Hero: ಈ ತಿಂಗಳೇ ಹೊಸ ಹೀರೋ ಸ್ಕೂಟರ್‌ನ ಡೆಲಿವರಿ ಶುರು.. ಬೆಲೆ ಎಷ್ಟು, ವಿಶೇಷತೆಗಳೇನು?

ಹೀರೋ ಜೂಮ್ 160 (Hero Xoom 160) ಜನಪ್ರಿಯ ಮ್ಯಾಕ್ಸಿ ಸ್ಕೂಟರ್ ಆಗಿದೆ. ಇದೇ ವರ್ಷದ ಜನವರಿಯಲ್ಲಿ ಈ ಸ್ಕೂಟರ್‌ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಲಾಯಿತು. ಆದರೆ, ಮಾರಾಟಕ್ಕೆ ಬಂದು 6 ತಿಂಗಳು ಕಳೆದರೂ ಬುಕ್ಕಿಂಗ್‌ನ್ನು ಶುರು ಮಾಡಿರಲಿಲ್ಲ. ಜುಲೈನಿಂದ ಆರ್ಡರ್ ತೆಗೆದುಕೊಳ್ಳುವ ಕಾರ್ಯಕ್ಕೆ ಕಂಪನಿಯು ಚಾಲನೆ ನೀಡಿದೆ. ಈ ತಿಂಗಳಿಂದಲೇ (ಸೆಪ್ಟೆಂಬರ್ 2025) 'ಜೂಮ್ 160' ಸ್ಕೂಟರ್‌ನ ವಿತರಣೆಯನ್ನು ಪ್ರಾರಂಭ ಮಾಡುವುದಕ್ಕೂ ಮುಂದಾಗಿದೆ. ಬನ್ನಿ, ನೂತನ ಸ್ಕೂಟರ್‌ನ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಪ್ರಮುಖ ವಿವರಗಳನ್ನು ತಿಳಿಯೋಣ.

ಬೆಲೆ (Price):

ಹೊಚ್ಚ ಹೊಸ ಹೀರೋ ಜೂಮ್ 160 ಸ್ಪರ್ಧಾತ್ಮಕ ಬೆಲೆಯಲ್ಲಿ ಲಭ್ಯವಿದ್ದು, ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಖರೀದಿ ಮಾಡಬಹುದು. ಅದಕ್ಕೆ ತಕ್ಕಂತೆ ರೂ.1.49 ಲಕ್ಷ ಎಕ್ಸ್-ಶೋರೂಂ ದರವನ್ನು ಪಡೆದಿದೆ. ಆನ್-ರೋಡ್ ಬೆಲೆಗಳು ರೂ.1.89 ಲಕ್ಷಕ್ಕೆ ಮುಟ್ಟುವ ನಿರೀಕ್ಷೆಯಿದೆ.

Hero Xoom 160 Scooter Delivery Starts This Month Price Design Engine And Features Details

ವಿನ್ಯಾಸ & ಬಣ್ಣಗಳು (Design & Colors):

ಈ ಸ್ಕೂಟರ್ ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಡುಯಲ್ ಚೇಂಬರ್ ಎಲ್ಇಡಿ ಹೆಡ್‌ಲೈಟ್, ವಿಂಡ್‌ಸ್ಕ್ರೀನ್‌ ಹಾಗೂ ಸಿಂಗಲ್ ಪೀಸ್ ಸೀಟ್‌ನ್ನು ಹೊಂದಿದೆ. ಮ್ಯಾಟ್ ರೇನ್‌ಫಾರೆಸ್ಟ್ ಗ್ರೇ, ಸಮ್ಮಿಟ್ ವೈಟ್, ಕ್ಯಾನ್ಯನ್ ರೆಡ್ ಮತ್ತು ಮ್ಯಾಟ್ ವಾಲ್ಕ್ಯಾನಿಕ್ ಗ್ರೇ ಎಂಬ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಸುತ್ತಳತೆ (Dimensions):

ಇದು ದೊಡ್ಡ ಗಾತ್ರದಲ್ಲಿರುವ ಸ್ಕೂಟರ್ ಆಗಿದೆ. 1983 ಎಂಎಂ ಉದ್ದ, 772 ಎಂಎಂ ಅಗಲ ಮತ್ತು 1214 ಎಂಎಂ ಎತ್ತರ ಕೂಡ ಇದೆ. 155 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1348 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ. ಇದರೊಂದಿಗೆ ಸರಿ ಸುಮಾರು 142 ಕೆಜಿ ತೂಕವಿದೆ.

ಕಾರ್ಯಕ್ಷಮತೆ (Performance):

ಹೊಸ ಹೀರೋ ಜೂಮ್ 160 ಸ್ಕೂಟರ್ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಪಡೆದಿದೆ. 156 ಸಿಸಿ ಸಿಂಗಲ್-ಸಿಲಿಂಡರ್ ಲಿಕ್ವಿಡ್-ಕೂಲ್ಡ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 8,000 ಆರ್‌ಪಿಎಂನಲ್ಲಿ 14.6 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 6,500 ಆರ್‌ಪಿಎಂನಲ್ಲಿ 14 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ಈ ಸ್ಕೂಟರ್ ಉತ್ತಮ ಇಂಧನ ದಕ್ಷತೆ (Fuel efficiency) ಹೊಂದಿರಲಿದ್ದು, 40 ಕಿ.ಮೀ ವರೆಗೆ ಮೈಲೇಜ್ ಕೊಡಬಹುದು ಎಂದು ಅಂದಾಜಿಸಲಾಗಿದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 5.9 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ವೈಶಿಷ್ಟ್ಯಗಳು (Features):

ನೂತನ ಹೀರೋ ಜೂಮ್ 160 ಸ್ಕೂಟರ್ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಬಹುಮುಖ್ಯವಾಗಿ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್‌, ಐ3ಎಸ್ ಸಿಸ್ಟಮ್, ಸೈಲೆಂಟ್ ಸ್ಟಾರ್ಟರ್, ಸ್ಮಾರ್ಟ್-ಕೀ ವಿತ್ ಕೀಲೆಸ್ ಇಗ್ನಿಷನ್, ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ರಿಮೋಟ್ ಸೀಟ್ ಅನ್‌ಲಾಕ್, ಬ್ಲೂಟೂತ್ ಕನೆಕ್ಟಿವಿಟಿ ಮತ್ತು ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್‌ನ್ನು ಪಡೆದಿದೆ.

ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup & Braking System):

ಇದು ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಟ್ವಿನ್ ಶಾಕ್ ಅಬ್ಸಾರ್ಬರ್ಸ್ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಸಿಂಗಲ್ ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ. ಜೊತೆಗೆ 12-ಇಂಚಿನ ಅಲಾಯ್ ವೀಲ್‌ಗಳನ್ನು ತನ್ನದಾಗಿಸಿಕೊಂಡಿದೆ.

ಒಟ್ಟಾರೆಯಾಗಿ ಹೊಸ ಹೀರೋ ಜೂಮ್ 160 ಸ್ಕೂಟರ್ ಸಾಕಷ್ಟು ಅತ್ಯುತ್ತಮವಾಗಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ದೊರೆಯುತ್ತದೆ. ಇದಕ್ಕೆ ಯಮಹಾ ಏರೋಕ್ಸ್ 155 ಹಾಗೂ ಎಪ್ರಿಲಿಯಾ ಎಸ್ಆರ್ 160 ಸ್ಕೂಟರ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ. ಮುಂಬರುವ ದಿನಗಳಲ್ಲಿ ಈ ಸ್ಕೂಟರ್‌ಗೆ ಗ್ರಾಹಕರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

More from DriveSpark

Article Published On: Wednesday, September 3, 2025, 17:22 [IST]
English summary
Hero xoom 160 scooter delivery starts this month price design engine and features details
Read more on hero motocorp india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+