90 ಕಿ.ಮೀ ಮೈಲೇಜ್! 65,000.. ಈ ಬೈಕ್​ ಖರೀದಿಸಲು ಮುಗಿಬಿದ್ದ ಗ್ರಾಹಕರು.. ಆಫೀಸ್‌ಗೆ ತೆರಳುವವರಿಗೆ ಬೆಸ್ಟ್ ಚಾಯ್ಸ್!

ಬಜಾಜ್ ಪ್ಲಾಟಿನಾ (Bajaj Platina) ಮಧ್ಯಮ ವರ್ಗದ ಗ್ರಾಹಕರ ನೆಚ್ಚಿನ ಬೈಕ್ ಆಗಿದ್ದು, ದಿನನಿತ್ಯದ ಬಳಕೆಗೆ ಹೆಚ್ಚು ಸೂಕ್ತವಾಗಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಈ ಸೆಪ್ಟೆಂಬರ್ ತಿಂಗಳಲ್ಲೂ 'ಪ್ಲಾಟಿನಾ' ದೊಡ್ಡ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಸರಿ ಸುಮಾರು 62,260 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 49,774 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 25.09% ಪ್ರಗತಿಯಾಗಿದೆ.

ನೂತನ 'ಬಜಾಜ್ ಪ್ಲಾಟಿನಾ' ಮಾರಾಟವು ಈ ಪರಿಪ್ರಮಾಣದಲ್ಲಿ ಬೆಳವಣಿಗೆಯಾಗಲು ನಾನಾ ಕಾರಣಗಳನ್ನು ಪಟ್ಟಿ ಮಾಡಬಹುದು. ಬಹುಮುಖ್ಯವಾಗಿ ಸೆ.22 ರಿಂದ ಜಿಎಸ್‌ಟಿ ಪರಿಷ್ಕರಣೆಗೊಂಡಿದೆ. ಈ ಮೋಟಾರ್‌ಸೈಕಲ್‌ನ ಬೆಲೆ ಮತ್ತಷ್ಟು ಅಗ್ಗವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಖರೀದಿದಾರರು ಸಹ ಕೊಂಡುಕೊಂಡಿದ್ದಾರೆ. ಜೊತೆಗಿದು ಗರಿಷ್ಠ ಮೈಲೇಜ್‌ನ್ನು ನೀಡಲಿದ್ದು, ನಗರ ಹಾಗೂ ಗ್ರಾಮೀಣ ಪ್ರದೇಶದ ರಸ್ತೆಗಳಿಗೂ ಸರಿಹೊಂದುತ್ತದೆ. ಹೀಗಾಗಿ, 'ಪ್ಲಾಟಿನಾ' ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ ಎಂದು ವಿಶ್ಲೇಷಿಸಲಾಗಿದೆ.

Best Mileage Bike Bajaj Platina September 2025 Sales Report

ದೇಶೀಯವಾಗಿ 'ಬಜಾಜ್ ಪ್ಲಾಟಿನಾ' ಎರಡು ವಿಧದಲ್ಲಿ ಲಭ್ಯವಿದೆ. ಅವುಗಳೆಂದರೆ, ಪ್ಲಾಟಿನಾ 100 ಹಾಗೂ ಪ್ಲಾಟಿನಾ 110. ಇವು ತುಂಬಾ ಅಚ್ಚುಕಟ್ಟಾದ ಸರಳವಾದ ವಿನ್ಯಾಸವನ್ನು ಹೊಂದಿದ್ದು, ಹಲವು ವೈಶಿಷ್ಟ್ಯಗಳನ್ನು ಪಡೆದುಕೊಂಡಿವೆ. ಹಾಗೆಯೇ ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿವೆ.

ಬಜಾಜ್ ಪ್ಲಾಟಿನಾ 100 (Bajaj Platina 100) ವಿಶೇಷತೆಗಳೇನು:

ಇದು ರೂ.65,407 (ಎಕ್ಸ್-ಶೋರೂಂ - ನವದೆಹಲಿ) ಬೆಲೆಯನ್ನು ಒಳಗೊಂಡಿದೆ. ಅತ್ಯುತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ ಟೈಲ್ ಲ್ಯಾಂಪ್‌ನ್ನು ಹೊಂದಿದೆ. ಇದರೊಂದಿಗೆ ಬ್ಲ್ಯಾಕ್ - ರೆಡ್, ಬ್ಲ್ಯಾಕ್ - ಸಿಲ್ವರ್, ಬ್ಲ್ಯಾಕ್ - ಗೋಲ್ಡ್ & ಬ್ಲ್ಯಾಕ್ - ಬ್ಲ್ಯೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

Best Mileage Bike Bajaj Platina September 2025 Sales Report

ನೂತನ 'ಪ್ಲಾಟಿನಾ 100' ಕೊಂಚ ಮಟ್ಟಿಗೆ ದೊಡ್ಡ ಗಾತ್ರದಲ್ಲಿದೆ. 2,006 ಮಿ.ಮೀ ಉದ್ದ, 713 ಮಿ.ಮೀ ಅಗಲ ಮತ್ತು 1,100 ಮಿ.ಮೀ ಎತ್ತರವಿದೆ. 200 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1255 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸೀಟ್ ಎತ್ತರವು 807 ಮಿ.ಮೀ ಇದ್ದು, ಬರೋಬ್ಬರಿ 117 ಕೆಜಿ ತೂಕವಿದೆ.

ಈ ಬೈಕ್ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 102 ಸಿಸಿ ಪೆಟ್ರೋಲ್ ಎಂಜಿನ್ ಮತ್ತು 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 75 ರಿಂದ 90 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಎಲೆಕ್ಟ್ರಿಕ್ ಸ್ಟಾರ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಸಿಬಿಎಸ್ (ಕಂಬೈನ್ಡ್ ಬ್ರೇಕಿಂಗ್ ಸಿಸ್ಟಮ್) ಹಾಗೂ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

Best Mileage Bike Bajaj Platina September 2025 Sales Report

ಬಜಾಜ್ ಪ್ಲಾಟಿನಾ 110 (Bajaj Platina 110) ಹೇಗಿದೆ:

ಇದು ರೂ.69 284 (ಎಕ್ಸ್-ಶೋರೂಂ - ನವದೆಹಲಿ) ದರವನ್ನು ಪಡೆದಿದೆ. ಅತ್ಯಾಧುನಿಕವಾದ ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಟೈಲ್ ಲ್ಯಾಂಪ್‌ನ್ನು ಒಳಗೊಂಡಿದೆ. ಕಾಕ್‌ಟೈಲ್ ವೈನ್ ರೆಡ್ - ಆರೆಂಜ್, ಎಬೊನಿ ಬ್ಲ್ಯಾಕ್ ರೆಡ್, ಎಬೊನಿ ಬ್ಲ್ಯಾಕ್ ಬ್ಲೂ ಹಾಗೂ ಯೆಲ್ಲೋ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

ಹೊಸ 'ಪ್ಲಾಟಿನಾ 110' ಹೆಚ್ಚು ವಿಶಾಲವಾಗಿದೆ. 2,006 ಮಿ.ಮೀ ಉದ್ದ, 741 ಮಿ.ಮೀ ಅಗಲ ಮತ್ತು 1,100 ಮಿ.ಮೀ ಎತ್ತರವಿದೆ. 200 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,255 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸೀಟ್ ಎತ್ತರವು 807 ಮಿ.ಮೀ ಇದ್ದು, 122 ಕೆಜಿ ತೂಕವಿದೆ.

ಈ ಮೋಟಾರ್‌ಸೈಕಲ್‌ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿದೆ. 115 ಸಿಸಿ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮತ್ತು 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 70 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಎಲೆಕ್ಟ್ರಿಕ್ ಸ್ಟಾರ್ಟರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) & ಹಿಂಭಾಗ (ರೇರ್) ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

More from DriveSpark

Article Published On: Saturday, October 25, 2025, 8:55 [IST]
English summary
Bajaj platina september 2025 sales increase details
Read more on bajaj auto india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+