ಊರಿಗೂ ಸೈ.. ಪ್ಯಾಟೆಗೂ ಜೈ.. ಶ್ರೀಸಾಮಾನ್ಯರ ಬಂಡಿಗಳಿವು.. 69+ ಮೈಲೇಜ್, 80,000 ಬೆಲೆ!
ಸಾಮಾನ್ಯ ಜನರ ದಿನನಿತ್ಯದ ಬಳಕೆಗಾಗಿ ದ್ವಿಚಕ್ರ ವಾಹನಗಳು ಬೇಕೇ ಬೇಕು. ಅದರಲ್ಲೂ ಬೈಕ್‌ಗಳನ್ನು ಎಲ್ಲ ವಯಸ್ಸಿನ ಪುರುಷ ಗ್ರಾಹಕರು ಇಷ್ಟಪಟ್ಟು ಖರೀದಿ ಮಾಡುತ್ತಾರೆ. ನೀವು ಪ್ರತಿದಿನ ಕಚೇರಿ ಹೋಗಲು ಅಥವಾ ಇತರೆ ಕೆಲಸಗಳಿಗಾಗಿ ಹೊಚ್ಚ ಹೊಸ ಮೋಟಾರ್‌ಸೈಕಲ್‌ವೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್, ಹೋಂಡಾ ಎಸ್‌ಪಿ 125, ಟಿವಿಎಸ್ ರೈಡರ್ ಹಾಗೂ ಹೋಂಡಾ ಶೈನ್ ಮಾಡೆಲ್‌ಗಳು ಅತ್ಯುತ್ತಮ ಆಯ್ಕೆಯಾಗಲಿವೆ. ಬನ್ನಿ.. ಈ ನೂತನ ಬೈಕ್‌ಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ.
ಮೊದಲಿಗೆ ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ (Hero Super Splendor XTEC) ಮೋಟಾರ್‌ಸೈಕಲ್ ಬಗ್ಗೆ ಮಾತನಾಡೋಣ. ಇದು ಕನಿಷ್ಠ ರೂ.84,050 ಹಾಗೂ ಗರಿಷ್ಠ ರೂ.88,050 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಈ ಬೈಕ್ 124.7 ಸಿಸಿ ಸಿಂಗಲ್-ಸಿಲಿಂಡರ್, ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಹೊಂದಿದೆ. 7500 ಆರ್‌ಪಿಎಂನಲ್ಲಿ 10.84 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 6000 ಆರ್‌ಪಿಎಂನಲ್ಲಿ 10.6 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

ಈ ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 69 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ. ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂತ್ ಕನೆಕ್ಟಿವಿಟಿ, ಐಡಲ್ ಸ್ಟಾಪ್-ಸ್ಟಾರ್ಟ್ ಸಿಸ್ಟಮ್, ಎಸ್ಎಂಎಸ್ & ಕಾಲ್ ಅಲರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.
ಹೋಂಡಾ ಎಸ್‌ಪಿ 125 (Honda SP 125) ಕುರಿತಂತೆ ಹೇಳುವುದಾದರೆ, ಈ ಬೈಕ್ ರೂ.93,503 ರಿಂದ ರೂ.99,999 (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಇದು 123.94 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 10.87 ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 10.9 ಎನ್ಎಂ (ನ್ಯೂಟನ್ ಮೀಟರ್) ಉತ್ಪಾದಿಸುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 63 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ.

ನೂತನ ಹೋಂಡಾ ಎಸ್‌ಪಿ 125 ಮೋಟಾರ್‌ಸೈಕಲ್ ಎಲ್ಇಡಿ ಹೆಡ್‌ಲೈಟ್, ಫುಲ್ ಡಿಜಿಟಲ್ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್, ಸೈಡ್ ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಫಂಕ್ಷನ್ ಹಾಗೂ ಸೈಲೆಂಟ್ ಸ್ಟಾರ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸವಾರರ ರಕ್ಷಣೆಗಾಗಿ ಡ್ರಮ್/ ಡಿಸ್ಕ್ ಬ್ರೇಕ್ ಆಯ್ಕೆಯನ್ನು ತನ್ನದಾಗಿಸಿಕೊಂಡಿದೆ.
ಟಿವಿಎಸ್ ರೈಡರ್ 125 (TVS Raider 125) ಬೈಕ್ ಕುರಿತಂತೆ ತಿಳಿಸುವುದಾದರೆ, ಇದು ರೂ.89,990 ರಿಂದ ರೂ.1.10 ಲಕ್ಷ ಎಕ್ಸ್-ಶೋರೂಂ ಬೆಲೆಯನ್ನು ಹೊಂದಿದೆ. ಈ ಮೋಟಾರ್‌ಸೈಕಲ್ 124.8 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 11.12 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 11.2 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್ ಆಯ್ಕೆಯನ್ನು ಒಳಗೊಂಡಿದೆ. 67 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ.

ಹೊಸ ಟಿವಿಎಸ್ ರೈಡರ್ 125 ಮೋಟಾರ್‌ಸೈಕಲ್ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 123 ಕೆಜಿ ತೂಕವಿದ್ದು, 10 ಲೀ. ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ. ಸವಾರರ ರಕ್ಷಣೆಗಾಗಿ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ. ಸ್ಟ್ರೈಕಿಂಗ್ ರೆಡ್ & ವಿಕೆಡ್ ಬ್ಲ್ಯಾಕ್ ಸೇರಿದಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.
ಕಡೆಯದಾಗಿ ಹೋಂಡಾ ಶೈನ್ 125 (Honda Shine 125) ಬೈಕ್ ಬಗ್ಗೆ ಹೇಳುವುದಾದರೆ, ಇದು ರೂ.84,551 ರಿಂದ ರೂ.88,551 (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 123.94 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 10.74 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 11 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 5-ಗೇರ್‌ಬಾಕ್ಸ್‌ನ್ನು ಪಡೆದಿದೆ. 55 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ.

ಈ ಹೋಂಡಾ ಶೈನ್ 125 ಮೋಟಾರ್‌ಸೈಕಲ್ ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಜೆನಿ ಗ್ರೇ ಮೆಟಾಲಿಕ್, ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್, ರೆಬೆಲ್ ರೆಡ್ ಮೆಟಾಲಿಕ್ ಹಾಗೂ ಡಿಸೆಂಟ್ ಬ್ಲೂ ಮೆಟಾಲಿಕ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ದೊರೆಯುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications