ಬಡವರ ಬಂಡಿಗಳು: 62,000 ಬೆಲೆ.. 70+ Km ಮೈಲೇಜ್, ಈ ಬೈಕ್‌ಗಳನ್ನು ಗ್ರಾಹಕರು ಎದ್ದುಬಿದ್ದು ಖರೀದಿ ಮಾಡುವವರು!
ದೇಶದ ನಗರ ಪ್ರದೇಶದಂತೆ ಗ್ರಾಮೀಣ ಭಾಗದಲ್ಲೂ ಹೆಚ್ಚಿನ ಜನರು ವಾಸಿಸುತ್ತಾರೆ. ಹಳ್ಳಿ ಹಾಗೂ ನಗರವಾಸಿಗಳ ದಿನನಿತ್ಯದ ಬಳಕೆಗೆ ಬೈಕ್‌ಗಳು ತೀರಾ ಅನಿವಾರ್ಯವಾಗಿವೆ. ಅದರಲ್ಲೂ ಹೀರೋ ಸ್ಪ್ಲೆಂಡರ್, ಹೋಂಡಾ ಶೈನ್, ಹೀರೋ ಹೆಚ್ಎಫ್ ಡಿಲಕ್ಸ್ ಹಾಗೂ ಬಜಾಜ್ ಪಲ್ಸರ್ 125 ಮೋಟಾರ್‌ಸೈಕಲ್‌ಗಳು ಹೆಚ್ಚು ಸೂಕ್ತವಾಗಬಲ್ಲವು. ಇವುಗಳು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಅತಿಹೆಚ್ಚಿನ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿವೆ. ಬನ್ನಿ.. ಈ ನೂತನ ಬೈಕ್‌ಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ.
ಮೊದಲಿಗೆ ಹೀರೋ ಸ್ಪ್ಲೆಂಡರ್ (Hero Splendor) ಮೋಟಾರ್‌ಸೈಕಲ್ ಬಗ್ಗೆ ಮಾತನಾಡೋಣ. ಇದು ಹಲವು ವಿಧದಲ್ಲಿ ಖರೀದಿಗೆ ದೊರೆಯುತ್ತದೆ. ಇದರ ಸ್ಪ್ಲೆಂಡರ್ ಪ್ಲಸ್ ಮಾಡೆಲ್, ರೂ.76,356 ರಿಂದ ರೂ.79,336 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 97.2 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 70 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ. ಸುರಕ್ಷತೆಗಾಗಿ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್ ಮಾಡೆಲ್, ರೂ.80,161 ರಿಂದ ರೂ.83,461 ಎಕ್ಸ್-ಶೋರೂಂ ಬೆಲೆಯನ್ನು ಒಳಗೊಂಡಿದೆ. 97.2 ಸಿಸಿ ಏರ್-ಕೋಲ್ಡ್ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 70 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ. ಸೂಪರ್ ಸ್ಪ್ಲೆಂಡರ್ ಮಾಡೆಲ್, ರೂ.82,298 ರಿಂದ ರೂ.86,298 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 124.7 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದ್ದು, 56 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ.
ಹೋಂಡಾ ಶೈನ್ (Honda Shine) ಮೋಟಾರ್‌ಸೈಕಲ್ ಕುರಿತಂತೆ ಹೇಳುವುದಾದರೆ, ಇದು 100 ಸಿಸಿ ಹಾಗೂ 125 ಸಿಸಿ ಎಂಜಿನ್ ಆಯ್ಕೆಯಲ್ಲಿ ದೊರೆಯುತ್ತದೆ. ಶೈನ್ 100 ಮಾಡೆಲ್ ರೂ.68,600 ಎಕ್ಸ್-ಶೋರೂಂ ಬೆಲೆಯನ್ನು ಒಳಗೊಂಡಿದೆ. 98.98 ಸಿಸಿ ಎಂಜಿನ್ ಹೊಂದಿದ್ದು, 55 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ. ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ನೂತನ ಹೋಂಡಾ ಶೈನ್ 125 ಮೋಟಾರ್‌ಸೈಕಲ್ ಬಗ್ಗೆ ಹೇಳುವುದಾದರೆ, ಇದು ರೂ.84,551 ರಿಂದ ರೂ.88,551 (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 123.94 ಸಿಸಿ ಸಿಂಗಲ್-ಸಿಲಿಂಡರ್, ಏರ್-ಕೋಲ್ಡ್ ಪೆಟ್ರೋಲ್ ಮತ್ತು 5-ಸ್ಪೀಡ್ ಗೇರ್‌ಬಾಕ್ಸ್ ಆಯ್ಕೆಯನ್ನು ಹೊಂದಿದೆ. 55 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ. ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಹೊಸ ಹೀರೋ ಹೆಚ್ಎಫ್ ಡಿಲಕ್ಸ್ (Hero HF Deluxe) ಕುರಿತಂತೆ ಹೇಳುವುದಾದರೆ, ಈ ಬೈಕ್ ರೂ.62,468 ರಿಂದ ರೂ.70,348 ಎಕ್ಸ್-ಶೋರೂಂ ಬೆಲೆಯನ್ನು ಹೊಂದಿದೆ. 97.2 ಸಿಸಿ ಪೆಟ್ರೋಲ್ ಎಂಜಿನ್ ಹಾಗೂ 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದ್ದು, 70 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಕಡೆಯದಾಗಿ ಬಜಾಜ್ ಪಲ್ಸರ್ 125 (Bajaj Pulsar 125) ಮೋಟಾರ್‌ಸೈಕಲ್ ಕುರಿತಂತೆ ಮಾತನಾಡುವುದಾದರೆ, ಇದು ರೂ.88,102 ರಿಂದ ರೂ.94,668 (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 124.4 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 51.46 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ. ಸವಾರರ ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications