Hero: 60 ಕಿ.ಮೀ ಮೈಲೇಜ್, ಈ ಅಗ್ಗದ ಹೀರೋ ಸ್ಕೂಟರ್‌ಗೆ ಮುಗಿಬಿದ್ದ ಗ್ರಾಹಕರು.. ಫುಲ್ ಡಿಮ್ಯಾಂಡ್!
ಹೀರೋ ಡೆಸ್ಟಿನಿ 125 (Hero Destini 125) ಜನಪ್ರಿಯ ಸ್ಕೂಟರ್ ಆಗಿದ್ದು, ಉತ್ತಮ ಕಾರ್ಯಕ್ಷಮತೆ ಹಾಗೂ ಆಕರ್ಷಕ ವೈಶಿಷ್ಟ್ಯಗಳಿಗೂ ಹೆಸರುವಾಸಿಯಾಗಿದೆ. ಗ್ರಾಹಕರು ಕೂಡ ನಾಮುಂದು - ತಾಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಅದಕ್ಕೆ ಈ ಜೂನ್ ತಿಂಗಳು ಹೊರತಾಗಿಲ್ಲ. ಒಟ್ಟು 20,140 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 11,140 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ ಸಂಖ್ಯೆಯನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 80.79% ಪ್ರಗತಿಯಾಗಿದೆ.
ನೂತನ ಹೀರೋ ಡೆಸ್ಟಿನಿ 125 ಮಾರಾಟ ಸಂಖ್ಯೆ ಹೆಚ್ಚಳಗೊಳ್ಳಲು ಹತ್ತಾರು ಕಾರಣಗಳಿವೆ. ಬಹುಮುಖ್ಯವಾಗಿ, ಈ ಸ್ಕೂಟರ್ ಕೈಗೆಟುಕುವ ಬೆಲೆಯಲ್ಲಿ ಖರೀದಿದಾರರಿಗೆ ಲಭ್ಯವಾಗುತ್ತದೆ. ಜೊತೆಗೆ ಗರಿಷ್ಠ ಮೈಲೇಜ್‌ನ್ನು ನೀಡಬಲ್ಲದು. ಹೀಗಾಗಿ, ಮಾರಾಟ ಪ್ರಮಾಣವು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ಹೀರೋ ಡೆಸ್ಟಿನಿ 125 ವಿಶೇಷತೆಗಳೇನು:
ಈ ಸ್ಕೂಟರ್ ರೂ.81337 ರಿಂದ ರೂ.92580 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಂಡು ಮನೆಗೆ ತರಬಹುದು. ವಿಎಕ್ಸ್, ಝಡ್ಎಕ್ಸ್ ಹಾಗೂ ಝಡ್ಎಕ್ಸ್ ಪ್ಲಸ್ ಎಂಬ 3 ಅತ್ಯುತ್ತಮ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.
ಹೊಚ್ಚ ಹೊಸ ಹೀರೋ ಡೆಸ್ಟಿನಿ 125 ಸ್ಕೂಟರ್ ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಪಡೆದಿದೆ. ಕರ್ವಿ ಬಾಡಿ ವರ್ಕ್ ಹೊಂದಿದ್ದು, ಎಲ್ಇಡಿ ಹೆಡ್‌ಲೈಟ್, ಟರ್ನ್- ಇಂಡಿಕೇಟರ್‌ಗಳು ಮತ್ತು ಸ್ಲೀಕ್ ಟೈಲ್ ಲೈಟ್‌ನ್ನು ಒಳಗೊಂಡಿದೆ. ಎಟರ್ನಲ್ ವೈಟ್, ರೀಗಲ್ ಬ್ಲ್ಯಾಕ್, ಗ್ರೂವಿ ರೆಡ್, ಕಾಸ್ಮಿಕ್ ಬ್ಲೂ, ಮಿಸ್ಟಿಕ್ ಮೆಜೆಂಟಾ, ಎಟರ್ನಲ್ ವೈಟ್ ಮತ್ತು ರೀಗಲ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಇದು 1862 ಎಂಎಂ ಉದ್ದ, 697 ಎಂಎಂ ಅಗಲ ಮತ್ತು 1125 ಎಂಎಂ ಎತ್ತರವು ಇದೆ. ಜೊತೆಗೆ 162 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1302 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ. 115 ಕೆಜಿ ತೂಕವಿದ್ದು, 5.3 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ.
ನೂತನ ಡೆಸ್ಟಿನಿ ಸ್ಕೂಟರ್ ಹೆಚ್ಚು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಪಡೆದಿದೆ. 124.6 ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 9 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 10.4 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ. 60 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.
ಈ ಸ್ಕೂಟರ್ ಹಲವು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಬಹುಮುಖ್ಯವಾಗಿ ಡಿಜಿಟಲ್ ಡಿಸ್‌ಪ್ಲೇ, ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಬೂಟ್ ಲ್ಯಾಂಪ್, ಎಂಜಿನ್ ಕಿಲ್ ಸ್ವಿಚ್, ಲೊ ಫ್ಯುಯೆಲ್ ವಾರ್ನಿಂಗ್ ಲೈಟ್, ಹಜಾರ್ಡ್ ವಾರ್ನಿಂಗ್ ಇಂಡಿಕೇಟರ್ ಮತ್ತು ಸ್ಮಾರ್ಟ್‌ಫೋನ್ ಕನೆಕ್ಟಿವಿಟಿಯನ್ನು ಹೊಂದಿದೆ. ಇದರೊಂದಿಗೆ ಐ3ಎಸ್ ಟೆಕ್ನಾಲಜಿ ಒಳಗೊಂಡಿದ್ದು, ವಿಶೇಷವಾಗಿ ಇಂಧನ ದಕ್ಷತೆಯನ್ನು ಸುಧಾರಿಸುತ್ತದೆ. ಇದರೊಂದಿಗೆ ಸಿಂಗಲ್ - ಪೀಸ್ ಸೀಟ್ ಆಯ್ಕೆಯನ್ನು ತನ್ನದಾಗಿಸಿಕೊಂಡಿದೆ.
ಹೊಸ ಹೀರೋ ಡೆಸ್ಟಿನಿ 125 ಸ್ಕೂಟರ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗ (ರೇರ್) ಮಾನೋಶಾಕ್ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ರೂಪಾಂತರಗಳಿಗೆ ಅನುಗುಣವಾಗಿ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ. ಟ್ಯೂಬ್‌ಲೆಸ್ ಟೈರ್‌ಗಳನ್ನು ಸಹ ಹೊಂದಿದೆ. ಇದಕ್ಕೆ ಹೋಂಡಾ ಆಕ್ಟಿವಾ 125, ಸುಜುಕಿ ಆಕ್ಸೆಸ್ 125 ಮತ್ತು ಟಿವಿಎಸ್ ಜುಪಿಟರ್ 125 ಸ್ಕೂಟರ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.


Click it and Unblock the Notifications








