ಸಿಟಿ & ಹಳ್ಳಿಗೆ ಪರ್ಪೆಕ್ಟ್ ಚಾಯ್ಸ್: 1 ಲೀ.ಗೆ 69 ಕಿ.ಮೀ ಮೈಲೇಜ್, ಈ ಬಡವರ ಅಂಬಾರಿ 88,000 ರೂಪಾಯಿಗೆ ಸಿಗುತ್ತೆ!
ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ (Hero Super Splendor XTEC), ಸುಧಾರಿತ ತಂತ್ರಜ್ಞಾನ ಹಾಗೂ ಹಲವು ನವೀನ ವೈಶಿಷ್ಟ್ಯಗಳನ್ನು ಹೊಂದಿದೆ. ಅದಕ್ಕೆ ತಕ್ಕಂತೆ ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದೆ. ದಿನಬಳಕೆಗೂ ಹೆಚ್ಚು ಉಪಯುಕ್ತವಾಗಿದೆ. ಹಳ್ಳಿ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಕೂಡ ಸುಲಭವಾಗಿ ಬಳಕೆ ಮಾಡಬಹುದಾಗಿದ್ದು, ದುಡಿಯುವ ವರ್ಗದ ಜನರ ಅಂಬಾರಿ ಎಂದು ಕರೆದರೂ ತಪ್ಪಾಗುವುದಿಲ್ಲ. ನಾವಿಲ್ಲಿ ಈ ಬೈಕ್‌ನ ಬೆಲೆ, ವಿನ್ಯಾಸ, ಮೈಲೇಜ್ ಹಾಗೂ ವೈಶಿಷ್ಟ್ಯಗಳ ಕುರಿತಂತೆ ಸಂಪೂರ್ಣವಾಗಿ ತಿಳಿಸಿಕೊಟ್ಟಿದ್ದೇವೆ.
ಹೊಚ್ಚ ಹೊಸ 'ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್' ಮೋಟಾರ್‌ಸೈಕಲ್ ಬಜೆಟ್ ದರದಲ್ಲಿ ಸಿಗಲಿದ್ದು, ಬಡ ಹಾಗೂ ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಮನೆಗೆ ತರಬಹುದು. ಕನಿಷ್ಠ ರೂ.88,628 ಹಾಗೂ ಗರಿಷ್ಠ ರೂ.92,528 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಡ್ರಮ್ ಬ್ರೇಕ್ (Drum Brake) ಹಾಗೂ ಡಿಸ್ಕ್ ಬ್ರೇಕ್ (Disc Brake) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ.

ಈ ಬೈಕ್ ಆಕರ್ಷಕವಾದ ವಿನ್ಯಾಸನ್ನು ಪಡೆದಿದೆ. ಎಲ್ಇಡಿ ಹೆಡ್‌ಲ್ಯಾಂಪ್, ಇಂಟಿಗ್ರೇಟೆಡ್ ಎಲ್ಇಡಿ ಡಿಆರ್‌ಎಲ್ ಮತ್ತು 18-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಮ್ಯಾಟ್ ನೆಕ್ಸಸ್ ಬ್ಲೂ, ಮ್ಯಾಟ್ ಗ್ರೇ, ಬ್ಲಾಕ್ ಹಾಗೂ ಕ್ಯಾಂಡಿ ಬ್ಲೇಜಿಂಗ್ ರೆಡ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ.
ನೂತನ ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ 2042 ಎಂಎಂ ಉದ್ದ, 729 ಎಂಎಂ ಅಗಲ ಮತ್ತು 1092 ಎಂಎಂ ಎತ್ತರವಿದೆ. 180 ಎಂಎಂ ಗ್ರೌಂಡ್ ಕಿಯರೆನ್ಸ್ ಮತ್ತು 1267 ವೀಲ್‌ಬೇಸ್‌ನ್ನು ಒಳಗೊಂಡಿದೆ. ಜೊತೆಗೆ ಆಸನ ಎತ್ತರ (ಸೀಟ್ - ಹೈಟ್) 793 ಎಂಎಂ ಇದೆ.

ಇದು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಪಡೆದಿದೆ. 124.7 ಸಿಸಿ ಏರ್-ಕೋಲ್ಡ್, ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 7500 ಆರ್‌ಪಿಎಂನಲ್ಲಿ 10.72 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 6000 ಆರ್‌ಪಿಎಂನಲ್ಲಿ 10.6 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಜೊತೆಗೆ 69 ಕಿ.ಮೀ ವರೆಗೆ ಮೈಲೇಜ್ ನೀಡಬಲ್ಲದು.
ಹೊಸ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ ಡಿಜಿಟಲ್ - ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂತ್ ಕನೆಕ್ಟಿವಿಟಿ, ಐಡಲ್ ಸ್ಟಾರ್ಟ್/ ಸ್ಟಾಪ್ ಸಿಸ್ಟಮ್, ಸೈಡ್ ಸ್ಟಾಂಡ್ ಎಂಜಿನ್ ಕಟ್ ಆಫ್ ಹಾಗೂ ಎಂಜಿನ್ - ಕಿಲ್ ಸ್ವೀಚ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 122 ಕೆಜಿ ತೂಕವಿದ್ದು, ಬರೋಬ್ಬರಿ 12 ಲೀಟರ್ ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ.

ಈ ಬೈಕ್ ಸವಾರರಿಗೆ ಗರಿಷ್ಠ ಮಟ್ಟದ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಹಾಗೂ ಹಿಂಭಾಗ (ರೇರ್) ಡುಯಲ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ. ಇದಕ್ಕೆ ಬಜಾಜ್ ಪ್ಲಾಟಿನಾ 125, ಟಿವಿಎಸ್ ರೈಡರ್ 125 ಹಾಗೂ ಹೋಂಡಾ ಶೈನ್ 125 ಮೋಟಾರ್‌ಸೈಕಲ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.
ಒಟ್ಟಾರೆಯಾಗಿ 'ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್' ಅತ್ಯತ್ತುಮವಾದ ಬೈಕ್ ಆಗಿದ್ದು, ತುಂಬಾ ಚೆನ್ನಾಗಿರುವ ವಿನ್ಯಾಸ ಹಾಗೂ ವಿವಿಧ ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ. ನಗರ ಹಾಗೂ ಗ್ರಾಮೀಣ ಪ್ರವೇಶಕ್ಕೆ ಹೇಳಿ ಮಾಡಿಸಿದ ರೀತಿಯಲ್ಲಿದೆ. ಹಳ್ಳಿಯ ರೈತರು ಹಾಗೂ ಪಟ್ಟಣದಲ್ಲಿ ಕಚೇರಿಗೆ ಹೋಗುವವರು ಸಹ ಉಪಯೋಗ ಮಾಡಬಹುದಾಗಿದೆ.


Click it and Unblock the Notifications








