Hero Splendor EV: 99,000 ರೂಪಾಯಿ.. ಹೀರೋ ಸ್ಪ್ಲೆಂಡರ್ ಎಲೆಕ್ಟ್ರಿಕ್ ಬೈಕ್ ಮಾರಾಟಕ್ಕೆ?

ನಗರ ಹಾಗೂ ಗ್ರಾಮೀಣ ಭಾಗದ ಜನರ ನೆಚ್ಚಿನ ಮೋಟಾರ್‌ಸೈಕಲ್‌ ಆಗಿ ಹೀರೋ ಸ್ಪ್ಲೆಂಡರ್ (Hero Splendor) ಜನಪ್ರಿಯವಾಗಿದೆ. ದಶಕಗಳಿಂದಲೂ ಮಾರಾಟದಲ್ಲಿ ನಂ.1 ಸ್ಥಾನದಲ್ಲಿದ್ದು, ಬಡ ಮತ್ತು ಮಧ್ಯಮ ವರ್ಗದ ಗ್ರಾಹಕರು ನಾ ಮುಂದು - ತಾ ಮುಂದು ಎಂಬಂತೆ ಕೊಂಡುಕೊಳ್ಳುತ್ತಿದ್ದಾರೆ. ಇದು ಅಗ್ಗದ ದರದಲ್ಲೂ ಖರೀದಿಗೆ ಲಭ್ಯವಿದೆ. ವಿಶೇಷವಾಗಿ ಪಟ್ಟಣ ಪ್ರದೇಶಗಳಲ್ಲಿ ಕಚೇರಿ ಕೆಲಸಕ್ಕೆ ತೆರುಳುವವರು ಮತ್ತು ಆಹಾರ ಸಾಮಾಗ್ರಿ ಡೆಲಿವರಿ ಮಾಡುವರು ಈ ಬೈಕ್‌ನ್ನು ಹೆಚ್ಚಾಗಿ ಬಳಕೆ ಮಾಡುತ್ತಾರೆ. ಅದೇ ರೀತಿಯಲ್ಲಿ ಹಳ್ಳಿಗಳಲ್ಲಿ ಕೃಷಿಕರ ಮಿತ್ರ ಎಂದೇ 'ಸ್ಪ್ಲೆಂಡರ್' ಖ್ಯಾತಿ ಗಳಿಸಿದ್ದು, ಕಚ್ಚಾ ರಸ್ತೆಗಳಲ್ಲಿಯೂ ಜಮೀನಿನಿಂದ ಮನೆಗಳಿಗೆ ಕ್ವಿಂಟಾಲ್‌ಗಟ್ಟಲೆ ಲಗೇಜ್‌ನ್ನು ಸುಲಭವಾಗಿ ಸಾಗಾಟ ಮಾಡಬಹುದಾಗಿದೆ.

ಸದ್ಯ 'ಹೀರೋ ಸ್ಪ್ಲೆಂಡರ್' ಎಲೆಕ್ಟ್ರಿಕ್ ರೂಪದಲ್ಲಿ ಮಾರಾಟಕ್ಕೆ ಬರಲಿದೆ ಎಂದು ಆಗಾಗ್ಗೆ ಗಾಳಿ ಸುದ್ದಿಗಳು ಹರಿದಾಡುತ್ತಿರುತ್ತವೆ. ಒಂದೊಮ್ಮೆ ಎಲ್ಲವು ಅಂದುಕೊಂಡಂತೆ ನಡೆದು ಸ್ಪ್ಲೆಂಡರ್ ಇ-ಮೋಟಾರ್‌ಸೈಕಲ್‌ನ್ನು ಕಂಪನಿಯು ಪರಿಚಯಿಸಿದರೆ ಬೆಲೆ ಎಷ್ಟಿರಲಿದೆ.. ವೈಶಿಷ್ಟ್ಯಗಳು ಏನಿರಲಿದೆ ಎಂಬುದರ ಕುರಿತಂತೆ ನಿರೀಕ್ಷಿತ ವಿವರಗಳನ್ನು ತಿಳಿಯೋಣ.

Hero Splendor Ev Expected Launch Soon Price Range And Features Details

ಹೊಚ್ಚ ಹೊಸ ಹೀರೋ ಸ್ಪ್ಲೆಂಡರ್ ಇವಿ ಬಿಡುಗಡೆ ಬಗ್ಗೆ ಕಂಪನಿ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಲ್ಲ. ಆದರೂ ಈ ಎಲೆಕ್ಟ್ರಿಕ್ ಮೋಟಾರ್‌ಸೈಕಲ್‌ ಅಗ್ಗದ ದರದಲ್ಲಿ ಖರೀದಿಗೆ ದೊರೆಯಲಿದ್ದು, ರೂ.99,000 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿರಬಹುದು ಎನ್ನಲಾಗಿದೆ. ದೇಶೀಯ ಮಾರುಕಟ್ಟೆಗೆ 2027ರಲ್ಲಿ ಪರಿಚಯಿಸಬಹುದು ಎಂದು ಅಂದಾಜಿಸಲಾಗಿದೆ.

ಈ ಎಲೆಕ್ಟ್ರಿಕ್ ಬೈಕ್ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿರಲಿದೆ. 4 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 6 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಗಳನ್ನು ಹೊಂದಿರುವ ಸಾಧ್ಯತೆಯಿದೆ. ಭರ್ತಿ ಚಾರ್ಜ್‌ನಲ್ಲಿ 120 ರಿಂದ 180 ಕಿ.ಮೀ ವರೆಗೆ ರೇಂಜ್ (ಮೈಲೇಜ್) ಕೊಡಬಹುದು ಎಂದು ಹೇಳಲಾಗಿದೆ.

ನೂತನ ಹೀರೋ ಸ್ಪ್ಲೆಂಡರ್ ಎಲೆಕ್ಟ್ರಿಕ್ ಮೋಟಾರ್‌ಸೈಕಲ್‌ ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದುರುವ ನಿರೀಕ್ಷೆಯಿದೆ. ಸ್ಟ್ಯಾಂಡರ್ಡ್ 'ಸ್ಪ್ಲೆಂಡರ್'ಗೆ ಹೋಲಿಕೆಯಾಗುವ ಎಲ್ಲ ಲಕ್ಷಣಗಳಿವೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್‌ ಹಾಗೂ ಅಲಾಯ್ ವೀಲ್‌ಗಳನ್ನು ಪಡೆದುಕೊಂಡಿರಲಿದೆ. ಜೊತೆಗೆ ನೋಡುಗರ ಕಣ್ಣು ಕುಕ್ಕುವಂತಹ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಾಗಬಹುದು ಎನ್ನಲಾಗಿದೆ.

ಇದು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿರುವ ಸಾಧ್ಯತೆಯಿದೆ. ಬಹುಮುಖ್ಯವಾಗಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂತ್ ಕನೆಕ್ಟಿವಿಟಿ, ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಜಿಪಿಎಸ್ ಟ್ರ್ಯಾಕಿಂಗ್, ರಿಮೋಟ್ ಇಮೊಬಿಲೈಸೇಶನ್, ಕ್ಲೌಡ್ ಕನೆಕ್ಟಿವಿಟಿ ಹಾಗೂ ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್‌ನ್ನು ಹೊಂದಿರಬಹುದು ಎಂದು ಹೇಳಲಾಗಿದೆ.

ಹೊಸ ಹೀರೋ ಸ್ಪ್ಲೆಂಡರ್ ಇವಿ ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುವ ನೀರಿಕ್ಷೆಯಿದೆ. ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಹಾಗೂ ಹಿಂಭಾಗ (ರೇರ್) ಡುಯಲ್ ಶಾಕ್ ಅಬ್ಸಾರ್ಬರ್‌ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿರಬಹುದು ಎನ್ನಲಾಗಿದೆ. ಇದರೊಂದಿಗೆ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ.

ಪ್ರಸ್ತುತ ಖರೀದಿಗೆ ದೊರೆಯುವ ಹೀರೋ ಸ್ಪ್ಲೆಂಡರ್ ಪ್ಲಸ್ ವಿಶೇಷತೆಗಳೇನು:

ಈ ಬೈಕ್ ಅಗ್ಗದ ದರದಲ್ಲಿ ಲಭ್ಯವಿದೆ. ರೂ.73,946 ರಿಂದ ರೂ.74,970 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 97.2 ಸಿಸಿ ಏರ್-ಕೂಲ್ಡ್, ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್‌ ಮತ್ತು 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 73 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂತ್ ಕನೆಕ್ಟಿವಿಟಿ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ ಕೂಡ ಸಿಗುತ್ತದೆ:

ಇದು ರೂ.81,998 ರಿಂದ ರೂ.85,594 (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 124.7 ಸಿಸಿ ಪೆಟ್ರೋಲ್ ಎಂಜಿನ್‌ & 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 69 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂತ್ ಕನೆಕ್ಟಿವಿಟಿ ಹಾಗೂ ಐಡಲ್ ಸ್ಟಾರ್ಟ್/ ಸ್ಟಾಪ್ ಸಿಸ್ಟಮ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

Article Published On: Saturday, October 4, 2025, 17:30 [IST]
English summary
Hero splendor ev expected launch soon price range and features details
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+