Hero: ಇನ್ನು 4 ದಿನ.. ಹೊಸ ಹೀರೋ ಎಲೆಕ್ಟ್ರಿಕ್ ಸ್ಕೂಟರ್ ಪರಿಚಯ.. 65,000 ಬೆಲೆ? ಹಲವು ವಿವರಗಳು ಬಹಿರಂಗ!

ಹೊಚ್ಚ ಹೊಸ ಹೀರೋ ವಿಡಾ ವಿಎಕ್ಸ್2 (Hero Vida VX2) ಇ-ಸ್ಕೂಟರ್‌ನ್ನು ಜುಲೈ 1 ರಂದು ಅನಾವರಣಗೊಳಿಸಲಾಗುತ್ತದೆ. ಈ ಎಲೆಕ್ಟ್ರಿಕ್ ಸ್ಕೂಟರ್‌ ಮೇಲೆ ಗ್ರಾಹಕರು ಕೂಡ ದೊಡ್ಡ ಮಟ್ಟದ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ನೂತನ ಸ್ಕೂಟರ್‌ ಬಗ್ಗೆ ಕಂಪನಿಯು ವಿವಿಧ ಟೀಸರ್‌ಗಳನ್ನು ಬಿಡುಗಡೆಗೊಳಿಸುವುದರೊಂದಿಗೆ ಹಲವು ವಿಚಾರಗಳನ್ನು ಬಹಿರಂಗಗೊಳ್ಳುತ್ತಿದೆ. ಇದರೊಂದಿಗೆ ಹಲವು ಮಾಧ್ಯಮಗಳು ಕೂಡ ಹೊಸ 'ವಿಡಾ ವಿಎಕ್ಸ್2' ಎಲೆಕ್ಟ್ರಿಕ್ ಸ್ಕೂಟರ್ ಹೇಗಿರಲಿದೆ ಎಂಬುದರ ಕುರಿತಂತೆ ಮೂಲಗಳನ್ನು ಆಧರಿಸಿ, ವರದಿ ಮಾಡುತ್ತಿವೆ.

ಸದ್ಯ, ಹೊಸ ಹೀರೋ ವಿಡಾ ವಿಎಕ್ಸ್2 ಇ-ಸ್ಕೂಟರ್‌ನ ರೂಪಾಂತರಗಳು (ವೇರಿಯೆಂಟ್ಸ್) ಹಾಗೂ ಬ್ಯಾಟರಿ ಪ್ಯಾಕ್ ಕುರಿತಂತೆ ಒಂದಷ್ಟು ಮಾಹಿತಿ ಲಭ್ಯವಾಗಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ ಗೋ (Go) ಹಾಗೂ ಪ್ಲಸ್ (Plus) ಎಂಬ ಎರಡು ಅತ್ಯಾಕರ್ಷಕ ರೂಪಾಂತರಗಳ ಆಯ್ಕೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯಬಹುದು ಎನ್ನಲಾಗಿದೆ.

Hero Vida VX2 Electric Scooter New Details Revealed

ನೂತನ ಹೀರೋ ವಿಡಾ ವಿಎಕ್ಸ್2 ಎಲೆಕ್ಟ್ರಿಕ್ ಸ್ಕೂಟರ್‌ನ 'ಗೋ' ರೂಪಾಂತರವು 2.2 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದುಕೊಂಡಿರಲಿದೆ. ಹಾಗೆಯೇ 'ಪ್ಲಸ್' ರೂಪಾಂತರವು 3.4 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿರಲಿದೆ ಎಂದು ಹೇಳಲಾಗಿದೆ. ಈ ಸ್ಕೂಟರ್ ಸಂಪೂರ್ಣ ಚಾರ್ಜ್‌ನಲ್ಲಿ 100 ಕಿ.ಮೀ ವರೆಗೆ ರೇಂಜ್ (ಮೈಲೇಜ್) ನೀಡುವ ಸಾಧ್ಯತೆಯಿದೆ.

ಹೊಸ ಇ-ಸ್ಕೂಟರ್ 7 ಬಣ್ಣಗಳೊಂದಿಗೆ ಗ್ರಾಹಕರ ಖರೀದಿಗೆ ದೊರೆಯಲಿದೆ ಎಂಬುದು ಬಹುತೇಕ ಖಚಿತವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾದ ಟೀಸರ್‌ ವಿಡಿಯೋದಲ್ಲಿ ನೂತನ ವಿಡಾ ವಿಎಕ್ಸ್2 ಎಲೆಕ್ಟ್ರಿಕ್ ಸ್ಕೂಟರ್‌ ವೈಟ್, ರೆಡ್ ಹಾಗೂ ಬ್ಲೂ ಬಣ್ಣಗಳನ್ನು ಹೊಂದಿರುವುದು ದೃಢಪಟ್ಟಿದೆ. ಇದರೊಂದಿಗೆ ಯೆಲ್ಲೋ, ಆರೆಂಜ್, ಬ್ಲ್ಯಾಕ್ ಮತ್ತು ಗ್ರೇ ಬಣ್ಣಗಳೊಂದಿಗೂ ಸಿಗಲಿದೆ ಎಂದು ಹೇಳಲಾಗಿದೆ.

Hero Vida VX2 Electric Scooter New Details Revealed

ಈ ಎಲೆಕ್ಟ್ರಿಕ್ ಸ್ಕೂಟರ್ ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟರ್ನ್-ಬೈ-ಟರ್ನ್ ನ್ಯಾವಿಗೇಷನ್‌, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿರುವ ನಿರೀಕ್ಷೆಯಿದೆ. ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) & ಹಿಂಭಾಗ (ರೇರ್) ಡಿಸ್ಕ್ ಬ್ರೇಕ್‌ಗಳನ್ನು ಹೊಂದಿರಬಹುದು ಎನ್ನಲಾಗಿದೆ.

ನೂತನ ಹೀರೋ ವಿಡಾ ವಿಎಕ್ಸ್2 ಇ-ಸ್ಕೂಟರ್ ಅತಿ ಕಡಿಮೆ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಾಗುವ ಎಲ್ಲ ಸಾಧ್ಯತೆಗಳಿವೆ. ಈ ಸ್ಕೂಟರ್ ರೂ.65,000 ರಿಂದ ರೂ.70,000 (ಎಕ್ಸ್-ಶೋರೂಂ) ದರವನ್ನು ಪಡೆದುಕೊಂಡಿರಬಹುದು ಎಂದು ಹೇಳಲಾಗಿದೆ. ಇದು ಬಜಾಜ್ ಚೇತಕ್ 3001, ಓಲಾ ಎಸ್1 ಏರ್, ಎಥರ್ 450ಎಸ್ ಹಾಗೂ ಟಿವಿಎಸ್ ಐಕ್ಯೂಬ್‌ಗಳ ಪ್ರಬಲವಾದ ಸ್ಪರ್ಧೆಯನ್ನು ಎದುರಿಸಬೇಕಾಗಿದೆ.

ಈ ಎಲೆಕ್ಟ್ರಿಕ್ ಸ್ಕೂಟರ್‌ನ್ನು ಹೀರೋ ಕಂಪನಿಯು ಬ್ಯಾಟರಿ-ಆಸ್-ಎ-ಸರ್ವಿಸ್ (BaaS) ಯೋಜನೆಯಡಿ ಮಾರಾಟಕ್ಕೆ ತರಲಿದೆ. ಅಂದರೆ, ನೂತನ ಸ್ಕೂಟರ್ ಬದಲಾಯಿಸಬಹುದಾದ ಬ್ಯಾಟರಿ ಪ್ಯಾಕ್‌ನ್ನು ಹೊಂದಿರಲಿದೆ. ಸವಾರರು ಖಾಲಿಯಾದ ಬ್ಯಾಟರಿಯನ್ನು ಚಾರ್ಜಿಂಗ್ ಸ್ಟೇಷನ್‌ನಲ್ಲಿ ನಿಗದಿಪಡಿಸುವ ಸ್ಥಳದಲ್ಲಿ ಇಡಬೇಕು. ಆ ನಂತರ, ಮೊದಲೇ 100% ಭರ್ತಿಯಾದ ಬ್ಯಾಟರಿ ಪ್ಯಾಕ್‌ನ್ನು ತೆಗೆದುಕೊಳ್ಳುವುದಾಗಿದೆ. ಅದಕ್ಕಾಗಿ ಮಾಸಿಕ ಇಂತಿಷ್ಟು ಶುಲ್ಕವನ್ನು ಪಾವತಿ ಮಾಡಬೇಕು. ಹೀಗಾಗಿ, ನೂತನ ಸ್ಕೂಟರ್ ಹೆಚ್ಚು ಅಗ್ಗವಾಗಿರಲಿದೆ ಎಂದು ಹೇಳಲಾಗಿದೆ.

ಪ್ರಸ್ತುತ ಖರೀದಿಗೆ ಲಭ್ಯವಿರುವ ಹೀರೋ ವಿಡಾ ವಿ2 (Hero Vida V2) ವಿಶೇಷತೆಗಳೇನು:

ಇದು ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಸಿಗುತ್ತದೆ. ರೂ.85,000 ದಿಂದ ರೂ.1.35 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 2.2 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್), 3.44 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 3.94 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಪೂರ್ತಿ ಚಾರ್ಜ್‌ನಲ್ಲಿ 94 ರಿಂದ 165 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ.

Article Published On: Friday, June 27, 2025, 13:46 [IST]
English summary
Hero vida vx2 electric scooter new details revealed
Read more on hero motocorp india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+