Royal Enfield Bullet 650: ಬೆಸ್ಟ್ ಫೀಚರ್ಸ್.. ಹೊಸ ರಾಯಲ್ ಎನ್‌ಫೀಲ್ಡ್ ಬುಲೆಟ್ 650 ಬೈಕ್ ಬಂದೇ ಬಿಡ್ತು, ಬೆಲೆ ಎಷ್ಟು?
ಇಟಲಿಯ ಮಿಲನ್‌ನಲ್ಲಿ ಅಂತರರಾಷ್ಟ್ರೀಯ ಮಟ್ಟದ ದ್ವಿಚಕ್ರ ವಾಹನ ಪ್ರದರ್ಶನ EICMA - 2025ಕ್ಕೆ ಅದ್ದೂರಿಯಾಗಿ ಚಾಲನೆ ದೊರೆತಿದೆ. ಇಲ್ಲಿ ಬಹುನಿರೀಕ್ಷಿತ ರಾಯಲ್ ಎನ್‌ಫೀಲ್ಡ್ ಬುಲೆಟ್ 650 (Royal Enfield Bullet 650) ಮೋಟಾರ್‌ಸೈಕಲ್‌ನ್ನು ಅನಾವರಣಗೊಳಿಸಲಾಗಿದೆ. ಈ ಬೈಕ್ ನೋಡುಗರ ಕಣ್ಣು ಕುಕ್ಕುವಂತಿದ್ದು, ಹತ್ತಾರು ವೈಶಿಷ್ಟ್ಯಗಳಿಗೂ ಸಾಕ್ಷಿಯಾಗಿದೆ. ಬನ್ನಿ.. ಈ ಮೋಟಾರ್‌ಸೈಕಲ್‌ನ ನಿರೀಕ್ಷಿತ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಹೊಚ್ಚ ಹೊಸ 'ರಾಯಲ್ ಎನ್‌ಫೀಲ್ಡ್ ಬುಲೆಟ್ 650' ಬೈಕ್ ಸ್ಪರ್ಧಾತ್ಮಕ ದರದಲ್ಲಿ ಗ್ರಾಹಕರ ಖರೀದಿಗೆ ದೊರೆಯುವ ನಿರೀಕ್ಷೆಯಿದೆ. ರೂ.3.40 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿರಬಹುದು ಎಂದು ಅದಾಜಿಸಲಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಇದೇ ಮೋಟಾರ್‌ಸೈಕಲ್, ನವೆಂಬರ್ 21 ರಿಂದ 23ರವರೆಗೆ ಆಯೋಜನೆಗೊಂಡಿರುವ 'ಮೋಟೋವರ್ಸ್ 2025'ರಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ.

ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಉತ್ತಮವಾದ 12ವಿ ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಟೈಲ್ ಲ್ಯಾಂಪ್, ಟರ್ನ್ ಸಿಗ್ನಲ್ ಲ್ಯಾಂಪ್ ಹಾಗೂ ಸಿಂಗಲ್ ಪೀಸ್ ಸೀಟ್‌ನ್ನು ಪಡೆದಿದೆ. ಕ್ಯಾನನ್ ಬ್ಲ್ಯಾಕ್ ಹಾಗೂ ಬ್ಯಾಟಲ್‌ಶಿಪ್ ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಈ ಬೈಕ್ ಹೆಚ್ಚು ವಿಶಾಲ ಗಾತ್ರದಲ್ಲಿದೆ. 2,318 ಮಿ.ಮೀ ಉದ್ದ, 892 ಮಿ.ಮೀ ಅಗಲ ಹಾಗೂ 1,137 ಮಿ.ಮೀ ಎತ್ತರವಿದೆ. ಜೊತೆಗಿದು 154 ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,475 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 243 ಕೆಜಿ ತೂಕವಿದೆ.

ನೂತನ 'ಬುಲೆಟ್ 650' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 648 ಸಿಸಿ ಏರ್/ಆಯಿಲ್-ಕೂಲ್ಡ್ ಪ್ಯಾರಲಲ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 47 ಬಿಹೆಚ್ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 52.3 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ. 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.
ಇದು ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್, ಎಲೆಕ್ಟ್ರಿಕ್ ಸ್ಟಾರ್ಟ್, ಸ್ಲಿಪ್ & ಅಸಿಸ್ಟ್ ಕ್ಲಚ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸೀಟ್ ಎತ್ತರವು 800 ಮಿ.ಮೀ ಇದೆ. 14.8 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಹೊಂದಿದೆ.

ಈ ಮೋಟಾರ್‌ಸೈಕಲ್ ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಟ್ವಿನ್ ಶಾಕ್ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಡುಯಲ್ ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ. ರಸ್ತೆಯ ಮೇಲೆ ಬಿಗಿಯಾದ ಹಿಡಿತ ಒದಗಿಸಲು ಉತ್ತಮವಾದ ಟೈರ್ಗಳನ್ನು ಒಳಗೊಂಡಿದೆ.
ಸ್ಟ್ಯಾಂಡರ್ಡ್ ರಾಯಲ್ ಎನ್‌ಫೀಲ್ಡ್ ಬುಲೆಟ್ 350 (Royal Enfield Bullet 350) ವಿಶೇಷತೆಗಳೇನು:
ಇದು ರೂ.1.60 ಲಕ್ಷದಿಂದ ರೂ.1.62 ಲಕ್ಷ (ಎಕ್ಸ್-ಶೋರೂಂ - ನವದೆಹಲಿ) ದರವನ್ನು ಪಡೆದಿದೆ. 349 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 20.4 ಬಿಹೆಚ್ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 27 ಎನ್ಎಂ (ನ್ಯೂಟನ್ ಮೀಟರ್) ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 37 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ.
ಹೊಸ 'ಬುಲೆಟ್ 350' ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಬಲ್ಬ್ ಟೈಪ್ ಇಂಡಿಕೇಟರ್‌ಗಳು ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸ್ಟ್ಯಾಂಡರ್ಡ್ ಮರೂನ್, ಮಿಲಿಟರಿ ರೆಡ್, ಬ್ಲ್ಯಾಕ್ ಗೋಲ್ಡ್, ಬೆಟಾಲಿಯನ್ ಬ್ಲ್ಯಾಕ್, ಸ್ಟ್ಯಾಂಡರ್ಡ್ ಬ್ಲ್ಯಾಕ್ ಹಾಗೂ ಮಿಲಿಟರಿ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಸುರಕ್ಷತೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.


Click it and Unblock the Notifications








