Hero: 70 ಕಿ.ಮೀ ಮೈಲೇಜ್.. ಅಗ್ಗದ ಹೀರೋ ಸ್ಪ್ಲೆಂಡರ್‌ ಪ್ಲಸ್‌ ಬೈಕ್ ತೆಗೆದುಕೊಳ್ಳಬೇಕೇ, ಆನ್-ರೋಡ್ ದರವೆಷ್ಟು.. EMI ಏನು?

ಹೀರೋ ಸ್ಪ್ಲೆಂಡರ್‌ ಪ್ಲಸ್‌ (Hero Splendor Plus) ಮಧ್ಯಮ ವರ್ಗದ ಗ್ರಾಹಕರ ನೆಚ್ಚಿನ ಬೈಕ್ ಆಗಿದೆ. ಇದು ತುಂಬಾ ಸರಳವಾದ ವಿನ್ಯಾಸವನ್ನು ಹೊಂದಿದ್ದು, ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ. ರೂ.73,946 ರಿಂದ ರೂ.79,501 (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ನೀವು ಹೊಚ್ಚ ಹೊಸ ಮೋಟಾರ್‌ಸೈಕಲ್‌ವೊಂದನ್ನು ಕೊಂಡುಕೊಳ್ಳಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ 'ಸ್ಪ್ಲೆಂಡರ್‌ ಪ್ಲಸ್‌' ಅತ್ಯುತ್ತಮವಾದ ಆಯ್ಕೆಯಾಗಿದೆ. ಇಲ್ಲಿ ಈ ಬೈಕ್‌ನ ಆನ್-ರೋಡ್ ಬೆಲೆ (On-Road Price) ಹಾಗೂ ತಿಂಗಳ ಇಎಂಐ (EMI) ಆಯ್ಕೆಯ ಕುರಿತಂತೆ ಸಂಕ್ಷಿಪ್ತವಾಗಿ ವಿವರಿಸಿದ್ದೇವೆ.

ನೂತನ 'ಹೀರೋ ಸ್ಪ್ಲೆಂಡರ್‌ ಪ್ಲಸ್‌' ಹಲವು ವಿಧದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಇದರ 'ಸ್ಪ್ಲೆಂಡರ್‌ ಪ್ಲಸ್‌ ಸ್ಟ್ಯಾಂಡರ್ಡ್' ರೂಪಾಂತರ, ರೂ.93,700 ವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.20,000 ಡೌನ್-ಪೇಮೆಂಟ್ ಕಟ್ಟಿ ಖರೀದಿ ಮಾಡಿದರೆ, ರೂ.73,700 ವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 3 ವರ್ಷದ ಅವಧಿಗೆ ಮಾಸಿಕ ರೂ.2,300 ವರೆಗೆ ಇಎಂಐ ಪಾವತಿಸಬೇಕು.

Hero Splendor Plus New On road Price Mileage And Emi Details

ಇನ್ನೊಂದು 'ಸ್ಪ್ಲೆಂಡರ್‌ ಪ್ಲಸ್‌ ಐ3ಎಸ್' (ಐಡಲ್ ಸ್ಟಾಪ್-ಸ್ಟಾರ್ಟ್ ಸಿಸ್ಟಮ್) ರೂಪಾಂತರ, ರೂ.94,800 ವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ರೂ.20,000 ಡೌನ್-ಪೇಮೆಂಟ್ ಪಾವತಿಸಿ ತೆಗೆದುಕೊಂಡರೆ, ರೂ.74,800 ವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 3 ವರ್ಷಕ್ಕೆ ತಿಂಗಳಿಗೆ ರೂ.2,400 ವರೆಗೆ ಇಎಂಐ ಕಟ್ಟಬೇಕು.

ಮತ್ತೊಂದು 'ಸ್ಪ್ಲೆಂಡರ್ ಎಕ್ಸ್‌ಟೆಕ್ ಡ್ರಮ್' ರೂಪಾಂತರ, ರೂ.97,700 ವರೆಗೆ ಆನ್-ರೋಡ್ ದರವನ್ನು ಒಳಗೊಂಡಿದೆ. ರೂ.20,000 ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.77,700 ವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 3 ವರ್ಷಗಳಿಗೆ ಮಾಸಿಕ ರೂ.2,450 ವರೆಗೆ ಇಎಂಐ ಪಾವತಿ ಮಾಡಬೇಕು.

ಇದೇ ಮೋಟಾರ್‌ಸೈಕಲ್‌ನ 'ಸ್ಪ್ಲೆಂಡರ್ ಎಕ್ಸ್‌ಟೆಕ್ ಡಿಸ್ಕ್' ರೂಪಾಂತರ, ರೂ.97,500 ವರೆಗೆ ಆನ್-ರೋಡ್ ಬೆಲೆಯನ್ನು ಪಡೆದಿದೆ. ರೂ.20,000 ಡೌನ್-ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, ರೂ.77,500 ವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 3 ವರ್ಷಕ್ಕೆ ತಿಂಗಳಿಗೆ ರೂ.2,400 ವರೆಗೆ ಇಎಂಐ ಕಟ್ಟಬೇಕು.

ಹೀರೋ ಸ್ಪ್ಲೆಂಡರ್‌ ಪ್ಲಸ್ ವಿಶೇಷತೆಗಳೇನು:

ಈ ಬೈಕ್ ವಿನ್ಯಾಸದ ದೃಷ್ಟಿಯಿಂದ ಅತ್ಯುತ್ತಮವಾದ ಹೆಡ್‌ಲ್ಯಾಂಪ್, ಟರ್ನ್ ಇಂಡಿಕೇಟರ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಪಡೆದಿದೆ. ಸ್ಪೋರ್ಟ್ಸ್ ರೆಡ್ ಬ್ಲ್ಯಾಕ್, ಬ್ಲ್ಯಾಕ್ ಹೆವಿ ಗ್ರೇ, ಬ್ಲ್ಯೂ ಬ್ಲ್ಯಾಕ್, ಬ್ಲ್ಯಾಕ್ ರೆಡ್ ಪರ್ಪಲ್, ಫೋರ್ಸ್ ಸಿಲ್ವರ್, ಇಂಡಸ್ಟ್ರಿಯಲ್ ಡಾರ್ಕ್ ಗ್ರೇ ಮತ್ತು ಮ್ಯಾಟ್ ಗ್ರೇ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 165 ಮಿ.ಮೀ ಗ್ರೌಂಡ್ ಕ್ಲಿಯರೆನ್ ಹಾಗೂ 1,236 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಹೊಸ 'ಸ್ಪ್ಲೆಂಡರ್‌ ಪ್ಲಸ್' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 97.2-ಸಿಸಿ ಏರ್-ಕೋಲ್ಡ್, ಸಿಂಗಲ್-ಸಿಲಿಂಡರ್ ಪಟ್ರೋಲ್ ಎಂಜಿನ್‌ನ್ನು ಪಡೆದಿದೆ. 8,000 ಆರ್‌ಪಿಎಂನಲ್ಲಿ 8.02 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 6,000 ಆರ್‌ಪಿಎಂನಲ್ಲಿ 8.05 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಸರಿ ಸುಮಾರು 70 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.

ಇದು ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂತ್ ಕನೆಕ್ಟಿವಿಟಿ ಹಾಗೂ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. 87 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಬರೋಬ್ಬರಿ 112 ಕೆಜಿ ತೂಕವಿದ್ದು, 9.8 ಲೀ.ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ನಿಮ್ಮ ಗಮನಕ್ಕೆ.. ಈ ಮೋಟಾರ್‌ಸೈಕಲ್‌ನ ಆನ್-ರೋಡ್ ದರ ಹಾಗೂ ಇಎಂಐ ಆಯ್ಕೆಗಳು ನಗರದಿಂದ ನಗರಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

More from DriveSpark

Article Published On: Thursday, November 6, 2025, 10:56 [IST]
English summary
Hero splendor plus new on road price mileage and emi details
Read more on hero motocorp india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+