100 ರೂಪಾಯಿ ಪೆಟ್ರೋಲ್ ಹಾಕಿಸಿದರೆ ಸಾಕು.. ಚಿನ್ನದಂತಹ ಮೈಲೇಜ್ ಬೈಕ್, 59,998ಕ್ಕೆ ಸಿಗುತ್ತದೆ.. ಸೇಲ್ಸ್ ಬಲು ಜೋರು!

ಹೀರೋ ಎಚ್ಎಫ್ ಡಿಲಕ್ಸ್ (Hero HF Deluxe) ಪ್ರಮುಖ ಬೈಕ್ ಆಗಿದೆ. ಇದು ದಿನಬಳಕೆಗೂ ಸೂಕ್ತವಾಗಿದ್ದು, ಗ್ರಾಹಕರು ಕೂಡ ನಾಮುಂದು - ತಾಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಸದ್ಯ ಈ ಜೂನ್ ತಿಂಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ ಮೋಟಾರ್‌ಸೈಕಲ್‌ಗಳ ಪಟ್ಟಿ ಪ್ರಕಟಗೊಂಡಿದೆ. ಅದರಲ್ಲೂ ಇದೇ 'ಎಚ್ಎಫ್ ಡಿಲಕ್ಸ್' ಮೂರನೇ ಸ್ಥಾನದಲ್ಲಿದೆ. ಒಟ್ಟು 1,00,878 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 89,941 ಯುನಿಟ್‌ಗಳನ್ನು ಮಾರಲಾಗಿತ್ತು. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 12.16% ಬೆಳವಣಿಗೆಯಾಗಿದೆ.

ಮೊದಲ ಸ್ಥಾನದಲ್ಲಿ ಹೀರೋ ಸ್ಪ್ಲೆಂಡರ್ (Hero Splendor) ಇದ್ದು, ಸರಿ ಸುಮಾರು 3,31,057 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. ಎರಡನೇ ಸ್ಥಾನವನ್ನು ಹೋಂಡಾ ಶೈನ್ (Honda Shine) ತನ್ನದಾಗಿಸಿಕೊಂಡಿದೆ. ಬರೋಬ್ಬರಿ 1,43,218 ಯುನಿಟ್‌ಗಳನ್ನು ಮಾರಲಾಗಿದೆ. ಆದರೂ, ಇವುಗಳಿಗೆ 'ಹೀರೋ ಎಚ್ಎಫ್ ಡಿಲಕ್ಸ್' ಪ್ರಬಲವಾದ ಸ್ಪರ್ಧೆಯೊಡ್ಡುತ್ತಿದೆ.

Hero HF Deluxe Bike June 2025 Sales Report

ಹೀರೋ ಎಚ್ಎಫ್ ಡಿಲಕ್ಸ್ ಬೈಕ್ ಮಾರಾಟ ಸಂಖ್ಯೆ ಹೆಚ್ಚಳಗೊಳ್ಳುವುದಕ್ಕೆ ಹಲವು ಕಾರಣಗಳಿವೆ. ಬಹುಮುಖ್ಯವಾಗಿ ಆಕರ್ಷಕವಾದ ವಿನ್ಯಾಸ ಹೊಂದಿದ್ದು, ನಾನಾ ಬಗೆಯ ವೈಶಿಷ್ಟ್ಯಗಳನ್ನು ಪಡೆದಿದೆ. ಇದರೊಂದಿಗೆ ತುಂಬಾ ಜಾಸ್ತಿ ಮೈಲೇಜ್ ನೀಡಬಲ್ಲದು. ಹೀಗಾಗಿ, ಈ ಮೋಟಾರ್‌ಸೈಕಲ್‌ ಮಾರಾಟ ಪ್ರಮಾಣವು ದಿನದಿಂದ ದಿನಕ್ಕೆ ಅಧಿಕಗೊಳ್ಳುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ಹೀರೋ ಎಚ್ಎಫ್ ಡಿಲಕ್ಸ್ ವಿಶೇಷತೆಗಳೇನು:

ಇದೊಂದು ಪ್ರಯಾಣಿಕ ಬೈಕ್ ಆಗಿದ್ದು, ರೂ.59,998 ರಿಂದ ರೂ.68,768 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಅತ್ಯುತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್ ಆಯ್ಕೆಯನ್ನು ಪಡೆದಿದೆ. ಬ್ಲ್ಯಾಕ್ ವಿತ್ ಪರ್ಪಲ್, ಬ್ಲ್ಯಾಕ್ ವಿತ್ ರೆಡ್, ಟೆಕ್ನೋ ಬ್ಲ್ಯೂ, ಹೆವಿ ಗ್ರೇ ವಿತ್ ಗ್ರೀನ್ ಮತ್ತು ಹೆವಿ ಗ್ರೇ ವಿತ್ ಬ್ಲ್ಯಾಕ್ ಒಳಗೊಂಡಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಮೋಟಾರ್‌ಸೈಕಲ್‌ 97.2 ಸಿಸಿ ಸಾಮರ್ಥ್ಯದ ಸಿಂಗಲ್-ಸಿಲಿಂಡರ್, ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 8.02 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 8.05 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 70 ಕಿ.ಮೀವರೆಗೆ ಮೈಲೇಜ್ ನೀಡಬಲ್ಲದು.

ನೂತನ 'ಎಚ್ಎಫ್ ಡಿಲಕ್ಸ್' ಬೈಕ್ 87 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 3.42 ಸೆಕೆಂಡುಗಳಲ್ಲಿ 0 ರಿಂದ 40 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟೋ ಗಾರ್ಡ್, ಐಡಲ್ ಸ್ಟಾಪ್-ಸ್ಟಾರ್ಟ್ ಸಿಸ್ಟಮ್ & ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. 1965 ಎಂಎಂ ಉದ್ದ, 720 ಎಂಎಂ ಅಗಲ ಮತ್ತು 1045 ಎಂಎಂ ಎತ್ತರವು ಇದೆ. ಜೊತೆಗೆ 165 ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1235 ವೀಲ್‌ಬೇಸ್‌ನ್ನು ತನ್ನದಾಗಿಸಿಕೊಂಡಿದೆ.

ಇದು ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗ (ರೇರ್) ಟ್ವಿನ್-ಪ್ರಿಲೋಡ್ ಅಡ್ಜಸ್ಟಬಲ್ ಶಾಕ್ ಅಬ್ಸಾರ್ಬರ್‌ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಹಾಗೆಯೇ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ. ಇದು ಸರಿ ಸುಮಾರು 112 ಕೆಜಿ ತೂಕವಿದ್ದು, 9.6 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ.

ಈಚೆಗೆ ಹೀರೋ ಎಚ್ಎಫ್ ಡಿಲಕ್ಸ್ ಪ್ರೊ (Hero HF Deluxe Pro) ಸಹ ಬಿಡುಗಡೆಯಾಗಿದೆ:

ಈ ಬೈಕ್ ರೂ.73,550 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೊಸದಾದ ಎಲ್‌ಇಡಿ ಹೆಡ್‌ಲ್ಯಾಂಪ್‌, ಡಿಜಿಟಲ್ ಸ್ಪೀಡೋಮೀಟರ್ ಮತ್ತು ಐ3ಎಸ್ ಐಡಲ್ ಸ್ಟಾಪ್-ಸ್ಟಾರ್ಟ್ ಆಯ್ಕೆಯನ್ನು ಹೊಂದಿದೆ. 97.2 ಸಿಸಿ ಏರ್-ಕೂಲ್ಡ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 18-ಇಂಚಿನ ಟ್ಯೂಬ್‌ಲೆಸ್ ಟೈರ್‌ಗಳು ಹಾಗೂ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

More from DriveSpark

Article Published On: Monday, July 28, 2025, 16:07 [IST]
English summary
Hero hf deluxe bike june 2025 sales report
Read more on hero motocorp india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+