ಇದೇ 27ಕ್ಕೆ ಗಣೇಶ ಹಬ್ಬ: ಹೊಸ ಬೈಕ್ ತೆಗದುಕೊಳ್ಳಬೇಕೇ.. 1 ಲೀ.ಗೆ 90 ಕಿ.ಮೀವರೆಗೆ ಮೈಲೇಜ್, 70,000 ರೂಪಾಯಿಂದ ಶುರು!
ಇದೇ ಆಗಸ್ಟ್ 27ಕ್ಕೆ ಗಣೇಶ ಹಬ್ಬ (Ganesha Festival) ಬಂದಿದ್ದು, ಅಂದು ದೇಶಾದ್ಯಂತ ವಿನಾಯಕನನ್ನು ಶ್ರದ್ಧಾ ಭಕ್ತಿಯಿಂದ ಪೂಜಿಸಲಾಗುತ್ತದೆ. ನೀವು ಈ ಹಬ್ಬಕ್ಕೆ ಹೊಚ್ಚ ಹೊಸ ಮೋಟಾರ್‌ಸೈಕಲ್‌ವೊಂದನ್ನು ಖರೀದಿಸುವ ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ, ಬಜಾಜ್ ಪ್ಲಾಟಿನಾ 100, ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್, ಟಿವಿಎಸ್ ರೇಡಿಯನ್, ಹೋಂಡಾ ಶೈನ್ 100 ಡಿಎಕ್ಸ್ ಹಾಗೂ ಹೀರೋ ಪ್ಯಾಶನ್ ಪ್ಲಸ್ ಬೈಕ್‌ಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ನಾವಿಲ್ಲಿ ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.
ಬಜಾಜ್ ಪ್ಲಾಟಿನಾ (Bajaj Platina 100):
ಇದು ವಿಶ್ವಾಸಾರ್ಹ ಬೈಕ್ ಆಗಿದ್ದು, ದಿನನಿತ್ಯದ ಓಡಾಡಕ್ಕೆ ಹೆಚ್ಚು ಸೂಕ್ತವಾಗಿದೆ. ನಗರ ಪ್ರದೇಶಗಳಲ್ಲಿನ ಸಂಚಾರ ದಟ್ಟಣೆಯಿರುವ ರಸ್ತೆಗಳಲ್ಲೂ ಸುಲಭವಾಗಿ ಚಲಿಸಬಲ್ಲದು. ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. ರೂ.70,611 (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ಬಡ ಹಾಗೂ ಮಧ್ಯಮ ವರ್ಗದ ಗ್ರಾಹಕರು ಕೂಡ ಮನೆಗೆ ತರಬಹುದು.

ಈ ಮೋಟಾರ್‌ಸೈಕಲ್ 102 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 90 ಕಿ.ಮೀ ವರೆಗೆ ಮೈಲೇಜ್ ನೀಡಬಲ್ಲದು. ಅನಲಾಗ್-ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 70 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಸವಾರರ ರಕ್ಷಣೆಗಾಗಿ ಸಿಬಿಎಸ್ (ಕಂಬೈನ್ಡ್ ಬ್ರೇಕ್ ಸಿಸ್ಟಮ್), ಮುಂಭಾಗ (ಫ್ರಂಟ್) ಹಾಗೂ ಹಿಂಭಾಗ (ರೇರ್) ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.
ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ (Hero Super Splendor XTEC):
ಇದೊಂದು ಜನಪ್ರಿಯ ಬೈಕ್ ಎಂದೇ ಹೆಸರುವಾಸಿಯಾಗಿದೆ. ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದೆ. ಅಗ್ಗದ ದರದಲ್ಲೂ ದೊರೆಯಲಿದ್ದು, ರೂ.88,628 ರಿಂದ ರೂ.92,528 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಮ್ಯಾಟ್ ನೆಕ್ಸಸ್ ಬ್ಲೂ, ಮ್ಯಾಟ್ ಗ್ರೇ, ಬ್ಲಾಕ್ ಹಾಗೂ ಕ್ಯಾಂಡಿ ಬ್ಲೇಜಿಂಗ್ ರೆಡ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

ನೂತನ ಸೂಪರ್ ಸ್ಪ್ಲೆಂಡರ್ 124.7 ಸಿಸಿ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 69 ಕಿ.ಮೀ ವರೆಗೆ ಮೈಲೇಜ್ ಕೊಡಬಲ್ಲದು. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂತ್ ಕನೆಕ್ಟಿವಿಟಿ ಮತ್ತು ಐಡಲ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್‌ನಂತಹ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.
ಟಿವಿಎಸ್ ರೇಡಿಯನ್ (Tvs Radeon):
ಈ ಮೋಟಾರ್‌ಸೈಕಲ್ ಸದೃಢ ನಿರ್ಮಾಣ ಹಾಗೂ ಸುದೀರ್ಘ ಬಾಳಿಕೆಯೂ ಬರಲಿದ್ದು, ಸವಾರರಿಗೆ ಆರಾಮದಾಯಕ ಪ್ರಯಾಣವನ್ನು ಒದಗಿಸಲಿದೆ. ದಿನನಿತ್ಯದ ಬಳಕೆ ಮತ್ತು ದೂರದ ಪ್ರಯಾಣ ಎರಡಕ್ಕೂ ಉಪಯುತ್ತವಾಗಿದೆ. ರೂ.73,518 ರಿಂದ ರೂ.86,845 (ಎಕ್ಸ್-ಶೋರೂಂ) ದರದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಎಲ್ಲ ವರ್ಗದವರಿಗೂ ಕೈಗೆಟುಕಲಿದೆ.

ಇದು ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಮೆಟಲ್ ಬ್ಲ್ಯಾಕ್, ಆಲ್ ಬ್ಲ್ಯಾಕ್, ಟೈಟಾನಿಯಂ ಗ್ರೇ, ರಾಯಲ್ ಪರ್ಪಲ್ ಮತ್ತು ಸ್ಟಾರ್‌ಲೈಟ್ ಬ್ಲ್ಯೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 109.7 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 73 ಕಿ.ಮೀ ವರೆಗೆ ಮೈಲೇಜ್ ನೀಡಬಲ್ಲದು. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಹಾಗೂ ಸೈಡ್ ಸ್ಟ್ಯಾಂಡ್ ಇಂಡಿಕೇಟರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

ಹೋಂಡಾ ಶೈನ್ 100 ಡಿಎಕ್ಸ್ (Honda Shine 100 DX):
ಈ ಬೈಕ್ ನಂಬಲರ್ಹವಾಗಿದೆ. ರೂ.74,959 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಅಚ್ಚುಕಟ್ಟಾದ ವಿನ್ಯಾಸವನ್ನು ಪಡೆದಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಇಂಪೀರಿಯಲ್ ರೆಡ್ ಮೆಟಾಲಿಕ್ ಹಾಗೂ ಅಥ್ಲೆಟಿಕ್ ಬ್ಲೂ ಮೆಟಾಲಿಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 70 ಕಿ.ಮೀ ವರೆಗೆ ಮೈಲೇಜ್ ಕೊಡಬಲ್ಲದು. ಎಲ್‌ಸಿಡಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಹೀರೋ ಪ್ಯಾಶನ್ ಪ್ಲಸ್ (Hero Passion Plus):
ಇದು ಸ್ಟೈಲಿಶ್ ಲುಕ್‌ನಿಂದಲೇ ಜನಮನ್ನಣೆ ಗಳಿಸಿದೆ. ರೂ.82,000 (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಬ್ಲ್ಯಾಕ್ ಹೆವಿ ಗ್ರೇ, ಬ್ಲ್ಯಾಕ್ ಗ್ರೇ ಸ್ಟ್ರೈಪ್, ಸ್ಪೋರ್ಟ್ ರೆಡ್ ಹಾಗೂ ಬ್ಲ್ಯಾಕ್ ನೆಕ್ಸಸ್ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 97.2-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 70 ಕಿ.ಮೀ ವರೆಗೆ ಮೈಲೇಜ್ ನೀಡಬಲ್ಲದು. ಡಿಜಿಟಲ್ ಅನಲಾಗ್ ಕ್ಲಸ್ಟರ್ ಮತ್ತು ಮೊಬೈಲ್ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.


Click it and Unblock the Notifications








