Hero: ಬೆಲೆಯೂ ಅಗ್ಗ.. ಹೊಸ ಹೀರೋ ಎಲೆಕ್ಟ್ರಿಕ್ ಸ್ಕೂಟರ್‌ಗೆ ರೂ.40,000 ಆಫರ್!
ಹೀರೋ ಮೋಟೊಕಾರ್ಪ್ (Hero MotoCorp), ನಂಬರ್ 1 ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿದ್ದು, ವಿಡಾ (Vida) ಬ್ರ್ಯಾಂಡ್‌ನಡಿ 'ವಿ2' ಎಲೆಕ್ಟ್ರಿಕ್ ಸ್ಕೂಟರ್‌ನ್ನು ಮಾರಾಟಗೊಳಿಸುತ್ತಿದೆ. ಇದು ಹಲವು ವಿಧದಲ್ಲಿ ಖರೀದಿ ಲಭ್ಯವಾಗಿದ್ದು, ಕಳೆದ ಡಿಸೆಂಬರ್‌ನಲ್ಲಿ ಅದ್ದೂರಿಯಾಗಿ ಬಿಡುಗಡೆಗೊಳಿಸಲಾಗಿತ್ತು. ಸದ್ಯ, ಈ ಎಲೆಕ್ಟ್ರಿಕ್ ಸ್ಕೂಟರ್‌ನ್ನು ಖರೀದಿಸಲು ಆಲೋಚಿಸಿರುವ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿಯೊಂದು ಲಭ್ಯವಾಗಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.
ಅಮೆಜಾನ್ ಅಥವಾ ಪ್ಲಿಪ್‌ಕಾರ್ಟ್‌ನಿಂದ ನೂತನ ಹೀರೋ ವಿಡಾ ವಿ2 (Hero Vida V2) ಎಲೆಕ್ಟ್ರಿಕ್ ಸ್ಕೂಟರ್ ತೆಗೆದುಕೊಳ್ಳುವ ಗ್ರಾಹಕರಿಗೆ ದೊಡ್ಡ ಮಟ್ಟದಲ್ಲಿ ಅಂದರೆ ರೂ.40,000 ವರೆಗೆ ಹಣಕಾಸಿನ ಪ್ರಯೋಜನಗಳು ದೊರೆಯಲಿದೆ. ಈ ಬಗ್ಗೆ 'ಹಿಂದೂಸ್ತಾನ್ ಟೈಮ್ಸ್' ವರದಿ ಮಾಡಿದೆ. ಈ ವಿಶೇಷ ಆಫರ್‌ನಲ್ಲಿ ಬ್ಯಾಂಕ್ ರಿಯಾಯಿತಿಗಳು, ಕ್ಯಾಶ್‌ಬ್ಯಾಕ್ ಹಾಗೂ ಜಿಎಸ್‌ಟಿ ಸೇರಿದಂತೆ ಇತರೆ ಪ್ರಯೋಜನಗಳಿರಲಿವೆ ಎಂದು ತಿಳಿದುಬಂದಿದೆ.

ಹೀರೋ ವಿಡಾ ವಿ2 ವಿಶೇಷತೆಗಳೇನು: ಈ ಸ್ಕೂಟರ್ ವಿ2 ಲೈಟ್ (V2 Lite), ವಿ2 ಪ್ಲಸ್ (V2 Plus) ಮತ್ತು ವಿ2 ಪ್ರೊ (V2 Pro) ಎಂಬ ಮೂರು ರೂಪದಲ್ಲಿ ಖರೀದಿಗೆ ಸಿಗುತ್ತದೆ. ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳೊಂದಿಗೆ ಕೈಗೆಟುಕುವ ಬೆಲೆಯನ್ನು ಹೊಂದಿದ್ದು, ಪ್ರತಿ ತಿಂಗಳು ಸ್ಪರ್ಧಾತ್ಮಕ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ.
ಹೀರೋ ವಿಡಾ ವಿ2 ಲೈಟ್ ಎಂಟ್ರಿ-ಲೆವೆಲ್ ಮಾಡೆಲ್ ಎಂದೇ ಹೆಸರುವಾಸಿಯಾಗಿದ್ದು, ರೂ.96 ಸಾವಿರ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 2.2 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದ್ದು, ಭರ್ತಿ ಚಾರ್ಜ್‌ನಲ್ಲಿ 94 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ. 69 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ.

ಮತ್ತೊಂದು ಹೀರೋ ವಿಡಾ ವಿ2 ಪ್ಲಸ್ ಮಿಡ್-ಲೆವೆಲ್ ಮಾಡೆಲ್ ಆಗಿದ್ದು, ರೂ.1.15 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 3.44 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಹೊಂದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 143 ಕಿ.ಮೀ ಓಡುತ್ತದೆ. 85 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ.
ಇನ್ನೊಂದು ಹೀರೋ ವಿಡಾ ವಿ2 ಪ್ರೊ ಟಾಪ್-ಎಂಡ್ ಮಾಡೆಲ್ ಆಗಿ ಜನಪ್ರಿಯತೆ ಗಳಿಸಿದೆ. ಇದು ರೂ.1.35 ಲಕ್ಷ (ಎಕ್ಸ್-ಶೋರೂಂ) ಪಡೆದಿದೆ. 3.94 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಹೊಂದಿದ್ದು, ಪೂರ್ತಿ ಚಾರ್ಜ್‌ನಲ್ಲಿ 165 ಕಿ.ಮೀ ಕ್ರಮಿಸುತ್ತದೆ. 90 ಟಾಪ್ ಸ್ಪೀಡ್‌ನ್ನು ಪಡೆದಿದೆ.

ಈ ಹೀರೋ ವಿಡಾ ವಿ2 ಸ್ಕೂಟರ್‌ನ ಎಲ್ಲ ಮಾಡೆಲ್‌ಗಳು ಮ್ಯಾಟ್ ನೆಕ್ಸಸ್ ಬ್ಲೂ-ಗ್ರೇ ಹಾಗೂ ಗ್ಲೋಸಿ ಸ್ಪೋರ್ಟ್ಸ್ ರೆಡ್ ಒಳಗೊಂಡಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲೊಯೂ ಸಿಗುತ್ತವೆ. 7-ಇಂಚಿನ ಟಿಎಫ್‌ಟಿ ಟಚ್‌ಸ್ಕ್ರೀನ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ರೀ-ಜೆನ್ ಬ್ರೇಕಿಂಗ್, ಕೀಲೆಸ್ ಎಂಟ್ರಿ ಹಾಗೂ ಕ್ರೂಸ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿವೆ. ಜೊತೆಗೆ ಹಲವು ಆಕರ್ಷಕ ರೈಡಿಂಗ್ ಮೋಡ್‌ಗಳನ್ನು ಪಡೆದುಕೊಂಡಿವೆ.
ಡ್ರೈವ್ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








