ಹಬ್ಬಕ್ಕೆ ಹೊಸ ಬೈಕ್ ಖರೀದಿಸಬೇಕೇ.. 70,000ಕ್ಕೂ ಅಗ್ಗ, 70 ಕಿ.ಮೀಗೂ ಅಧಿಕ ಮೈಲೇಜ್!
ದೀಪಾವಳಿ (Diwali) ಹಬ್ಬಕ್ಕೆ ಕ್ಷಣಗಣನೆ ಶುರುವಾಗಿದೆ. ಇದು ಕತ್ತಲಿನಿಂದ ಬೆಳಕಿನೆಡೆಗೆ ಸಾಗುವ ಹಬ್ಬವಾಗಿದೆ. ನೀವು ಈ ಶುಭ ಸಂದರ್ಭದಲ್ಲಿ ಹೊಚ್ಚ ಹೊಸ ಮೋಟಾರ್‌ಸೈಕಲ್‌ವೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, ಬಜಾಜ್ ಸಿಟಿ 110ಎಕ್ಸ್, ಹೋಂಡಾ ಶೈನ್ 100 ಡಿಎಕ್ಸ್, ಹೀರೋ ಎಚ್ಎಫ್ ಡಿಲಕ್ಸ್, ಬಜಾಜ್ ಪ್ಲಾಟಿನಾ 100 ಹಾಗೂ ಟಿವಿಎಸ್ ರೇಡಿಯನ್‌ಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ನಾವಿಲ್ಲಿ ಇದೇ ಬೈಕ್‌ಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಕ್ಷಿಪ್ತ ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.
ಬಜಾಜ್ ಸಿಟಿ 110ಎಕ್ಸ್ (Bajaj CT 110X):
ಈ ಮೋಟಾರ್‌ಸೈಕಲ್ ಅತಿ ಕಡಿಮೆ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದ್ದು, ಉತ್ತಮವಾದ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. ರೂ.67,284 (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಮ್ಯಾಟ್ ವೈಲ್ಡ್ ಗ್ರೀನ್, ಎಬೊನಿ ಬ್ಲ್ಯಾಕ್ - ರೆಡ್ & ಎಬೊನಿ ಬ್ಲ್ಯಾಕ್ - ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ನೂತನ 'ಸಿಟಿ 110ಎಕ್ಸ್' ಬೈಕ್ 115.45 ಸಿಸಿ ಪೆಟ್ರೋಲ್ ಎಂಜಿನ್ ಮತ್ತು 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 70 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಸಿಬಿಎಸ್ (ಕಂಬೈನ್ಡ್ ಬ್ರೇಕಿಂಗ್ ಸಿಸ್ಟಮ್) ಮತ್ತು ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

ಹೋಂಡಾ ಶೈನ್ 100 ಡಿಎಕ್ಸ್ (Honda Shine 100 DX):
ಇದು ಜನಪ್ರಿಯ ಬೈಕ್ ಆಗಿದ್ದು, ಅಗ್ಗದ ದರದಲ್ಲೂ ಖರೀದಿಗೆ ಲಭ್ಯವಿದೆ. ರೂ.69,694 (ಎಕ್ಸ್-ಶೋರೂಂ - ಬೆಂಗಳೂರು) ಬೆಲೆಯನ್ನು ಪಡೆದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಇಂಪೀರಿಯಲ್ ರೆಡ್ ಮೆಟಾಲಿಕ್, ಅಥ್ಲೆಟಿಕ್ ಬ್ಲೂ ಮೆಟಾಲಿಕ್ ಹಾಗೂ ಜೆನಿ ಗ್ರೇ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಹೊಸ 'ಶೈನ್ 100 ಡಿಎಕ್ಸ್' 98.98 ಸಿಸಿ ಪೆಟ್ರೋಲ್ ಎಂಜಿನ್ ಹಾಗೂ 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 65 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. ಎಲ್‌ಸಿಡಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಕಿಕ್ ಸ್ಟಾರ್ಟ್ ಹಾಗೂ ಸೈಲೆಂಟ್ ಎಲೆಕ್ಟ್ರಿಕ್ ಸ್ಟಾರ್ಟರ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಸಿಬಿಎಸ್ (ಕಂಬೈನ್ಡ್ ಬ್ರೇಕ್ ಸಿಸ್ಟಮ್) & ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

ಹೀರೋ ಎಚ್ಎಫ್ ಡಿಲಕ್ಸ್ (Hero HF Deluxe):
ಈ ಬೈಕ್‌ನ್ನು ಗ್ರಾಹಕರು ಮೆಚ್ಚಿಕೊಂಡಿದ್ದು, ಬಜೆಟ್ ಬೆಲೆಯಲ್ಲಿಯೂ ಸಿಗುತ್ತದೆ. ರೂ.59,881 ರಿಂದ ರೂ.68,484 (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಹೊಂದಿದೆ. 97.2 ಸಿಸಿ ಪೆಟ್ರೋಲ್ ಎಂಜಿನ್ ಮತ್ತು 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 70 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.
ಬಜಾಜ್ ಪ್ಲಾಟಿನಾ 100 (Bajaj Platina 100):
ಇದು ವಿಶ್ವಾಸಾರ್ಹ ಮೋಟಾರ್‌ಸೈಕಲ್ ಎಂದು ಹೆಸರುವಾಸಿಯಾಗಿದೆ. ರೂ.65,407 (ಎಕ್ಸ್-ಶೋರೂಂ - ಬೆಂಗಳೂರು) ಬೆಲೆಯನ್ನು ಒಳಗೊಂಡಿದೆ. 102 ಸಿಸಿ ಪೆಟ್ರೋಲ್ ಎಂಜಿನ್ ಮತ್ತು 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 75 ರಿಂದ 90 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಎಲೆಕ್ಟ್ರಿಕ್ ಸ್ಟಾರ್ಟರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸವಾರರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ಟಿವಿಎಸ್ ರೇಡಿಯನ್ (Tvs Radeon):
ಈ ಬೈಕ್ ಕೂಡ ಸ್ಪರ್ಧಾತ್ಮಕ ದರದಲ್ಲೂ ದೊರೆಯುತ್ತದೆ. ರೂ.69,734 ರಿಂದ ರೂ.80384 (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ. 109.7 ಸಿಸಿ ಪೆಟ್ರೋಲ್ ಎಂಜಿನ್ ಮತ್ತು 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ 73 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ & ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಡ್ರಮ್/ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.


Click it and Unblock the Notifications








