Hero: ಅಗ್ಗದ ಹೀರೋ ಇ-ಸ್ಕೂಟರ್‌ಗೆ ಮುಗಿಬಿದ್ದ ಗ್ರಾಹಕರು.. ಭಾರೀ ಸಂಖ್ಯೆಯಲ್ಲಿ ಮಾರಾಟ, 129% ಪ್ರಗತಿ!

ಹೀರೋ ಮೋಟೊಕಾರ್ಪ್ (Hero MotoCorp), ನಂ.1 ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. ವಿಡಾ (Vida) ಬ್ರ್ಯಾಂಡ್‌ನಡಿ 'ವಿ2' ಇ-ಸ್ಕೂಟರ್‌ನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಈ ಎಲೆಕ್ಟ್ರಿಕ್ ಸ್ಕೂಟರ್‌ಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದ್ದು, ಗ್ರಾಹಕರು ಕೂಡ ಮುಗಿಬಿದ್ದು ಖರೀದಿ ಮಾಡುತ್ತಿದ್ದಾರೆ. ಅದರಲ್ಲೂ ಇದೇ 'ಮೇ' ತಿಂಗಳು 'ವಿಡಾ ವಿ2' ಇ-ಸ್ಕೂಟರ್ ದಾಖಲೆ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಕಳೆದ ತಿಂಗಳು (ಮೇ-2025) ಹೀರೋ ಕಂಪನಿಯು ಬರೋಬ್ಬರಿ 8,361 ಯುನಿಟ್ 'ವಿಡಾ ವಿ2' ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡಿದೆ. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 129.69% ಬೆಳವಣಿಗೆಯಾಗಿದೆ. 2024ರ ಇದೇ ಅವಧಿಯಲ್ಲಿ 3,640 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು.

Hero Vida V2 Electric Scooter May 2025 Sales Details

ಅದೇ ರೀತಿಯಲ್ಲಿ ಈ ಏಪ್ರಿಲ್‌ನಲ್ಲಿ 7,116 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದ್ದು, ಶೇಕಡ 17.49% ಪ್ರಗತಿಯಾಗಿದೆ. ಹೀರೋ ವಿಡಾ ವಿ2 ಇ-ಸ್ಕೂಟರ್ ಮಾರಾಟ ಸಂಖ್ಯೆ ಅಧಿಕಗೊಳ್ಳಲು ನಾನಾ ಕಾರಣಗಳಿವೆ. ಬಹುಮುಖ್ಯವಾಗಿ ಈ ಎಲೆಕ್ಟ್ರಿಕ್ ಸ್ಕೂಟರ್ ಕೈಗೆಟುಕುವ ಬೆಲೆಯಲ್ಲಿ ಸಿಗುತ್ತದೆ. ಜೊತೆಗೆ ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಹೀಗಾಗಿ, ಭಾರೀ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತದೆ.

ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಹೊಚ್ಚ ಹೊಸ 'ಹೀರೋ ವಿಡಾ ವಿ2' ಎಲೆಕ್ಟ್ರಿಕ್ ಸ್ಕೂಟರ್, ಹಲವು ವಿಧದಲ್ಲಿ ಗ್ರಾಹಕರಿಗೆ ಖರೀದಿ ಲಭ್ಯವಿದೆ. ಅವುಗಳೆಂದರೆ ವಿ2 ಲೈಟ್ (V2 Lite), ವಿ2 ಪ್ಲಸ್ (V2 Plus) ಹಾಗೂ ವಿ2 ಪ್ರೊ (V2 Pro).

Hero Vida V2 Electric Scooter May 2025 Sales Details

ಹೀರೋ ವಿಡಾ ವಿ2 ಲೈಟ್:

ಇದು ಆರಂಭಿಕ ಶ್ರೇಣಿ ಮಾದರಿ (ಎಂಟ್ರಿ ಲೆವೆಲ್ ಮಾಡೆಲ್) ಆಗಿದ್ದು, ರೂ.96,000 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 2.2 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 94 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. 69 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 7-ಇಂಚಿರುವ ಟಿಎಫ್‌ಟಿ ಟಚ್‌ಸ್ಕ್ರೀನ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಹೀರೋ ವಿಡಾ ವಿ2 ಪ್ಲಸ್:

ಈ ಎಲೆಕ್ಟ್ರಿಕ್ ಸ್ಕೂಟರ್ ಮಧ್ಯಮ ಶ್ರೇಣಿ ಮಾದರಿ (ಮಿಡ್ ಲೆವೆಲ್ ಮಾಡೆಲ್) ಆಗಿ ಹೊರಹೊಮ್ಮಿದೆ. ಅದಕ್ಕೆ ತಕ್ಕಂತೆ ರೂ.1.15 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 3.44 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 143 ಕಿಲೋಮೀಟರ್ ಕ್ರಮಿಸುತ್ತದೆ. 85 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ.

ಹೀರೋ ವಿಡಾ ವಿ2 ಪ್ರೊ:

ಇದೊಂದು ಗರಿಷ್ಠ ಶ್ರೇಣಿ ಮಾದರಿ (ಟಾಪ್ ಎಂಡ್ ಮಾಡೆಲ್) ಎಂದೇ ಹೆಸರುವಾಸಿಯಾಗಿದೆ. ರೂ.1.35 ಲಕ್ಷ (ಎಕ್ಸ್-ಶೋರೂಂ) ಒಳಗೊಂಡಿದೆ. 3.94 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 165 ಕಿಲೋಮೀಟರ್ ಓಡುತ್ತದೆ. 90 ಟಾಪ್ ಸ್ಪೀಡ್‌ನ್ನು ಪಡೆದಿದ್ದು, ಹಲವು ರೈಡಿಂಗ್ ಮೋಡ್‌ಗಳನ್ನು ತನ್ನದಾಗಿಸಿಕೊಂಡಿದೆ.

ಇಂದು ಹೀರೋ ವಿಡಾ ವಿಎಕ್ಸ್2 (Hero Vida VX2) ಇ-ಸ್ಕೂಟರ್ ಅನಾವರಣ:

ಈ ಎಲೆಕ್ಟ್ರಿಕ್ ಸ್ಕೂಟರ್ ರೂ.65,000 ರಿಂದ ರೂ.70,000 (ಎಕ್ಸ್-ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯುವ ನೀರಿಕ್ಷೆಯಿದೆ. 2.2 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 3.4 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿರಲಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 100 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡಬಹುದು ಎಂದು ಅಂದಾಜಿಸಲಾಗಿದೆ.

More from DriveSpark

Article Published On: Tuesday, July 1, 2025, 8:30 [IST]
English summary
Hero vida v2 electric scooter may 2025 sales details
Read more on hero motocorp india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+