70 Km ಮೈಲೇಜ್.. 79,000 ಬೆಲೆ.. ಬಡವರ ಬಂಡಿ ಹೀರೋ ಸ್ಪ್ಲೆಂಡರ್‌ ಬೈಕ್‍‍ಗಾಗಿ ಮುಗಿಬಿದ್ದ ಗ್ರಾಹಕರು!

ಹೀರೋ ಸ್ಪ್ಲೆಂಡರ್ (Hero Splendor) ವಿಶ್ವಾಸಾರ್ಹತೆಗೆ ಹೆಸರುವಾಗಿರುವ ಮೋಟಾರ್‌ಸೈಕಲ್‌ ಆಗಿದೆ. ಇದು ಕಡಿಮೆ ನಿರ್ವಹಣಾ ವೆಚ್ಚ ಹಾಗೂ ಗರಿಷ್ಠ ಇಂಧನ ದಕ್ಷತೆ ಹೊಂದಿದ್ದು, ಮಧ್ಯಮ ವರ್ಗದ ಗ್ರಾಹಕರು ನಾಮುಂದು - ತಾಮುಂದು ಖರೀದಿಗೆ ಮಾಡುತ್ತಿದ್ದಾರೆ. ಎಂದಿನಂತೆ ಈ 'ಮೇ' ತಿಂಗಳು, ದೇಶೀಯವಾಗಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ 10 ಬೈಕ್‍‍ಗಳ ಪಟ್ಟಿಯಲ್ಲಿ ಇದೇ 'ಸ್ಪ್ಲೆಂಡರ್‌' ಮೊದಲ ಸ್ಥಾನದಲ್ಲಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಕಳೆದ ತಿಂಗಳು (ಮೇ - 2025) ಹೀರೋ ಕಂಪನಿಯು ಒಟ್ಟು 3,10,335 ಯುನಿಟ್ 'ಸ್ಪ್ಲೆಂಡರ್' ಮೋಟಾರ್‌ಸೈಕಲ್‌ಗಳನ್ನು ಮಾರಾಟಗೊಳಿಸಿದೆ. 2024ರ ಮೇನಲ್ಲಿ 3,04,663 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಈ ಅಂಕಿ ಸಂಖ್ಯೆಗೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 1.86% ಪ್ರಗತಿಯಾಗಿದೆ. ಇದರೊಂದಿಗೆ ಶೇಕಡ 35.05% ಮಾರುಕಟ್ಟೆ ಪಾಲನ್ನು ಹೊಂದಿದೆ.

Hero Splendor Bike May 2025 Sales Report

ನೂತನ ಹೀರೋ ಸ್ಪ್ಲೆಂಡರ್ ಬೈಕ್ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗಲು ನಾನಾ ಕಾರಣಗಳಿವೆ. ಬಹುಮುಖ್ಯವಾಗಿ ಈ ಮೋಟಾರ್‌ಸೈಕಲ್‌ ಬಜೆಟ್ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಜೊತೆಗೆ ಹೆಚ್ಚಿನ ಮೈಲೇಜ್ ನೀಡಲಿದ್ದು, ಎಂತಹ ರಸ್ತೆಯಲ್ಲಿ ಬೇಕಾದರೂ ಸುಲಭವಾಗಿ ಚಲಿಸಬಲ್ಲದು. ಹೀಗಾಗಿ ಉತ್ತಮವಾಗಿ ಮಾರಾಟವಾಗುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ಸದ್ಯ, ಹೊಚ್ಚ ಹೊಸ 'ಹೀರೋ ಸ್ಪ್ಲೆಂಡರ್' ಮೋಟಾರ್‌ಸೈಕಲ್‌ ಸ್ಪ್ಲೆಂಡರ್ ಪ್ಲಸ್ ಹಾಗೂ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ ಎರಡು ವಿಧದ ಆಯ್ಕೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಇವುಗಳು ಒಂದಕ್ಕಿಂತ ಒಂದು ಅದ್ಬುತವಾಗಿದ್ದು, ಬೆಲೆಗೆ ತಕ್ಕಂತೆ ವೈಶಿಷ್ಟ್ಯದ ವಿಚಾರದಲ್ಲಿ ಒಂದಷ್ಟು ಬದಲಾವಣೆಗಳನ್ನು ಹೊಂದಿವೆ.

Hero Splendor Bike May 2025 Sales Report

ಹೀರೋ ಸ್ಪ್ಲೆಂಡರ್ ಪ್ಲಸ್ ವಿಶೇಷತೆಗಳೇನು:

ಇದು ಕನಿಷ್ಠ ರೂ.79,000 ಹಾಗೂ ಗರಿಷ್ಠ ರೂ.85,000 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದ್ದು, ಹಲವು ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ. ತುಂಬಾ ಸರಳವಾದ ವಿನ್ಯಾಸವನ್ನು ಒಳಗೊಂಡಿದೆ. ಬ್ಲ್ಯಾಕ್ ರೆಡ್ ಪರ್ಪಲ್, ಸ್ಪೋರ್ಟ್ಸ್ ರೆಡ್ ಬ್ಲ್ಯಾಕ್ & ಫೋರ್ಸ್ ಸಿಲ್ವರ್ ಒಳಗೊಂಡಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ.

ಈ ಬೈಕ್ ಬೆಲೆಗೆ ತಕ್ಕಂತೆ ಹೆಚ್ಚು ಬಲಿಷ್ಠವಾದ 97 ಸಿಸಿ ಪೆಟ್ರೋಲ್ ಎಂಜಿನ್‌ ಹಾಗೂ 5-ಸ್ಪೀಡ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿದೆ. 70 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂತ್ ಕನೆಕ್ಟಿವಿಟಿ, ಸ್ಮಾರ್ಟ್‌ಫೋನ್ ಅಪ್ಲಿಕೇಶನ್ ಸಪೋರ್ಟ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ ವಿಶೇಷತೆಗಳೇನು:

ಇದು ರೂ.88,000 ರಿಂದ ರೂ.92,000 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 124 ಸಿಸಿ ಪೆಟ್ರೋಲ್ ಎಂಜಿನ್ ಮತ್ತು 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 69 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಜೊತೆಗೆ ಉತ್ತಮವಾಗಿರುವ ವಿನ್ಯಾಸ ಹೊಂದಿದೆ. ಮ್ಯಾಟ್ ನೆಕ್ಸಸ್ ಬ್ಲೂ, ಮ್ಯಾಟ್ ಗ್ರೇ, ಬ್ಲಾಕ್ ಮತ್ತು ಕ್ಯಾಂಡಿ ಬ್ಲೇಜಿಂಗ್ ರೆಡ್ ಎಂಬ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಖರೀದಿದಾರರಿಗೆ ಸಿಗುತ್ತದೆ.

ಈ ಮೋಟಾರ್‌ಸೈಕಲ್‌ ಡಿಜಿಟಲ್ ಕ್ಲಸ್ಟರ್ ಹಾಗೂ ಬ್ಲೂಟೂತ್ - ಕನೆಕ್ಟಿವಿಟಿ ಒಳಗೊಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಬರೋಬ್ಬರಿ 122 ಕೆಜಿ ತೂಕವಿದ್ದು, 12 - ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ. ಸೀಟ್ ಹೈಟ್ 793 ಎಂಎಂ ಇದೆ. ಸವಾರರ ರಕ್ಷಣೆಗಾಗಿ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

Article Published On: Friday, June 20, 2025, 17:28 [IST]
English summary
Hero splendor bike may 2025 sales report
Read more on hero motocorp india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+