ದೀಪಾವಳಿಗೆ ಹೊಸ ಇ-ಸ್ಕೂಟರ್ ಖರೀದಿಸಬೇಕೇ.. ಇವು ಬೆಸ್ಟ್ ಚಾಯ್ಸ್, 160 ಕಿ.ಮೀ ರೇಂಜ್.. ಖರ್ಚಿಲ್ಲದೆ ಓಡಿಸಿ!
ದೀಪಾವಳಿ (Diwali) ಹಿಂದೂಗಳ ಪವಿತ್ರ ಹಬ್ಬವಾಗಿದ್ದು, ಪ್ರತಿಯೊಬ್ಬರು ಸಂಭ್ರಮ - ಸಡಗರದಿಂದ ಈ ಸುಸಂದರ್ಭದಲ್ಲಿ ಹೊಚ್ಚ ಹೊಸ ಇ-ಸ್ಕೂಟರ್‌ನ್ನು ಖರೀದಿಸಿ ಮನೆಗೆ ತರಲು ಆಲೋಚಿಸಿದ್ದೀರಾ.. ಹಾಗಾದರೆ ಎಥರ್ ರಿಜ್ಟಾ, ಹೋಂಡಾ ಕ್ಯೂಸಿ1, ಟಿವಿಎಸ್ ಆರ್ಬಿಟರ್, ಹೀರೋ ವಿಡಾ ವಿ2 ಹಾಗೂ ಟಿವಿಎಸ್ ಐಕ್ಯೂಬ್ ಅತ್ಯುತ್ತಮವಾದ ಆಯ್ಕೆಯಾಗಲಿವೆ. ನಾವಿಲ್ಲಿ ಇದೇ ಎಲೆಕ್ಟ್ರಿಕ್ ಸ್ಕೂಟರ್‌ನ ಬೆಲೆ, ಕಾರ್ಯಕ್ಷಮತೆ ಹಾಗೂ ವಿಶೇಷತೆಗಳ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.
ಎಥರ್ ರಿಜ್ಟಾ (Ather Rizta):
ಇದು ಜನಪ್ರಿಯ ಇ-ಸ್ಕೂಟರ್ ಆಗಿದ್ದು, ಕೈಗೆಟುಕುವ ದರದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಕನಿಷ್ಠ ರೂ.75,999 ಹಾಗೂ ಗರಿಷ್ಠ ರೂ.1.56 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಡೆಕ್ಕನ್ ಗ್ರೇ, ಸಿಯಾಚಿನ್ ವೈಟ್, ಪ್ಯಾಂಗೊಂಗ್ ಬ್ಲೂ, ಕಾರ್ಡಮೊಮ್ ಗ್ರೀನ್ & ಪ್ಯಾಂಗೊಂಗ್ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ 'ರಿಜ್ಟಾ' 2.9 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 3.7 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 123 ರಿಂದ 160 ಕಿ.ಮೀವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 7 ಇಂಚಿನ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಸ್ಕ್ರೀನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ಹೋಂಡಾ ಕ್ಯೂಸಿ1 (Honda QC1):
ಈ ಎಲೆಕ್ಟ್ರಿಕ್ ಸ್ಕೂಟರ್ ಅಗ್ಗದ ಬೆಲೆಯಲ್ಲಿಯೂ ಲಭ್ಯವಿದ್ದು, ಎಲ್ಲ ವರ್ಗದ ಗ್ರಾಹಕರಿಗೂ ಸುಲಭವಾಗಿ ಕೈಗೆಟುಕುತ್ತದೆ. ರೂ.90,022 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಪರ್ಲ್ ಶಾಲೋ ಬ್ಲೂ, ಪರ್ಲ್ ಮಿಸ್ಟಿ ವೈಟ್, ಪರ್ಲ್ ಸೆರೆನಿಟಿ ಬ್ಲೂ, ಮ್ಯಾಟ್ ಫಾಗ್ಗಿ ಸಿಲ್ವರ್ ಮೆಟಾಲಿಕ್ ಮತ್ತು ಪರ್ಲ್ ಇಗ್ನಿಯಸ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಹೊಸ 'ಕ್ಯೂಸಿ1' ಇ-ಸ್ಕೂಟರ್ 1.5 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 80 ಕಿ.ಮೀವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. ಎಲ್‌ಸಿಡಿ ಡಿಸ್‌ಪ್ಲೇ ಹಾಗೂ ಅನಲಾಗ್ ಕೀ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸವಾರರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.
ಟಿವಿಎಸ್ ಆರ್ಬಿಟರ್ (TVS Orbiter):
ಇದು ಪ್ರಮುಖ ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ. ರೂ.1.05 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 3.1 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 158 ಕಿ.ಮೀವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಕ್ರೂಸ್ ಕಂಟ್ರೋಲ್, ಹಿಲ್ ಹೋಲ್ಡ್ ಫಂಕ್ಷನ್ ಹಾಗೂ ಯುಎಸ್‌ಬಿ ಚಾರ್ಜಿಂಗ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

ಹೀರೋ ವಿಡಾ ವಿ2 (Hero Vida V2):
ಈ ಎಲೆಕ್ಟ್ರಿಕ್ ಸ್ಕೂಟರ್ ಕೂಡ ಅಗ್ಗದ ದರದಲ್ಲಿ ಲಭ್ಯವಿದೆ. ರೂ.74,000 ರಿಂದ ರೂ.1.20 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. 2.2 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 3.94 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 94 ರಿಂದ 165 ಕಿ.ಮೀವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. 7 ಇಂಚಿನ ಟಿಎಫ್‌ಟಿ ಟಚ್‌ಸ್ಕ್ರೀನ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಟಿವಿಎಸ್ ಐಕ್ಯೂಬ್ (TVS iQube):
ಇದೊಂದು ಪ್ರಖ್ಯಾತ ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ. ಕನಿಷ್ಠ ರೂ.1.09 ಲಕ್ಷ ಹಾಗೂ ಗರಿಷ್ಠ ರೂ.1.62 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 2.2 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್), 3.5 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 5.3 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 75 ರಿಂದ 150 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ. ಟಿಎಫ್‌ಟಿ ಸ್ಕ್ರೀನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.


Click it and Unblock the Notifications








