Gen Z: ಜೆನ್‌ಜಿಗಳು ಮೆಚ್ಚಿರುವ ಸ್ಕೂಟರ್‌ಗಳಿವು.. ಬೊಂಬಾಟ್ ಮೈಲೇಜ್, ಬೆಲೆಯೂ ಕಮ್ಮಿ.. ವಿಶೇಷತೆಗಳೇನು?

ಸದ್ಯ ಜೆನ್‌ಜಿ (Gen Z) ಜಮಾನ.. 1997 ರಿಂದ 2012ರ ನಡುವೆ ಜನಿಸಿದವರಿಗೆ ಜೆನ್‌ಜಿಗಳೆಂದು ಕರೆಯಲಾಗುತ್ತದೆ. ಬೈಕ್‌ಗಳಿಗೆ ಹೋಲಿಕೆ ಮಾಡಿದರೆ, ಅವರಿಗೆ ಸ್ಕೂಟರ್‌ಗಳ ಮೇಲೆ ವಿಶೇಷವಾದ ಪ್ರೀತಿಯಿದೆ. ಅದರಲ್ಲೂ ಪರ್ಫಾಮೆನ್ಸ್ ಸ್ಕೂಟರ್‌ಗಳನ್ನು ತುಸು ಹೆಚ್ಚೇ ಲೈಕ್ ಮಾಡುತ್ತಾರೆ. ವಿಶೇಷವಾಗಿ ಜೆನ್‌ಜಿಗಳು ಟಿವಿಎಸ್ ಎನ್‌ಟಾರ್ಕ್ 125, ಹೋಂಡಾ ಡಿಯೋ 125, ಹೀರೋ ಜೂಮ್ 110, ಯಮಹಾ ಏರೋಕ್ಸ್ 155 ಹಾಗೂ ಸುಜುಕಿ ಬರ್ಗ್‌ಮನ್ ಸ್ಟ್ರೀಟ್ 125ಗಳನ್ನು ಮೆಚ್ಚಿದ್ದಾರೆ. ಬನ್ನಿ.. ಇವುಗಳ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಟಿವಿಎಸ್ ಎನ್‌ಟಾರ್ಕ್ 125 (TVS Ntorq 125):

ಇದು ಜನಪ್ರಿಯ ಸ್ಕೂಟರ್ ಆಗಿದೆ. ರೂ.80,900 ದಿಂದ ರೂ.1,06 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 124.8 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 10.2 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 10.9 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 47 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.

Gen-Z Like This 5 Scooters Ntorq Dio Xoom Aerox And Burgman Street

ನೂತನ 'ಎನ್‌ಟಾರ್ಕ್ 125' ಸ್ಕೂಟರ್ 98 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. 9 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಹಾಗೂ ಯುಎಸ್‌‍ಬಿ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸ್ಟೆಲ್ತ್ ಬ್ಲ್ಯಾಕ್, ನಾರ್ಡೊ ಗ್ರೇ, ಲೈಟ್ನಿಂಗ್ ಗ್ರೇ, ಹಾರ್ಲೆಕ್ವಿನ್ ಬ್ಲೂ, ಟರ್ಕೋಯಿಸ್ ಬ್ಲೂ, ರೇಸ್ ರೆಡ್ ಹಾಗೂ ಅಮೇಜಿಂಗ್ ರೆಡ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. ಸುರಕ್ಷತೆಗಾಗಿ ಡ್ರಮ್/ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಹೋಂಡಾ ಡಿಯೋ 125 (Honda Dio 125):

ಈ ಸ್ಕೂಟರ್‌ನ್ನು ಕಂಡರೂ ಜೆನ್‌ಜಿಗಳು ಮುಗಿಬಿದ್ದು ಖರೀದಿ ಮಾಡುತ್ತಾರೆ. ಅದಕ್ಕೆ ತಕ್ಕಂತೆ ರೂ.84,620 ದಿಂದ ರೂ.89,570 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 123.92 ಸಿಸಿ ಏರ್-ಕೋಲ್ಡ್, ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 8.30 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 10.4 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 48 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ.

Gen-Z Like This 5 Scooters Ntorq Dio Xoom Aerox And Burgman Street

ಹೊಸ ಡಿಯೋ 125 ಸ್ಕೂಟರ್ 95 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 8.7 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಫಂಕ್ಷನ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಮ್ಯಾಟ್ ಮಾರ್ವೆಲ್ ಬ್ಲೂ ಮೆಟಾಲಿಕ್ ಹಾಗೂ ಪರ್ಲ್ ಸ್ಪೋರ್ಟ್ಸ್ ಯೆಲ್ಲೋ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. ಸವಾರರ ರಕ್ಷಣೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.

ಹೀರೋ ಜೂಮ್ 110 (Hero Xoom 110):

ಇದೊಂದು ಪ್ರಖ್ಯಾತ ಸ್ಕೂಟರ್ ಆಗಿದೆ. ರೂ.77,429 ರಿಂದ ರೂ.82,960 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 10.9 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದ್ದು, 53 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ಸೃಷ್ಟಿಯಿಂದ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

Gen-Z Like This 5 Scooters Ntorq Dio Xoom Aerox And Burgman Street

ಯಮಹಾ ಏರೋಕ್ಸ್ 155 (Yamaha Aerox 155):

ಈ ಸ್ಕೂಟರ್ ರೂ.1.38 ಲಕ್ಷದಿಂದ ರೂ.1.41 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 155 ಸಿಸಿ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 48.62 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಹಾಗೂ ಸ್ಮಾರ್ಟ್ ಕೀಯಂತಹ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

Gen-Z Like This 5 Scooters Ntorq Dio Xoom Aerox And Burgman Street

ಸುಜುಕಿ ಬರ್ಗ್‌ಮನ್ ಸ್ಟ್ರೀಟ್ 125 (Suzuki Burgman Street 125):

ಇದು ರೂ.92,264 ರಿಂದ ರೂ.1.11 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 124 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 48 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸೆಂಟ್ರಲ್ ಲಾಕಿಂಗ್ ಮತ್ತು ಶಟರ್ ಲಾಕ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.

More from DriveSpark

Article Published On: Tuesday, November 4, 2025, 15:41 [IST]
English summary
Gen z like this 5 scooters ntorq dio xoom aerox and burgman street
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+