Hero: ಬಡವರ ಪ್ರೀಮಿಯಂ ಬೈಕ್‌ಯಿದು.. ಬರೀ 82,000.. ರೂ.100 ಪೆಟ್ರೋಲ್ ಹಾಕಿಸಿದ್ರೆ 65 Km ಮೈಲೇಜ್!
ಹೀರೋ ಗ್ಲಾಮರ್ (Hero Glamour) ಹೆಸರೇ ಹೇಳುವಂತೆ ಬಡವರ ಪ್ರೀಮಿಯಂ ಬೈಕ್ ಆಗಿದೆ. ಇದು ಕಡಿಮೆ ನಿರ್ವಹಣಾ ವೆಚ್ಚ ಹೊಂದಿದ್ದು, ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. 10 ರಿಂದ 15 ವರ್ಷಗಳ ಕಾಲ ಸುಲಭವಾಗಿಯೂ ಬಳಕೆ ಮಾಡಬಹುದು. ನೀವು ಹೊಚ್ಚ ಹೊಸ ಮೋಟಾರ್‌ಸೈಕಲ್‌ವೊಂದನ್ನು ಕೊಂಡುಕೊಳ್ಳಲು ಆಲೋಚಿಸಿದ್ದೀರಾ.. ಹಾಗಾದರೆ ಇದೇ 'ಗ್ಲಾಮರ್' ಅತ್ಯುತ್ತಮವಾದ ಆಯ್ಕೆಯಾಗಲಿದೆ. ಬನ್ನಿ, ಈ ಬೈಕ್‌ನ ದರವೆಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಬೆಲೆ & ರೂಪಾಂತರಗಳು (Price & Variants):
ನೂತನ 'ಹೀರೋ ಗ್ಲಾಮರ್' ಅತಿ ಕಡಿಮೆ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಕನಿಷ್ಠ ರೂ.82,398 ಹಾಗೂ ಗರಿಷ್ಠ ರೂ.86,085 (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ. ಡ್ರಮ್ ಬ್ರೇಕ್ ಮತ್ತು ಡಿಸ್ಕ್ ಬ್ರೇಕ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ವಿನ್ಯಾಸ & ಬಣ್ಣಗಳು (Design & Colours):
ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಫುಲ್ ಎಲ್ಇಡಿ ಹೆಡ್‌ಲ್ಯಾಂಪ್ ಮತ್ತು ಹೆಚ್' ಆಕಾರಕ್ಕೆ ಹೋಲಿಕೆಯಬಲ್ಲ ಎಲ್ಇಡಿ ಟೈಲ್ ಲ್ಯಾಂಪ್‌ನ್ನು ಪಡೆದಿದೆ. ಬ್ಲ್ಯಾಕ್ ಮೆಟಾಲಿಕ್ ಸಿಲ್ವರ್, ಕ್ಯಾಂಡಿ ಬ್ಲೇಜಿಂಗ್ ರೆಡ್, ಬ್ಲ್ಯಾಕ್ ಸ್ಪೋರ್ಟ್ಸ್ ರೆಡ್, ಟೆಕ್ನೋ ಬ್ಲೂ ಮೆಟ್ ಬ್ಲ್ಯಾಕ್ ಮತ್ತು ಗನ್ ಮೆಟಲ್ ಬ್ಲ್ಯಾಕ್ ಸ್ಲೈವ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.
ಸುತ್ತಳತೆ (Dimension):
ಹೊಸ 'ಹೀರೋ ಗ್ಲಾಮರ್' ಹೆಚ್ಚು ವಿಶಾಲ ಗಾತ್ರದಲ್ಲಿದೆ. 2,042 ಮಿ.ಮೀ ಉದ್ದ, 720 ಮಿ.ಮೀ ಹಾಗೂ 1,090 ಮಿ.ಮೀ ಎತ್ತರವಿದೆ. ಜೊತೆಗಿದು 170 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,267 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಬರೋಬ್ಬರಿ 123 ಕೆಜಿ ತೂಕವಿದೆ.
ಕಾರ್ಯಕ್ಷಮತೆ (Performance):
ಈ ಬೈಕ್ ಬೆಲೆಗೆ ತಕ್ಕಂತೆ ಹೆಚ್ಚು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 124.7-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 7,500 ಆರ್‌ಪಿಎಂನಲ್ಲಿ 10.5 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 6,000 ಆರ್‌ಪಿಎಂನಲ್ಲಿ 10.4 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ.
ಮೈಲೇಜ್ (Mileage):
ಇದು ಗರಿಷ್ಠ ಇಂಧನ ದಕ್ಷತೆಯಿಂದಲೂ ಮನೆ ಮಾತಾಗಿದೆ.1 ಲೀಟರ್ ಪೆಟ್ರೋಲ್ ಹಾಕಿಸಿದರೆ, 55 ರಿಂದ 65 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 10 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ. ಭರ್ತಿಯಾಗಿ ತುಂಬಿಸಿದರೆ, 550 ರಿಂದ 650 ಕಿಲೋಮೀಟರ್‌ವರೆಗೆ ಓಡಬಲ್ಲದು.
ವೈಶಿಷ್ಟ್ಯಗಳು (Features):
ನೂತನ 'ಹೀರೋ ಗ್ಲಾಮರ್' ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ. ಡಿಜಿಟಲ್ ಕನ್ಸೋಲ್ ಹಾಗೂ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ನ್ನು ಹೊಂದಿದೆ. 18-ಇಂಚಿನ ಅಲಾಯ್ ವೀಲ್‌ಗಳು ಹಾಗೂ ಟ್ಯೂಬ್‌ಲೆಸ್ ಟೈರ್‌ಗಳನ್ನು ತನ್ನದಾಗಿಸಿಕೊಂಡಿದೆ. 95 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 7.5 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಸೀಟ್ ಎತ್ತರವು 790 ಮಿ.ಮೀ ಇದೆ.
ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup And Braking System):
ಈ ಬೈಕ್ ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಹಾಗೂ ಹಿಂಭಾಗ (ರೇರ್) 5-ಸ್ಟೆಪ್ ಪ್ರಿಲೋಡ್ ಅಡ್ಜಸ್ಟಬಲ್ ಡುಯಲ್ ಶಾಕ್ ಅಬ್ಸಾರ್ಬರ್ಸ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.
ಇದಕ್ಕೆ ಸಾಲು - ಸಾಲು ಪ್ರತಿಸ್ಪರ್ಧಿಗಳಿವೆ. ವಿಶೇಷವಾಗಿ ಹೋಂಡಾ ಎಸ್‌ಪಿ 125 (Honda SP 125), ಟಿವಿಎಸ್ ರೈಡರ್ 125 (TVS Raider 125) ಹಾಗೂ ಬಜಾಜ್ ಪಲ್ಸರ್ 125 (Bajaj Pulsar 125) ಮಾಡೆಲ್‌ಗಳು ಪ್ರಬಲವಾದ ಎದುರಾಳಿಯಾಗಿವೆ.


Click it and Unblock the Notifications








