73 ಕಿ.ಮೀ ಮೈಲೇಜ್.. 79,000 ಬೆಲೆ, ಹೀರೋ ಸ್ಪ್ಲೆಂಡರ್‌ಗೆ ಫುಲ್ ಡಿಮ್ಯಾಂಡ್.. ಶೋರೂಂ ಮುಂದೆ ಕ್ಯೂ ನಿಂತ ಗ್ರಾಹಕರು!
ವಿಶ್ವಾಸಾರ್ಹ ಮೋಟಾರ್‌ಸೈಕಲ್‌ಗೆ ಮತ್ತೊಂದು ಹೆಸರೇ ಹೀರೋ ಸ್ಪ್ಲೆಂಡರ್ (Hero Splendor) ಎಂದು. ಅಷ್ಟರಮಟ್ಟಿಗೆ ಈ ಬೈಕ್ ಜನಪ್ರಿಯತೆಯನ್ನು ಗಳಿಸಿದೆ. ಹಳ್ಳಿಯಿಂದ ದಿಲ್ಲಿವರೆಗಿನ ಗ್ರಾಹಕರು ಕೂಡ ಮುಗಿಬಿದ್ದು ಖರೀದಿ ಮಾಡುತ್ತಿದ್ದಾರೆ. ಅದಕ್ಕೆ ಕಳೆದ ತಿಂಗಳು (ಜೂನ್) ಹೊರತಾಗಿಲ್ಲ. ಒಟ್ಟು 3,31,057 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಈ ಮೂಲಕ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 8.34% ಬೆಳವಣಿಗೆಯಾಗಿದೆ. 2024ರ ಇದೇ ಅವಧಿಯಲ್ಲಿ 3,05,586 ಮಾರಲಾಗಿದೆ.
ದೇಶೀಯ ಮಾರುಕಟ್ಟೆಯಲ್ಲಿ ಹತ್ತಾರು ಬೈಕ್‌ಗಳು ಖರೀದಿಗೆ ಲಭ್ಯವಾಗುತ್ತಿದ್ದರೂ 'ಹೀರೋ ಸ್ಪ್ಲೆಂಡರ್' ಮಾರಾಟ ಸಂಖ್ಯೆ ದಿನದಿಂದ ದಿನಕ್ಕೆ ಅಧಿಕಗೊಳ್ಳಲು ಹಲವು ಕಾರಣಗಳಿವೆ. ಈ ಮೋಟಾರ್‌ಸೈಕಲ್ ಅತಿ ಕಡಿಮೆ ಬೆಲೆಗೆ ಸಿಗಲಿದ್ದು, ಭರ್ಜರಿಯಾಗಿಯೇ ಮೈಲೇಜ್‌ನ್ನು ಕೊಡುತ್ತದೆ. ಹೀಗಾಗಿ, ಭಾರೀ ಪ್ರಮಾಣದಲ್ಲಿ ಮಾರಾಟವಾಗುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ನೂತನ ಹೀರೋ ಸ್ಪ್ಲೆಂಡರ್ ಮೋಟಾರ್‌ಸೈಕಲ್ ಎರಡು ವಿಧದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಅವುಗಳೆಂದರೆ, ಸ್ಪ್ಲೆಂಡರ್ ಪ್ಲಸ್ ಹಾಗೂ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್. ಇವೆರೆಡು ಬೈಕ್‌ಗಳು ನೋಡುಗರ ಕಣ್ಣು ಕುಕ್ಕುವಂತಹ ಸರಳವಾದ ವಿನ್ಯಾಸವನ್ನು ಹೊಂದಿದ್ದು, ಹೆಚ್ಚು ಆಕರ್ಷಕವಾದ ವೈಶಿಷ್ಟ್ಯಗಳನ್ನು ಪಡೆದುಕೊಂಡಿವೆ.
ಹೀರೋ ಸ್ಪ್ಲೆಂಡರ್ ಪ್ಲಸ್ ವಿಶೇಷತೆಗಳೇನು:
ಇದು ಅಗ್ಗದ ದರದಲ್ಲಿ ಲಭ್ಯವಿದೆ. ರೂ.79,476 ದಿಂದ ರೂ.83,251 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಸ್ಟ್ಯಾಂಡರ್ಡ್, ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್ ಮತ್ತು ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಪಡೆದಿದೆ. ಸ್ಪೋರ್ಟ್ಸ್ ರೆಡ್ ಬ್ಲ್ಯಾಕ್, ಬ್ಲ್ಯಾಕ್ ರೆಡ್ ಪರ್ಪಲ್, ಫೋರ್ಸ್ ಸಿಲ್ವರ್ ಹಾಗೂ ಬ್ಲ್ಯಾಕ್ ಹೆವಿ ಗ್ರೇ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ.

ಈ ಬೈಕ್ 97.2 ಸಿಸಿ ಏರ್-ಕೂಲ್ಡ್, ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 7.91 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 8.05 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 73 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 11 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಪಡೆದಿದೆ. 87 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ.
ಹೊಸ ಹೀರೋ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ಸೈಕಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂತ್ ಕನೆಕ್ಟಿವಿಟಿ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಟ್ವಿನ್-ಪ್ರಿಲೋಡ್ ಅಡ್ಜಸ್ಟಬಲ್ ಶಾಕ್ ಅಬ್ಸಾರ್ಬರ್ಸ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.
ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ ಕೂಡ ಖರೀದಿಗೆ ಲಭ್ಯ:
ಇದು ರೂ.88,628 ರಿಂದ ರೂ.92,528 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 124.7 ಸಿಸಿ ಏರ್-ಕೋಲ್ಡ್, ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 10.72 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 10.6 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 69 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 12 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಹೊಂದಿದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ.
ಈ ಮೋಟಾರ್‌ಸೈಕಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಮ್ಯಾಟ್ ನೆಕ್ಸಸ್ ಬ್ಲೂ, ಮ್ಯಾಟ್ ಗ್ರೇ, ಬ್ಲಾಕ್ ಹಾಗೂ ಕ್ಯಾಂಡಿ ಬ್ಲೇಜಿಂಗ್ ರೆಡ್ ಎಂಬ ಬಣ್ಣಗಳೊಂದಿಗೆ ದೊರೆಯುತ್ತದೆ. ಟೆಲಿಸ್ಕೋಪಿಕ್ ಫೋರ್ಕ್ಸ್ & ಡುಯಲ್-ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಡ್ರಮ್/ಡಿಸ್ಕ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.


Click it and Unblock the Notifications








