Hero: ಹೊಚ್ಚ ಹೊಸ ಹೀರೋ ಎಲೆಕ್ಟ್ರಿಕ್ ಸ್ಕೂಟರ್‌ನ ಪರೀಕ್ಷೆ.. ಶೀಘ್ರದಲ್ಲೇ ಕಡಿಮೆ ಬೆಲೆಗೆ ಬಿಡುಗಡೆ?

ದೇಶದ ಅತಿ ದೊಡ್ಡ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಹೀರೋ ಮೋಟೋಕಾರ್ಪ್ (Hero MotoCorp) ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯ 'ವಿಡಾ' ಸೀರೀಸ್ ಇ-ಸ್ಕೂಟರ್‌ಗಳು ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ, ಹೀರೋ ಮೋಟೋಕಾರ್ಪ್ 'ವಿಡಾ' ಎಲೆಕ್ಟ್ರಿಕ್ ಸ್ಕೂಟರ್‌ನ ಲೈನ್ಅಪ್‌ನ್ನು ವಿಸ್ತರಿಸಲು ಮುಂದಾಗಿದೆ. ಅತಿ ಶೀಘ್ರದಲ್ಲಿಯೇ ನೂತನ ಹೀರೋ ವಿಡಾ ಜಡ್ (Hero Vida Z) ಇ-ಸ್ಕೂಟರ್‌ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಲಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಕಳೆದ ಜನವರಿಯಲ್ಲಿ ಮುಕ್ತಾಯಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಹೊಸ 'ಹೀರೋ ವಿಡಾ ಜಡ್' ಎಲೆಕ್ಟ್ರಿಕ್ ಸ್ಕೂಟರ್‌ನ್ನು ಮೊದಲ ಬಾರಿಗೆ ಪ್ರದರ್ಶಿಸಲಾಗಿತ್ತು. ಈಚೆಗೆ, ಇದೇ ಸ್ಕೂಟರ್ ಪರೀಕ್ಷಾರ್ಥ ಸಂಚಾರವನ್ನು ನಡೆಸುವಾಗಲೂ ಕಾಣಿಸಿಕೊಂಡಿದೆ. ಅದರ ಸ್ಪೈ ಫೋಟೋಗಳು ಆನ್‌ಲೈನ್‌ನಲ್ಲಿ ಸಹ ಸೋರಿಕೆಯಾಗಿವೆ.

Hero Vida Z Spotted On Test Launch Soon Expected Price Range Features Details

ಈ ಫೋಟೋಗಳನ್ನು ಸೂಕ್ಷ್ಮವಾಗಿ ಗಮನಿಸಿದಾಗ ನೂತನ ಸ್ಕೂಟರ್ ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಪ್ರಾಯೋಗಿಕ ಓಡಾಟ ವೇಳೆಯಲ್ಲಿ ಕಂಡು ಬಂದ 'ವಿಡಾ ಜಡ್' ಸ್ಕೂಟರ್ ಕೂಡ ಹೀರೋದ ಪೆಟ್ರೋಲ್ ಚಾಲಿತ ಸ್ಕೂಟರ್‌ಗಳಂತೆ ಉತ್ತಮವಾಗಿರುವ ಸೈಡ್ ಪ್ರೊಫೈಲ್, ಫ್ಲಾಟ್ ಸಿಂಗಲ್-ಪೀಸ್ ಸೀಟ್ ಹಾಗೂ ಸಿಂಗಲ್-ಪೀಸ್ ಗ್ರಾಬ್ ರೈಲ್‌ನ್ನು ಒಳಗೊಂಡಿದೆ.

ಭಾರತ್ ಮೊಬಿಲಿಟಿ ಎಕ್ಸ್‌ಪೋದಲ್ಲಿಯೂ ಅನಾವರಣಗೊಳಿಸಲಾದ ಇದೇ 'ವಿಡಾ ಜಡ್' ಇ-ಸ್ಕೂಟರ್ ಮಾಡೆಲ್, ವಿನ್ಯಾಸದ ದೃಷ್ಟಿಯಿಂದ ಮುಂಭಾಗ (ಫ್ರಂಟ್) ಅತ್ಯುತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್ ಹಾಗೂ ಎಲ್ಇಡಿ ಡಿಆರ್‌ಎಲ್‌ಗಳನ್ನು ಹೊಂದಿತ್ತು. ಜೊತೆಗೆ ಹಿಂಭಾಗ (ರೇರ್) 'ಹೆಚ್' ಆಕಾರಕ್ಕೆ ಹೋಲಿಕೆಯಾಗಬಲ್ಲ ಎಲ್ಇಡಿ ಟೈಲ್‌ಲ್ಯಾಂಪ್‌ನ್ನು ಪಡೆದಿತ್ತು.

Hero Vida Z Spotted On Test Launch Soon Expected Price Range Features Details

ಹೊಸ ಹೀರೋ ವಿಡಾ ಜಡ್ ಎಲೆಕ್ಟ್ರಿಕ್ ಸ್ಕೂಟರ್ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿರುವ ನಿರೀಕ್ಷೆಯಿದೆ. ಬಹುಮುಖ್ಯವಾಗಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂತ್ ಕನೆಕ್ಟಿವಿಟಿ, ಟರ್ನ್-ಬೈ-ಟರ್ನ್ ನ್ಯಾವಿಗೇಷನ್‌ ಹಾಗೂ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿರಬಹುದು ಎನ್ನಲಾಗಿದೆ.

ನೂತನ ಹೀರೋ ವಿಡಾ ಜಡ್ ಇ-ಸ್ಕೂಟರ್ 2.2 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿರುವ ಸಾಧ್ಯತೆಯೂ ಹೆಚ್ಚಿದೆ. ಸಂಪೂರ್ಣ ಚಾರ್ಜ್‌ನಲ್ಲಿ 94 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡಬಹುದು ಎಂದು ಅಂದಾಜಿಸಲಾಗಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ ರೂ.1 ಲಕ್ಷ ಆಸುಪಾಸಿನಲ್ಲಿ ಎಕ್ಸ್-ಶೋರೂಂ ದರವನ್ನು ಪಡೆದುಕೊಂಡಿರುವ ನಿರೀಕ್ಷೆಯಿದೆ.

Take a Poll

ಪ್ರಸ್ತುತ ದೇಶೀಯ ಗ್ರಾಹಕರ ಖರೀದಿಗೆ ದೊರೆಯುವ ಹೀರೋ ವಿಡಾ ವಿ2 (Hero Vida V2) ಇ-ಸ್ಕೂಟರ್ ವಿ2 ಲೈಟ್, ವಿ2 ಪ್ಲಸ್ & ವಿ2 ಪ್ರೊ ಎಂಬ 3 ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಹೊಂದಿದೆ. ರೂ.96,000 ದಿಂದ ರೂ.1.35 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಪೂರ್ತಿ ಚಾರ್ಜ್‌ನಲ್ಲಿ 94 ರಿಂದ 165 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಟಿಎಫ್‌ಟಿ ಟಚ್‌ಸ್ಕ್ರೀನ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Source Link: Gaadiwaadi

More from DriveSpark

Article Published On: Wednesday, March 26, 2025, 12:21 [IST]
English summary
Hero vida z spotted on test launch soon expected price range features details
Read more on hero motocorp india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+