1 ಲೀಟರ್‌ಗೆ 90 ಕಿ.ಮೀ ಮೈಲೇಜ್, 70,000 ರೂಪಾಯಿ.. ಆಫೀಸ್‌ಗೆ ಹೋಗುವವರ ಮೆಚ್ಚಿನ ಆಯ್ಕೆ!
ಬೆಂಗಳೂರು, ಮುಂಬೈ, ಚೆನ್ನೈ, ಹೈದರಾಬಾದ್ ಹಾಗೂ ದೆಹಲಿಯಂತಹ ಮಹಾನಗರಗಳಲ್ಲಿ ಪ್ರತಿನಿತ್ಯ ಕೆಲಸಕ್ಕೆ ತೆರಳುವುದು ತುಂಬಾ ಕಷ್ಟದ ಕೆಲಸ. ಅದರಲ್ಲೂ ಬೈಕ್‌ಗಳು ತೀರಾ ಅನಿವಾರ್ಯವಾಗಿವೆ. ನೀವು ಹೊಚ್ಚ ಹೊಸ ಮೋಟಾರ್‌ಸೈಕಲ್‌ವೊಂದನ್ನು ತೆಗೆದುಕೊಳ್ಳಲು ಆಲೋಚಿಸಿದ್ದೀರಾ.. ಹಾಗಾದರೆ, ಬಜಾಜ್ ಪ್ಲಾಟಿನಾ 100 (Bajaj Platina 100) ಅತ್ಯುತ್ತಮವಾದ ಆಯ್ಕೆಯಾಗಲಿದೆ. ನಾವಿಲ್ಲಿ ಈ ಬೈಕ್‌ನ ಬೆಲೆ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳ ಕುರಿತಂತೆ ಸಂಪೂರ್ಣವಾಗಿ ತಿಳಿಸಿಕೊಟ್ಟಿದ್ದೇವೆ.
ಬೆಲೆ (Price):
ನೂತನ ಬಜಾಜ್ ಪ್ಲಾಟಿನಾ 100 ಬೈಕ್ ಅತಿ ಕಡಿಮೆ ಬೆಲೆಯಲ್ಲಿಯೂ ಖರೀದಿಗೆ ದೊರೆಯುತ್ತದೆ. ಪ್ರಸ್ತುತ ರೂ.70,611 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಕೇಂದ್ರ ಸರ್ಕಾರ ದ್ವಿಚಕ್ರ ವಾಹನಗಳ ಖರೀದಿ ಮೇಲೆ ವಿಧಿಸುತ್ತಿದ್ದ ಜಿಎಸ್‌ಟಿ ಪ್ರಮಾಣವನ್ನು 28% ರಿಂದ 18%ಗೆ ಇಳಿಸಿದೆ. ಪರಿಷ್ಕೃತ ದರಗಳು ಸೆಪ್ಟೆಂಬರ್ 22 ರಿಂದ ಜಾರಿಗೆ ಬರಲಿವೆ. ಆ ಬಳಿಕ 'ಪ್ಲಾಟಿನಾ 100' ಬೆಲೆಯು ಮತ್ತಷ್ಟು ಕಡಿಮೆಯಾಗಲಿದೆ.

ವಿನ್ಯಾಸ & ಬಣ್ಣಗಳು (Design & Colors):
ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಪಡೆದಿದ್ದು, ನೋಡುಗರ ಸೆಳೆಯುವಂತಿದೆ. ಉತ್ತಮವಾದ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಟೈಲ್ ಲ್ಯಾಂಪ್‌ನ್ನು ಹೊಂದಿದೆ. ಇದರೊಂದಿಗೆ ಬ್ಲ್ಯಾಕ್ & ರೆಡ್, ಬ್ಲ್ಯಾಕ್ & ಸಿಲ್ವರ್, ಬ್ಲ್ಯಾಕ್ & ಗೋಲ್ಡ್ ಮತ್ತು ಬ್ಲ್ಯಾಕ್ & ಬ್ಲ್ಯೂ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.
ಸುತ್ತಳತೆ (Dimensions):
ಈ ಬೈಕ್ ಕೊಂಚ ಮಟ್ಟಿಗೆ ವಿಶಾಲವಾಗಿದೆ. 2,006 ಎಂಎಂ ಉದ್ದ, 713 ಎಂಎಂ ಅಗಲ, ಹಾಗೂ 1100 ಎಂಎಂ ಎತ್ತರವಿದೆ. 200 ಗ್ರೌಂಡ್ ಕ್ಲಿಯರೆನ್ಸ್ ಮತ್ತು 1255 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ. ಸೀಟ್ ಎತ್ತರವು 807 ಎಂಎಂ ಇದ್ದು, 117 ಕೆಜಿ ತೂಕವಿದೆ.

ಕಾರ್ಯಕ್ಷಮತೆ (Performance):
ಹೊಸ ಬಜಾಜ್ ಪ್ಲಾಟಿನಾ 100 ಮೋಟಾರ್‌ಸೈಕಲ್ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 102 ಸಿಸಿ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 7500 ಆರ್‌ಪಿಎಂನಲ್ಲಿ 7.9 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 5500 ಆರ್‌ಪಿಎಂನಲ್ಲಿ 8.34 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.
ಇದರ ಇಂಧನ ದಕ್ಷತೆಯು ಉತ್ತಮವಾಗಿದೆ. 11 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಪಡೆದಿದೆ. 75 ರಿಂದ 90 ಕಿ.ಮೀ ವರೆಗೆ ಮೈಲೇಜ್ ಕೊಡಬಲ್ಲದು. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 9 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.
ವೈಶಿಷ್ಟ್ಯಗಳು (Features):
ಈ ಬೈಕ್ ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಎಲೆಕ್ಟ್ರಿಕ್ ಸ್ಟಾರ್ಟರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನಾದಾಗಿಸಿಕೊಂಡಿದೆ. 17 ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಮುಂಭಾಗ (ಫ್ರಂಟ್) 2.75 x 17 ಹಾಗೂ ಹಿಂಭಾಗ (ರೇರ್) 3.00 x 17 ಅಳತೆಯ ಟ್ಯೂಬ್ ಟೈಯರ್‌ಗಳನ್ನು ಪಡೆದಿದೆ.
ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup & Braking System):
ಇದು ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸಬಲ್ಲದು. ಅದಕ್ಕಾಗಿ ಮುಂದೆ ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂದೆ ಡುಯಲ್ ಸ್ಪ್ರಿಂಗ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಸಿಬಿಎಸ್ (ಕಂಬೈನ್ಡ್ ಬ್ರೇಕಿಂಗ್ ಸಿಸ್ಟಮ್) ಮತ್ತು ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.
ಬಜಾಜ್ ಪ್ಲಾಟಿನಾ 110 (Bajaj Platina 110) ಕೂಡ ಖರೀದಿಗೆ ಲಭ್ಯ:
ಸದ್ಯ ಈ ಮೋಟಾರ್‌ಸೈಕಲ್ ರೂ.74,771 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 115 ಸಿಸಿ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 70 ಕಿ.ಮೀ ವರೆಗೆ ಮೈಲೇಜ್ ನೀಡಬಲ್ಲದು. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಎಲೆಕ್ಟ್ರಿಕ್ ಸ್ಟಾರ್ಟರ್ ಸೇರಿದಂತೆ ವೈಶಿಷ್ಟ್ಯಗಳನ್ನು ಹೊಂದಿದೆ. ಸಿಬಿಎಸ್ (ಕಂಬೈನ್ಡ್ ಬ್ರೇಕಿಂಗ್ ಸಿಸ್ಟಮ್) ಹಾಗೂ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.


Click it and Unblock the Notifications








