Hero: ನಂ.1 ಬೈಕ್‌ಯಿದು.. 70 Km ಮೈಲೇಜ್, ಆದರೂ ಹೀರೋ ಸ್ಪ್ಲೆಂಡರ್‌ನ್ನು ಕೊಳ್ಳಲು ಗ್ರಾಹಕರಿಗೆ ಮನಸಿಲ್ಲ.. ಯಾಕೆ?

ಹೀರೋ ಸ್ಪ್ಲೆಂಡರ್‌ (Hero Splendor) ನಂ.1 ಬೈಕ್ ಎಂದೇ ಹೆಸರುವಾಸಿಯಾಗಿದೆ. ಬಡ ಹಾಗೂ ಮಧ್ಯಮ ವರ್ಗದ ಗ್ರಾಹಕರು ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಆದರೂ ಈ ಅಕ್ಟೋಬರ್ ತಿಂಗಳಲ್ಲಿ 'ಸ್ಪ್ಲೆಂಡರ್‌' ಮಾರಾಟ ಸಂಖ್ಯೆ ಸ್ವಲ್ಪ ಮಟ್ಟಿಗೆ ಇಳಿಮುಖವಾಗಿದೆ. 3,40,131 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 3,91,612 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ ಸಂಖ್ಯೆಯನ್ನು ವಿಶ್ಲೇಷಿಸಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ -13.15% ಕುಸಿತವಾಗಿದೆ.

ಇದೇ ಅಕ್ಟೋಬರ್‌ನಲ್ಲಿ ದೀಪಾವಳಿ ಹಬ್ಬವಿದ್ದರೂ 'ಹೀರೋ ಸ್ಪ್ಲೆಂಡರ್‌' ಮಾರಾಟ ಪ್ರಮಾಣವು ಇಳಿಕೆಯಾಗಲು ನಾನಾ ಕಾರಣಗಳನ್ನು ಪಟ್ಟಿ ಮಾಡಬಹುದು. ಬಹುಮುಖ್ಯವಾಗಿ, ಈ ಮೋಟಾರ್‌ಸೈಕಲ್‌ನ ಬೆಲೆಗೆ ಇತರೆ ಕಂಪನಿಗಳು ಸಹ ಹೆಚ್ಚು ಆಕರ್ಷಕವಾಗಿರುವ ಸ್ಕೂಟರ್ ಹಾಗೂ ಬೈಕ್‌ಗಳನ್ನು ಮಾರಾಟ ಮಾಡುತ್ತಿವೆ. ಗ್ರಾಹಕರು, ಅವುಗಳ ಖರೀದಿಯತ್ತ ಮುಖ ಮಾಡಿದ್ದಾರೆ. ಜೊತೆಗೆ 'ಸ್ಪ್ಲೆಂಡರ್‌'ನ ವೈಶಿಷ್ಟ್ಯಗಳಲ್ಲಿಯೂ ಒಂದಷ್ಟು ಕೊರತೆಯಿದೆ. ಹೀಗಾಗಿ, ಮಾರಾಟ ಸಂಖ್ಯೆ ಕಡಿಮೆಯಾಗಿದೆ ಎಂಬುದು ತಜ್ಞರ ಲೆಕ್ಕಾಚಾರವಾಗಿದೆ.

Hero Splendor October 2025 Sales Decline Details

ಹೊಚ್ಚ ಹೊಸ 'ಹೀರೋ ಸ್ಪ್ಲೆಂಡರ್‌'ನ್ನು 2 ರೂಪದಲ್ಲಿ ಮಾರಾಟಗೊಳಿಸಲಾಗುತ್ತದೆ. ಅವುಗಳೆಂದರೆ, ಸ್ಪ್ಲೆಂಡರ್ ಪ್ಲಸ್ ಹಾಗೂ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ ಎಂದು. ಇವು ನೋಡಲು ತುಂಬಾ ಚೆನ್ನಾಗಿದ್ದು, ಸರಳವಾದ ವಿನ್ಯಾಸವನ್ನು ಹೊಂದಿವೆ. ಹಾಗೆಯೇ ಬಜೆಟ್ ಬೆಲೆಯಲ್ಲಿಯೂ ಸಿಗುತ್ತವೆ.

ಹೀರೋ ಸ್ಪ್ಲೆಂಡರ್‌ ಪ್ಲಸ್ (Hero Splendor Plus) ಹೇಗಿದೆ:

ಇದನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಕನಿಷ್ಠ ರೂ.73,902 ಹಾಗೂ ಗರಿಷ್ಠ ರೂ.76,437 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಸ್ಪ್ಲೆಂಡರ್‌ ಪ್ಲಸ್ ಡ್ರಮ್ ಬ್ರೇಕ್, ಸ್ಪ್ಲೆಂಡರ್‌ ಪ್ಲಸ್ ಡಿಸ್ಕ್ ಬ್ರೇಕ್ ಹಾಗೂ ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಪಡೆದಿದೆ. ಸ್ಪೋರ್ಟ್ಸ್ ರೆಡ್ ಬ್ಲ್ಯಾಕ್, ಬ್ಲ್ಯಾಕ್ ಹೆವಿ ಗ್ರೇ, ಬ್ಲ್ಯೂ ಬ್ಲ್ಯಾಕ್, ಬ್ಲ್ಯಾಕ್ ರೆಡ್ ಪರ್ಪಲ್, ಫೋರ್ಸ್ ಸಿಲ್ವರ್ ಮತ್ತು ಇಂಡಸ್ಟ್ರಿಯಲ್ ಡಾರ್ಕ್ ಗ್ರೇ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

ನೂತನ 'ಸ್ಪ್ಲೆಂಡರ್‌ ಪ್ಲಸ್' ಶಕ್ತಿಯುತವಾದ ಪವರ್‌ಟ್ರೇನ್‌ನ್ನು ತನ್ನದಾಗಿಸಿಕೊಂಡಿದೆ. 97.2-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 70 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. ಸರಿ ಸುಮಾರು 9.8 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ. 93 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ.

Hero Splendor October 2025 Sales Decline Details

ಈ ಬೈಕ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂತ್ ಕನೆಕ್ಟಿವಿಟಿ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಬರೋಬ್ಬರಿ 112 ಕೆಜಿ ತೂಕವಿದೆ. 165 ಎಂಎಂ ಗ್ರೌಂಡ್ ಕ್ಲಿಯರೆನ್ ಹಾಗೂ 1,236 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್ & ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ (Hero Super Splendor XTEC) ವಿಶೇಷತೆಗಳೇನು:

ಇದು ರೂ.81,998 ರಿಂದ ರೂ.85,594 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ ಡ್ರಮ್ ಬ್ರೇಕ್ ಮತ್ತು ಸ್ಪ್ಲೆಂಡರ್ ಎಕ್ಸ್‌ಟೆಕ್ ಡಿಸ್ಕ್ ಬ್ರೇಕ್ ಎಂಬ ರೂಪಾಂತರಗಳೊಂದಿಗೂ ದೊರೆಯುತ್ತದೆ. ಬ್ಲ್ಯಾಕ್, ಕ್ಯಾಂಡಿ ಬ್ಲೇಜಿಂಗ್ ರೆಡ್, ಮ್ಯಾಟ್ ಗ್ರೇ ಹಾಗೂ ಮ್ಯಾಟ್ ನೆಕ್ಸಸ್ ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 180 ಎಂಎಂ ಗ್ರೌಂಡ್ ಕಿಯರೆನ್ಸ್ ಮತ್ತು 1267 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. 122 ಕೆಜಿ ತೂಕವು ಇದೆ.

ಹೊಸ 'ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 124.7-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 69 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 12 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂತ್ ಕನೆಕ್ಟಿವಿಟಿ ಮತ್ತು ಸೈಡ್ ಸ್ಟಾಂಡ್ ಎಂಜಿನ್ ಕಟ್ ಆಫ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಡಿಸ್ಕ್ & ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

More from DriveSpark

Article Published On: Tuesday, November 25, 2025, 12:47 [IST]
English summary
Hero splendor october 2025 sales decline details
Read more on hero motocorp india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+