ಪುಟ್ಟ ಹಳ್ಳಿಗೂ ಸೈ.. ಟೌನ್‌ಗೂ ಜೈ.. 70+ಕಿ.ಮೀ ಮೈಲೇಜ್, ರೂ.90,000ದೊಳಗೆ ಸಿಗುವ ಸಪ್ತ ಟೂ-ವೀಲರ್‌ಗಳಿವು!
ಇಂದು ಸಣ್ಣ ಹಳ್ಳಿಯೇ ಇರಲಿ.. ದೊಡ್ಡ ನಗರವೇ ಇರಲಿ.. ಮಧ್ಯಮ ವರ್ಗದ ಜನರ ಓಡಾಟಕ್ಕೆ ದ್ವಿಚಕ್ರ ವಾಹನಗಳು (Two Wheelers) ತೀರಾ ಅನಿವಾರ್ಯವಾಗಿವೆ. ಅದರಲ್ಲೂ ಬಹುತೇಕರು ಬಜೆಟ್ ಬೆಲೆಯಲ್ಲಿ ಗರಿಷ್ಠ ಮೈಲೇಜ್ ನೀಡಬಲ್ಲ ಹೊಚ್ಚ ಹೊಸ ಬೈಕ್ ಅಥವಾ ಸ್ಕೂಟರ್‌ನ್ನು ಖರೀದಿ ಮಾಡಲು ಹುಡುಕಾಟ ನಡೆಸುತ್ತಿರುತ್ತಾರೆ. ಆದರೆ, ಯಾವುದನ್ನು ಕೊಳ್ಳಬೇಕು.. ಅದು ದೀರ್ಘಕಾಲ ಬಾಳಿಕೆ ಬರುತ್ತದೆಯೇ ಎಂಬಿತ್ಯಾದಿ ಗೊಂದಲಗಳು ಕೂಡ ಇರುತ್ತವೆ. ನಾವಿಲ್ಲಿ ರೂ.90,000ದೊಳಗೆ ಲಭ್ಯವಾಗಬಲ್ಲ ಕೆಲವು ಜನಪ್ರಿಯ ದ್ವಿಚಕ್ರ ವಾಹನಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.
ಹೀರೋ ಹೆಚ್ಎಫ್ ಡಿಲಕ್ಸ್ (Hero HF Deluxe): ಇದು ಪ್ರಖ್ಯಾತ ಮೋಟಾರ್‌ಸೈಕಲ್ ಎಂದೇ ಹೆಸರುವಾಗಿದ್ದು, ಬಜೆಟ್ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಗ್ರಾಮ ಹಾಗೂ ಪಟ್ಟಣ ಪ್ರದೇಶದ ಬಡ ಅಥವಾ ಮಧ್ಯಮ ವರ್ಗದ ಜನರು ಸುಲಭವಾಗಿ ಮನೆಗೆ ತರಬಹುದು. ಈ ಬೈಕ್ ರೂ.60,000 ರಿಂದ ರೂ.70,000 (ಎಕ್ಸ್-ಶೋರೂಂ) ದರವನ್ನು ಪಡೆದಿದೆ.

ನೂತನ ಹೆಚ್ಎಫ್ ಡಿಲಕ್ಸ್ ಬೈಕ್ ಬೆಲೆಗೆ ತಕ್ಕಂತೆ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. 97.2 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 70 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡಬಲ್ಲದು. ಈ ಮೋಟಾರ್‌ಸೈಕಲ್ ನೋಡುವುದಕ್ಕೆ ತುಂಬಾ ಸರಳವಾದ ವಿನ್ಯಾಸವನ್ನು ಒಳಗೊಂಡಿದೆ. ಟೆಕ್ನೋ ಬ್ಲ್ಯೂ ಮತ್ತು ಹೆವಿ ಗ್ರೇ ವಿತ್ ಗ್ರೀನ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಹೊಸ ಹೀರೋ ಹೆಚ್ಎಫ್ ಡಿಲಕ್ಸ್ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಐಡಲ್ ಸ್ಟಾಪ್-ಸ್ಟಾರ್ಟ್ ಸಿಸ್ಟಮ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಅನ್ನು ಪಡೆದಿದೆ. ಈ ಬೈಕ್ ಸವಾರರ ರಕ್ಷಣೆಗೂ ಹೆಸರುವಾಸಿಯಾಗಿದೆ. ಮುಂಭಾಗ (ಫ್ರಂಟ್) ಮತ್ತು ಹಿಂಭಾಗ (ರೇರ್) ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಟಿವಿಎಸ್ ಎಕ್ಸ್‌ಎಲ್ 100 ಹೆವಿ ಡ್ಯೂಟಿ (TVS XL100 Heavy Duty): ಇದೊಂದು ಜನಪ್ರಿಯ ಮೊಪೆಡ್ ಆಗಿದ್ದು, ರೂ.46,000 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ವಿಶೇಷವಾಗಿ ಈ ಮೊಪೆಡ್ ರೈತ ಸ್ನೇಹಿಯಾಗಿದೆ. 99.7 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದ್ದು, 4.35 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 6.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 65 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡಬಲ್ಲದು.
ಹೊಸ ಟಿವಿಎಸ್ ಎಕ್ಸ್‌ಎಲ್ 100 ಹೆವಿ ಡ್ಯೂಟಿ ಮೊಪೆಡ್ ಬ್ಲೂ, ರೆಡ್, ಬ್ಲ್ಯಾಕ್ ಮತ್ತು ಗ್ರೀನ್ ಸೇರಿದಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಮೊಪೆಡ್ 130 ಕೆಜಿ ತೂಕವಿದ್ದು, ಸುರಕ್ಷತೆಯ ದೃಷ್ಟಿಯಿಂದ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಬಜಾಜ್ ಪ್ಲಾಟಿನಾ 110 (Bajaj Platina 110): ಈ ಬೈಕ್ ಬಡವರ ಬಂಡಿ ಎಂದು ಹೆಸರುವಾಸಿಯಾಗಿದೆ. ಇದು ರೂ.71,000 ರಿಂದ 74,000 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 115 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 70 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡಬಲ್ಲದು. ಎಬೊನಿ ಬ್ಲ್ಯಾಕ್ ರೆಡ್ ಮತ್ತು ಎಬೊನಿ ಬ್ಲ್ಯಾಕ್ ಬ್ಲೂ ಸೇರಿದಂತೆ ವಿವಿಧ ಬಣ್ಣಗಳನ್ನು ಪಡೆದಿದೆ.
ಈ ಬಜಾಜ್ ಪ್ಲಾಟಿನಾ 110 ಮೋಟಾರ್‌ಸೈಕಲ್ ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್ ಹಾಗೂ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಇದು 119 ಕೆಜಿ ತೂಕವಿದ್ದು, 11 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ. ಜೊತೆಗೆ ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

ಟಿವಿಎಸ್ ಸ್ಪೋರ್ಟ್ (TVS Sport): ಇದು ಪ್ರಖ್ಯಾತ ಮೋಟಾರ್‌ಸೈಕಲ್ ಆಗಿದ್ದು, ಹಳ್ಳಿ ಹಾಗೂ ದಿಲ್ಲಿಯಲ್ಲಿವರೆಗಿನ ಗ್ರಾಹಕರು ಸಹ ಖರೀದಿ ಮಾಡಬಹುದು. ಈ ಬೈಕ್ ರೂ.59,000 ರಿಂದ 71,000 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಹಾಗೆಯೇ ಉತ್ತಮವಾಗಿರುವ ವಿನ್ಯಾಸವನ್ನು ಹೊಂದಿದೆ. ಮೆಟಾಲಿಕ್ ಬ್ಲೂ, ಸ್ಟಾರ್‌ಲೈಟ್ ಬ್ಲೂ, ಆಲ್ ರೆಡ್, ಆಲ್ ಗ್ರೇ, ಆಲ್ ಬ್ಲಾಕ್ ಗ್ರೇ ರೆಡ್ ಮತ್ತು ಬ್ಲಾಕ್ ನಿಯಾನ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ.
ಈ ಮೋಟಾರ್‌ಸೈಕಲ್ ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. 109.7 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಹೊಂದಿದ್ದು, 8.19 ಪಿಎಸ್ (ಹಾರ್ಸ್ ಪವರ್) ಮತ್ತು 8.7 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 70 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡಬಲ್ಲದು.

ನೂತನ ಟಿವಿಎಸ್ ಸ್ಪೋರ್ಟ್ ಬೈಕ್ ಅನಲಾಗ್ ಇನ್ಸ್ಟ್ರುಮೆಂಟ್ ಪ್ಯಾನೆಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇದು 112 ಕೆಜಿ ತೂಕವಿದ್ದು, 10 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಮುಂಭಾಗ (ಫ್ರಂಟ್) ಮತ್ತು ಹಿಂಭಾಗ (ರೇರ್) ಡ್ರಮ್ ಬ್ರೆಕ್‌ಗಳನ್ನು ಒಳಗೊಂಡಿದೆ.
ಟಿವಿಎಸ್ ಜುಪಿಟರ್ 110 (TVS Jupiter 110): ಈ ಸ್ಕೂಟರ್‌ನ್ನು ಮಧ್ಯಮ ವರ್ಗದ ಜನರು ಮುಗಿಬಿದ್ದು ಕೊಂಡುಕೊಳ್ಳುತ್ತಾರೆ. ಅದಕ್ಕೆ ತಕ್ಕಂತೆ ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಾಗಲಿದೆ. ಇದು ರೂ.76,000 ರಿಂದ 89,000 (ಎಕ್ಸ್-ಶೋರೂಂ - ನವದೆಹಲಿ) ದರವನ್ನು ಪಡೆದಿದೆ.
ನೂತನ ಜುಪಿಟರ್ 110 ಸ್ಕೂಟರ್ 113 ಸಿಸಿ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 53 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡಬಲ್ಲದು. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಸ್ಟಾರ್‌ಲೈಟ್ ಬ್ಲೂ ಗ್ಲಾಸ್, ಡಾನ್ ಬ್ಲೂ ಮ್ಯಾಟ್ ಮತ್ತು ಗ್ಯಾಲಕ್ಟಿಕ್ ಕಾಪರ್ ಮ್ಯಾಟ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ. ಡಿಜಿಟಲ್-ಇನ್ಸ್ಟ್ರುಮೆಂಟ್ ಕ್ಲಸ್ಟರ್‌ನಂತಹ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.
ಟಿವಿಎಸ್ ರೇಡಿಯನ್ (TVS Radeon): ಇದು ಸಾಮಾನ್ಯ ವರ್ಗದ ಜನರಿಗೆ ಹೆಚ್ಚು ಸೂಕ್ತವಾಗಬಲ್ಲದು. ಈ ಬೈಕ್ ರೂ.59,000 ರಿಂದ 83,000 (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 109.7 ಸಿಸಿ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 73.68 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡಬಲ್ಲದು.
ಈ ಮೋಟಾರ್‌ಸೈಕಲ್ ಡುಯಲ್-ಪಾಡ್ ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಹಾಗೆಯೇ ನೋಡಲು ಸಹ ಚೆನ್ನಾಗಿದ್ದು, ಬ್ಲೂ, ಮೆಟಲ್ ಬ್ಲ್ಯಾಕ್ ಮತ್ತು ರಾಯಲ್ ಪರ್ಪಲ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಮುಂಭಾಗ (ಫ್ರಂಟ್) ಮತ್ತು ಹಿಂಭಾಗ (ರೇರ್) ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.
ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ (TVS Star City Plus): ಈ ಮೋಟಾರ್‌ಸೈಕಲ್ ರೂ.76,000 ರಿಂದ 79,000 (ಎಕ್ಸ್-ಶೋರೂಂ) ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಇದು 109 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 83 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡಬಲ್ಲದು.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications