋರೂಂ' ದರ ಎಷ್ಟಾಗಿದೆ ಎಂಬುದರ ಕುರಿತಂತೆ ಸಂಪೂರ್ಣವಾಗಿ ತಿಳಿಸಿಕೊಟ್ಟಿದ್ದೇವೆ.

ನೂತನ 'ಬಜಾಜ್ ಪ್ಲಾಟಿನಾ' ಎರಡು ವಿಧದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಪ್ಲಾಟಿನಾ 100 ರೂ.65,407 ಮತ್ತು ಪ್ಲಾಟಿನಾ 110 ರೂ.69,284 (ಎಕ್ಸ್-ಶೋರೂಂ - ನವದೆಹಲಿ) ದರವನ್ನು ಪಡೆದಿದ್ದು, ಬಡ ಹಾಗೂ ಮಧ್ಯಮ ವರ್ಗದ ಖರೀದಿದಾರರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ.

Best Mileage Bike Bajaj Platina New Ex-Showroom Price Details

ಬಜಾಜ್ ಪ್ಲಾಟಿನಾ 100 (Bajaj Platina 100) ವಿಶೇಷತೆಗಳೇನು:

ಈ ಬೈಕ್ ತುಂಬಾ ಅಚ್ಚುಕಟ್ಟಾದ ಸರಳವಾದ ವಿನ್ಯಾಸವನ್ನು ಹೊಂದಿದ್ದು, ನೋಡುಗರ ಸೆಳೆಯುವಂತಿದೆ. ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಎಲ್ಇಡಿ ಟೈಲ್ ಲ್ಯಾಂಪ್‌ನ್ನು ಒಳಗೊಂಡಿದೆ. ಬ್ಲ್ಯಾಕ್ & ರೆಡ್, ಬ್ಲ್ಯಾಕ್ & ಸಿಲ್ವರ್, ಬ್ಲ್ಯಾಕ್ & ಗೋಲ್ಡ್ ಹಾಗೂ ಬ್ಲ್ಯಾಕ್ & ಬ್ಲ್ಯೂ ಎಂಬ ಆಕರ್ಷಕವಾದ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 200 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1255 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದ್ದು, 102 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 7.9 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 8.34 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 75 ರಿಂದ 90 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. 9 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

Best Mileage Bike Bajaj Platina New Ex-Showroom Price Details

ನೂತನ ಪ್ಲಾಟಿನಾ 100 ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ & ಎಲೆಕ್ಟ್ರಿಕ್ ಸ್ಟಾರ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 17 ಇಂಚಿರುವ ಅಲಾಯ್ ವೀಲ್‌ಗಳನ್ನು ಪಡೆದಿದ್ದು, ಟ್ಯೂಬ್ ಟೈರ್‌ಗಳನ್ನು ಹೊಂದಿದೆ. ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಹಾಗೂ ಹಿಂಭಾಗ (ರೇರ್) ಡುಯಲ್ ಸ್ಪ್ರಿಂಗ್ ಶಾಕ್ ಅಬ್ಸಾರ್ಬರ್‌ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

ಬಜಾಜ್ ಪ್ಲಾಟಿನಾ 110 (Bajaj Platina 110) ಹೇಗಿದೆ:

ಈ ಮೋಟಾರ್‌ಸೈಕಲ್‌ ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ ಎಲ್ಇಡಿ ಟೈಲ್ ಲ್ಯಾಂಪ್‌ನ್ನು ಒಳಗೊಂಡಿದೆ. ಕಾಕ್ಟೇಲ್ ವೈನ್ ರೆಡ್, ಎಬೊನಿ ಬ್ಲ್ಯಾಕ್ ರೆಡ್ ಹಾಗೂ ಎಬೊನಿ ಬ್ಲ್ಯಾಕ್ ಬ್ಲೂ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 200 ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1255 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

ಇದು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 115 ಸಿಸಿ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್, 8.6 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 9.81 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಜೊಂಡಿದೆ. 70 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 15.49 ಸೆಕೆಂಡುಗಳಲ್ಲಿ 0 ರಿಂದ 80 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಹೊಸ ಪ್ಲಾಟಿನಾ 110 ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಎಲೆಕ್ಟ್ರಿಕ್ ಸ್ಟಾರ್ಟರ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ & ಹಿಂಭಾಗ (ರೇರ್) ಟ್ವಿನ್-ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಸಿಬಿಎಸ್ (ಕಂಬೈನ್ಡ್ ಬ್ರೇಕ್ ಸಿಸ್ಟಮ್) ಮತ್ತು ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

More from DriveSpark

Article Published On: Saturday, October 4, 2025, 13:23 [IST]
English summary
Best mileage bike bajaj platina new ex showroom price details
Read more on bajaj auto india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+