Hero: ಇದು ಸ್ಪ್ಲೆಂಡರ್ ಅಲ್ಲ.. 70 Km ಮೈಲೇಜ್, 62 ಸಾವಿರದ ಈ ಪ್ರಖ್ಯಾತ ಹೀರೋ ಬೈಕ್‌ಗೆ ಮುಗಿಬಿದ್ದ ಗ್ರಾಹಕರು!
ಹೀರೋ ಹೆಚ್ಎಫ್ ಡಿಲಕ್ಸ್ (Hero HF Deluxe) ಜನಪ್ರಿಯ ಮೋಟಾರ್‌ಸೈಕಲ್ ಆಗಿದೆ. ಇದು ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ದೊರೆಯುವುದರಿಂದ ಮಧ್ಯಮ ವರ್ಗದ ಜನರು ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸ್ಪ್ಲೆಂಡರ್ ಬೈಕ್‌ನಂತೆ 'ಹೆಚ್ಎಫ್ ಡಿಲಕ್ಸ್' ಕೂಡ ಉತ್ತಮವಾಗಿ ಮಾರಾಟವಾಗುತ್ತಿದೆ. ಅದಕ್ಕೆ ಸಾಕ್ಷಿ ಎಂಬಂತೆ ಈ ಫೆಬ್ರವರಿಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ 5 ಮೋಟಾರ್‌ಸೈಕಲ್‌ಗಳ ಪಟ್ಟಿಯಲ್ಲಿಯೂ ಹೀರೋ ಹೆಚ್ಎಫ್ ಡಿಲಕ್ಸ್ ಇದ್ದು, ಮೂರನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ಮೊದಲ ಸ್ಥಾನದಲ್ಲಿ ಹೀರೋ ಸ್ಪ್ಲೆಂಡರ್ ಹಾಗೂ ಎರಡನೇ ಸ್ಥಾನದಲ್ಲಿ ಹೋಂಡಾ ಶೈನ್ ಬೈಕ್ ಇದೆ.
ಕಳೆದ ತಿಂಗಳು (ಫೆಬ್ರವರಿ-2025) ಹೀರೋ ಮೋಟೋಕಾರ್ಪ್ ಬರೋಬ್ಬರಿ 70,581 ಯುನಿಟ್ 'ಹೆಚ್ಎಫ್ ಡಿಲಕ್ಸ್' ಬೈಕ್‌ಗಳನ್ನು ಮಾರಾಟಗೊಳಿಸಲಾಗಿದೆ. 2024ರ ಇದೇ ಅವಧಿಯಲ್ಲಿ 76,138 ಯುನಿಟ್‌ಗಳನ್ನು ಮಾರಲಾಗಿತ್ತು. ಅದಕ್ಕೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ (YoY) ಮಾರಾಟ ಪ್ರಮಾಣ ಕೊಂಚ ಮಟ್ಟಿಗೆ ಅಂದರೆ ಶೇಕಡ -7.87% ಕುಸಿತವಾಗಿದೆ.

ಆದರೆ, ಈ ಜನವರಿಯಲ್ಲಿಯೂ ಸರಿ ಸುಮಾರು 62,223 ಯುನಿಟ್ 'ಹೀರೋ ಹೆಚ್ಎಫ್ ಡಿಲಕ್ಸ್' ಮೋಟಾರ್‌ಸೈಕಲ್‌ಗಳನ್ನು ಮಾರಾಟ ಮಾಡಲಾಗಿದೆ. ಇದರಿಂದ ತಿಂಗಳಿಂದ ತಿಂಗಳ (MoM) ಮಾರಾಟ ಪ್ರಮಾಣ ಶೇಕಡ 11.84% ಅಧಿಕಗೊಂಡಿದೆ. ವಿಶೇಷವಾಗಿ ಈ 'ಹೆಚ್ಎಫ್ ಡಿಲಕ್ಸ್' ಎರಡು ದಶಕಗಳಿಂದ ಯಶಸ್ವಿಯಾಗಿ ಮಾರಾಟಗೊಳುತ್ತಿದೆ. 2015ರಲ್ಲಿ ಹಳೆಯ 'ಸಿಡಿ ಡಿಲಕ್ಸ್' ಎಂಬ ಹೆಸರನ್ನು 'ಹೆಚ್ಎಫ್ ಡಿಲಕ್ಸ್' ಎಂದು ಮರುನಾಮಕರಣ ಮಾಡಲಾಗಿತ್ತು.
ಸದ್ಯ, ದೇಶೀಯವಾಗಿ ಖರೀದಿಗೆ ದೊರೆಯುವ ಹೊಚ್ಚ ಹೊಸ 'ಹೀರೋ ಹೆಚ್ಎಫ್ ಡಿಲಕ್ಸ್' ಬೈಕ್ ರೂ.62,468 ರಿಂದ ರೂ.70,348 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಬ್ಲ್ಯಾಕ್ ವಿತ್ ಪರ್ಪಲ್, ಬ್ಲ್ಯಾಕ್ ವಿತ್ ರೆಡ್, ಟೆಕ್ನೋ ಬ್ಲ್ಯೂ, ಹೆವಿ ಗ್ರೇ ವಿತ್ ಗ್ರೀನ್, ಹೆವಿ ಗ್ರೇ ವಿತ್ ಬ್ಲ್ಯಾಕ್ ಸೇರಿದಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಮೋಟಾರ್‌ಸೈಕಲ್ 97.2 ಸಿಸಿ ಸಿಂಗಲ್-ಸಿಲಿಂಡರ್, ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 8,000 ಆರ್‌ಪಿಎಂನಲ್ಲಿ 8.02 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 6,000 ಆರ್‌ಪಿಎಂನಲ್ಲಿ 8.05 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದ್ದು, 70 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ನೂತನ ಹೀರೋ ಹೆಚ್ಎಫ್ ಡಿಲಕ್ಸ್ ಬೈಕ್, ಕೇವಲ 3.42 ಸೆಕೆಂಡುಗಳಲ್ಲಿ 0 ರಿಂದ 40 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟೋ ಗಾರ್ಡ್, ಐಡಲ್ ಸ್ಟಾಪ್-ಸ್ಟಾರ್ಟ್ ಸಿಸ್ಟಮ್ ಹಾಗೂ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಹೊಸ ಹೆಚ್ಎಫ್ ಡಿಲಕ್ಸ್ ಮೋಟಾರ್‌ಸೈಕಲ್, ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಟ್ವಿನ್ ಪ್ರಿಲೋಡ್ ಅಡ್ಜಸ್ಟಬಲ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್ ಆಯ್ಕೆಯನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ. ಇದು 112 ಕೆಜಿ ತೂಕವಿದ್ದು, 9.6 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








