1 ಲೀ. 55 ಕಿ.ಮೀ ಮೈಲೇಜ್! ಈ ಸ್ಕೂಟರ್ 80,000 ರೂಪಾಯಿಗೆ ಲಭ್ಯ.. ಡ್ಯೂಟಿಗೆ ಹೋಗುವವರಿಗೆ ಬೆಸ್ಟ್!

ಹೋಂಡಾ ಆಕ್ಟಿವಾ (Honda Activa) ನಂ.1 ಸ್ಕೂಟರ್ ಆಗಿದೆ. ದೇಶೀಯವಾಗಿ 2001ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಳಿಸಲಾಯಿತು. ಅಂದಿನಿಂದ ಇಂದಿನವರೆಗೆ ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಗಳಿಸಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಈ ಜೂನ್ ತಿಂಗಳು ಒಟ್ಟು 1,83,265 ಯುನಿಟ್ ಆಕ್ಟಿವಾ ಸ್ಕೂಟರ್‌ಗಳನ್ನು ಮಾರಾಟ ಮಾಡಲಾಗಿದೆ. ಇದು ದಿನಬಳಕೆಗೂ ಹೆಚ್ಚು ಸೂಕ್ತವಾಗಿದ್ದು, ಕಚೇರಿಗೆ ತೆರಳುವವರಿಗೆ ಅತ್ಯುತ್ತಮವಾದ ಆಯ್ಕೆಯಾಗಲಿದೆ. ನಾವಿಲ್ಲಿ 'ಆಕ್ಟಿವಾ' ಸ್ಕೂಟರ್‌ನ ಬೆಲೆ ಮತ್ತು ವಿಶೇಷತೆಗಳ ಕುರಿತಂತೆ ಸಂಪೂರ್ಣವಾಗಿ ತಿಳಿಸಿಕೊಟ್ಟಿದ್ದೇವೆ.

ಬೆಲೆ (Price):

ನೂತನ ಹೋಂಡಾ ಆಕ್ಟಿವಾ ಸ್ಕೂಟರ್ ವಿವಿಧ ರೂಪದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಆಕ್ಟಿವಾ 110 ಮಾಡೆಲ್ ರೂ.81,000, ಆಕ್ಟಿವಾ 125 ಮಾಡೆಲ್ ರೂ.94,000 ರಿಂದ ರೂ.97,000 ಹಾಗೂ ಆಕ್ಟಿವಾ ಇ (ಎಲೆಕ್ಟ್ರಿಕ್) ಮಾಡೆಲ್ ರೂ.1.17 ಲಕ್ಷದಿಂದ ರೂ.1.52 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ.

Best Mileage Scooter Honda Activa Price Mileage Features And All Top Things

ಕಾರ್ಯಕ್ಷಮತೆ (Performance):

ಹೊಸ ಹೋಂಡಾ ಆಕ್ಟಿವಾ 110 ಮಾಡೆಲ್, 109.51 ಸಿಸಿ ಒಬಿಡಿ-2ಬಿ ಏರ್-ಕೋಲ್ಡ್ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 7.9 ಬಿಹೆಚ್‌ಪಿ (ಅಶ್ವ ಶಕ್ತಿ) ಮತ್ತು 9.05 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 50 ರಿಂದ 55 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 85 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ.

ಮತ್ತೊಂದು ಹೋಂಡಾ ಆಕ್ಟಿವಾ 125 ಮಾಡೆಲ್, 123.92 ಸಿಸಿ ಒಬಿಡಿ-2ಬಿ ಏರ್-ಕೋಲ್ಡ್ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 8.4 ಬಿಹೆಚ್‌ಪಿ (ಅಶ್ವ ಶಕ್ತಿ) ಹಾಗೂ 10.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 47 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ.

Best Mileage Scooter Honda Activa Price Mileage Features And All Top Things

ನೂತನ ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಮಾಡೆಲ್, 1.5 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯವಿರುವ ಎರಡು ಬ್ಯಾಟರಿ ಪ್ಯಾಕ್‌ ಆಯ್ಕೆಯನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 102 ಕಿ.ಮೀ ಕ್ರಮಿಸುತ್ತದೆ. ಇದರಲ್ಲಿರುವ ಎಲೆಕ್ಟ್ರಿಕ್ ಮೋಟಾರ್ 22 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ.

ವೈಶಿಷ್ಟ್ಯಗಳು (Features):

ಆಕ್ಟಿವಾ 110 ಮಾಡೆಲ್, ರೆಬೆಲ್ ರೆಡ್ ಮೆಟಾಲಿಕ್ ಮತ್ತು ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ. 4.2-ಇಂಚಿರುವ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕನ್ಸೋಲ್‌, ಸ್ಮಾರ್ಟ್‌ಫೋನ್‌ ಕನೆಕ್ಟಿವಿಟಿ ಹಾಗೂ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

Best Mileage Scooter Honda Activa Price Mileage Features And All Top Things

ಇನ್ನೊಂದು ಆಕ್ಟಿವಾ 125 ಮಾಡೆಲ್, ಪರ್ಲ್ ಇಗ್ನಿಯಸ್ ಬ್ಲ್ಯಾಕ್ ಹಾಗೂ ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಟಿಎಫ್‌ಟಿ ಕನ್ಸೋಲ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಮತ್ತು ಐಡಲ್ ಸ್ಟಾರ್ಟ್/ ಸ್ಟಾಪ್ ಸಿಸ್ಟಮ್‌ನಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

ಆಕ್ಟಿವಾ ಎಲೆಕ್ಟ್ರಿಕ್ ಮಾಡೆಲ್ ಪರ್ಲ್ ಶಾಲೋ ಬ್ಲೂ ಹಾಗೂ ಮ್ಯಾಟ್ ಫಾಗಿ ಸಿಲ್ವರ್ ಮೆಟಾಲಿಕ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಲಭ್ಯವಿದೆ. 7.0-ಇಂಚಿರುವ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ & ಹಿಂಭಾಗ (ರೇರ್) ಡುಯಲ್ ಸ್ಪ್ರಿಂಗ್‌ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ. ಸ್ಟ್ಯಾಂಡರ್ಡ್ ಮತ್ತು ಸ್ಪೋರ್ಟ್ ಎಂಬ ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿದೆ.

Article Published On: Friday, July 25, 2025, 16:57 [IST]
English summary
Best mileage scooter honda activa price mileage features and all top things
Read more on honda motorcycle india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+