Hero: ಅಗ್ಗದ ಹೀರೋ ಇ-ಸ್ಕೂಟರ್‌ನ ಕಾರುಬಾರು.. ಜನ ಮುಗಿಬಿದ್ದು ಖರೀದಿ!
ಹೀರೋ ವಿಡಾ (Hero Vida) ಜನಪ್ರಿಯ ಸ್ಕೂಟರ್ ಆಗಿದ್ದು, ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಈ ನವೆಂಬರ್ ತಿಂಗಳಲ್ಲೂ 'ವಿಡಾ' ಸ್ಕೂಟರ್ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 14,196 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 1,976 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ 618.42% ಪ್ರಗತಿಯಾಗಿದೆ.
ಇದೇ ನವೆಂಬರ್‌ನಲ್ಲಿ 'ಹೀರೋ ವಿಡಾ' ಸ್ಕೂಟರ್ ಅತಿಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಳ್ಳಲು ನಾನಾ ಕಾರಣಗಳಿವೆ. ಬಹುಮುಖ್ಯವಾಗಿ ಈ ಸ್ಕೂಟರ್ ಕೈಗೆಟುಕುವ ಬೆಲೆಯಲ್ಲಿ ಲಭ್ಯವಿದೆ. ಜೊತೆಗೆ ಉತ್ತಮ ನಿರ್ವಹಣಾ ಗುಣಮಟ್ಟಕ್ಕೆ ಹೆಸರುವಾಸಿಯಾಗಿದೆ. ಹೀಗಾಗಿ, ಭಾರೀ ಪ್ರಮಾಣದಲ್ಲಿ ಮಾರಾಟಗೊಂಡಿದೆ ಎಂದು ವಿಶ್ಲೇಷಿಸಲಾಗಿದೆ.

ನೂತನ 'ಹೀರೋ ವಿಡಾ' ಎಲೆಕ್ಟ್ರಿಕ್ ಸ್ಕೂಟರ್ ಎರಡು ವಿಧದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಅವುಗಳೆಂದರೆ ವಿ2 (V2) ಹಾಗೂ ವಿಎಕ್ಸ್2 (VX2). ಇವುಗಳು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ನಾನಾ ಬಗೆಯ ಹೊಸತನಗಳಿಗೂ ಸಾಕ್ಷಿಯಾಗಿವೆ.
'ಹೀರೋ ವಿಡಾ ವಿ2' ವಿಶೇಷತೆಗಳೇನು:
ಇದು ಕನಿಷ್ಠ ರೂ.1.05 ಲಕ್ಷ ಹಾಗೂ ಗರಿಷ್ಠ ರೂ.1.20 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ವಿಡಾ ವಿ2 ಪ್ಲಸ್ (Vida V2 Plus) ಹಾಗೂ ವಿಡಾ ವಿ2 ಪ್ರೊ (Vida V2 Pro) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಸ್ಕೂಟರ್ 7-ಇಂಚಿನ ಟಿಎಫ್‌ಟಿ ಟಚ್‌ಸ್ಕ್ರೀನ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ರೀ-ಜೆನ್ ಬ್ರೇಕಿಂಗ್, ಕೀಲೆಸ್ ಎಂಟ್ರಿ ಹಾಗೂ ಕ್ರೂಸ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಮ್ಯಾಟ್ ಅಬ್ರಾಕ್ಸ್ ಆರೆಂಜ್, ಮ್ಯಾಟ್ ವೈಟ್, ಗ್ಲಾಸಿ ಬ್ಲ್ಯಾಕ್, ಗ್ಲಾಸಿ ಸ್ಪೋರ್ಟ್ಸ್ ರೆಡ್, ಮ್ಯಾಟ್ ಸಯಾನ್ ಹಾಗೂ ಮ್ಯಾಟ್ ನೆಕ್ಸಸ್ ಬ್ಲೂ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.
ನೂತನ 'ವಿಡಾ ವಿ2 ಪ್ಲಸ್' 3.44 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 143 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 85 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. 'ವಿಡಾ ವಿ2 ಪ್ರೊ' 3.94 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 165 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ.
'ಹೀರೋ ವಿಡಾ ವಿಎಕ್ಸ್2' ಹೇಗಿದೆ:
ಇದು ರೂ.74,000 ರಿಂದ ರೂ.94,800 ಬೆಲೆಯನ್ನು ಹೊಂದಿದೆ. ವಿಡಾ ವಿಎಕ್ಸ್2 ಗೋ (Vida VX2 GO) ಮತ್ತು ವಿಡಾ ವಿಎಕ್ಸ್2 ಪ್ಲಸ್ (Vida VX2 Plus) ರೂಪಾಂತರಗಳೊಂದಿಗೂ ದೊರೆಯುತ್ತದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಗ್ರೇ, ಬ್ಲೂ, ರೆಡ್ ಯೆಲ್ಲೋ ಮತ್ತು ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.
ಈ ಎಲೆಕ್ಟ್ರಿಕ್ ಸ್ಕೂಟರ್ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಎಲ್‌ಸಿಡಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಜಿಪಿಎಸ್ ಟ್ರ್ಯಾಕಿಂಗ್, ರಿಮೋಟ್ ಇಮೊಬಿಲೈಸೇಶನ್, ಅಂಡರ್ ಸೀಟ್ ಸ್ಟೋರೇಜ್ ಮತ್ತು ರೇರ್ ಪಿಲಿಯನ್ ಬ್ಯಾಕ್‌ರೆಸ್ಟ್‌ನ್ನು ಒಳಗೊಂಡಿದೆ. ಡೈಮಂಡ್-ಕಟ್ ಅಲಾಯ್ ವೀಲ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.
ಹೊಸ 'ವಿಡಾ ವಿಎಕ್ಸ್2 ಗೋ' 2.2 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಪೂರ್ತಿ ಚಾರ್ಜ್‌ನಲ್ಲಿ 92 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 'ವಿಡಾ ವಿಎಕ್ಸ್2 ಪ್ಲಸ್' 3.4 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 142 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ.


Click it and Unblock the Notifications








