Hero: ಶೋರೂಂ ಮುಂದೆ ಸಾಲು ಕಟ್ಟಿದ ಗ್ರಾಹಕರು.. 70 ಕಿ.ಮೀ ಮೈಲೇಜ್, ಬಡವರ ಬಂಡಿ ಹೀರೋ ಸ್ಪ್ಲೆಂಡರ್‌ಗೆ ಫುಲ್ ಡಿಮ್ಯಾಂಡ್!

ಹೀರೋ ಸ್ಪ್ಲೆಂಡರ್‌ (Hero Splendor) ನಂಬರ್ 1 ಬೈಕ್ ಆಗಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಈ ಸೆಪ್ಟೆಂಬರ್ ತಿಂಗಳಲ್ಲೂ 'ಸ್ಪ್ಲೆಂಡರ್‌' ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 3,82,383 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 3,75,886 ಯುನಿಟ್‌ಗಳನ್ನು ಮಾರಲಾಯಿತ್ತು. ಈ ಅಂಕಿಅಂಶವನ್ನು ವಿಶ್ಲೇಷಣೆ ಮಾಡಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ 1,73% ಪ್ರಗತಿಯಾಗಿದೆ.

ಹೊಸ 'ಹೀರೋ ಸ್ಪ್ಲೆಂಡರ್‌' ಮಾರಾಟ ಸಂಖ್ಯೆ ಉತ್ತಮವಾಗಿರಲು ಹಲವು ಕಾರಣಗಳಿವೆ. ಈ ಬೈಕ್ ಅತಿ ಕಡಿಮೆ ದರದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಜೊತೆಗೆ ಗರಿಷ್ಠ ಮೈಲೇಜ್‌ನ್ನು ನೀಡುತ್ತದೆ. ನಗರ ಹಾಗೂ ಗ್ರಾಮೀಣ ಭಾಗದ ರಸ್ತೆಗಳಿಗೂ ಸುಲಭವಾಗಿ ಹೊಂದಾಣಿಕೆಯಾಗುತ್ತದೆ. ಹೀಗಾಗಿ, 'ಸ್ಪ್ಲೆಂಡರ್‌' ಮಾರಾಟವು ಚೆನ್ನಾಗಿದೆ ಎನ್ನಲಾಗಿದೆ.

Hero Splendor Bike September 2025 Sales Report

ದೇಶೀಯ ಮಾರುಕಟ್ಟೆಯಲ್ಲಿ 'ಹೀರೋ ಸ್ಪ್ಲೆಂಡರ್‌' ಎರಡು ವಿಧದಲ್ಲಿ ಲಭ್ಯವಿದೆ. ಅವುಗಳೆಂದರೆ, ಸ್ಪ್ಲೆಂಡರ್ ಪ್ಲಸ್ ಹಾಗೂ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್. ಇವು ಒಂದಕ್ಕಿಂತ ಒಂದು ಚೆನ್ನಾಗಿದ್ದು, ಬೆಲೆಗೆ ತಕ್ಕಂತೆ ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿವೆ.

ಹೀರೋ ಸ್ಪ್ಲೆಂಡರ್‌ ಪ್ಲಸ್ (Hero Splendor Plus) ವಿಶೇಷತೆಗಳೇನು:

ಇದು ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ ರೂ.73,902 ರಿಂದ ರೂ.76,437 (ಎಕ್ಸ್-ಶೋರೂಂ - ನವದೆಹಲಿ) ದರವನ್ನು ಪಡೆದಿದೆ. ಸ್ಪೋರ್ಟ್ಸ್ ರೆಡ್ ಬ್ಲ್ಯಾಕ್, ಬ್ಲ್ಯಾಕ್ ಹೆವಿ ಗ್ರೇ, ಬ್ಲ್ಯೂ ಬ್ಲ್ಯಾಕ್, ಬ್ಲ್ಯಾಕ್ ರೆಡ್ ಪರ್ಪಲ್, ಫೋರ್ಸ್ ಸಿಲ್ವರ್, ಇಂಡಸ್ಟ್ರಿಯಲ್ ಡಾರ್ಕ್ ಗ್ರೇ ಹಾಗೂ ಮ್ಯಾಟ್ ಗ್ರೇ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

Hero Splendor Bike September 2025 Sales Report

ಈ ಬೈಕ್ 2,000 ಮಿ.ಮೀ ಉದ್ದ, 720 ಮಿ.ಮೀ ಅಗಲ ಹಾಗೂ 1,052 ಮಿ.ಮೀ ಎತ್ತರವಿದೆ. 165 ಮಿ.ಮೀ ಗ್ರೌಂಡ್ ಕ್ಲಿಯರೆನ್ ಮತ್ತು 1,236 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ. ಸರಿ ಸುಮಾರು 112 ಕೆಜಿ ತೂಕವಿದೆ. 9.8 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ.

ನೂತನ 'ಸ್ಪ್ಲೆಂಡರ್‌ ಪ್ಲಸ್' 97.2 ಸಿಸಿ ಪೆಟ್ರೋಲ್ ಎಂಜಿನ್‌ ಹಾಗೂ 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 70 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂತ್ ಕನೆಕ್ಟಿವಿಟಿ & ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್ ಮತ್ತು ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ (Hero Super Splendor XTEC) ಹೇಗಿದೆ:

ಈ ಮೋಟಾರ್‌ಸೈಕಲ್‌ ರೂ.81,998 ರಿಂದ ರೂ.85,594 (ಎಕ್ಸ್-ಶೋರೂಂ - ನವದೆಹಲಿ) ಬೆಲೆಯನ್ನು ಹೊಂದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಕ್ಯಾಂಡಿ ಬ್ಲೇಜಿಂಗ್ ರೆಡ್, ಬ್ಲ್ಯಾಕ್, ಮ್ಯಾಟ್ ಗ್ರೇ ಹಾಗೂ ಮ್ಯಾಟ್ ನೆಕ್ಸಸ್ ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಹೊಸ 'ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್' 2,042 ಮಿ.ಮೀ ಉದ್ದ, 729 ಮಿ.ಮೀ ಅಗಲ ಹಾಗೂ 1,092 ಮಿ.ಮೀ ಎತ್ತರವಿದೆ. 180 ಮಿ.ಮೀ ಗ್ರೌಂಡ್ ಕಿಯರೆನ್ಸ್ & 1267 ವೀಲ್‌ಬೇಸ್‌ನ್ನು ಹೊಂದಿದೆ. ಬರೋಬ್ಬರಿ 122 ಕೆಜಿ ತೂಕವಿದೆ. 12 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ತನ್ನದಾಗಿಸಿಕೊಂಡಿದೆ.

ಇದು 124.7 ಸಿಸಿ ಪೆಟ್ರೋಲ್ ಎಂಜಿನ್‌ ಮತ್ತು 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 69 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂತ್ ಕನೆಕ್ಟಿವಿಟಿ ಹಾಗೂ ಸೈಡ್ ಸ್ಟಾಂಡ್ ಎಂಜಿನ್ ಕಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.

More from DriveSpark

Article Published On: Friday, October 24, 2025, 15:41 [IST]
English summary
Hero splendor bike september 2025 sales report
Read more on hero motocorp india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+