Hero: ಹೀರೋದ ಈ ಹೊಸ ಸ್ಕೂಟರ್ 3 ರೂಪದಲ್ಲಿ ಖರೀದಿಗೆ ಲಭ್ಯ.. 53 ಕಿ.ಮೀ ಮೈಲೇಜ್.. 72,000 ಆರಂಭಿಕ ಬೆಲೆ!

ಭಾರತದ ಜನಪ್ರಿಯ ದ್ವಿಚಕ್ರ ವಾಹನ (Two Wheeler) ಕಂಪನಿಯಾಗಿ ಹೀರೋ ಮೋಟೋಕಾರ್ಪ್ (Hero MotoCorp) ಗುರುತಿಸಿಕೊಂಡಿದ್ದು, ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿ ಮಾರಾಟಗೊಳಿಸುವ 'ಸ್ಪ್ಲೆಂಡರ್' ಪ್ರಖ್ಯಾತ ಬೈಕ್ ಆಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಸದ್ಯ, ಹೀರೋ ಸ್ಕೂಟರ್ ವಿಭಾಗದಲ್ಲೂ ನಿಧಾನವಾಗಿ ಖ್ಯಾತಿ ಗಳಿಸುತ್ತಿದ್ದು, ಮಧ್ಯಮ ವರ್ಗದ ಜನರಿಗೆ ಹೆಚ್ಚಿನ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ 'ಜೂಮ್' ಸ್ಕೂಟರ್‌ನ್ನು ವಿವಿಧ ರೂಪದಲ್ಲಿ ಮಾರಾಟಕ್ಕೆ ತಂದಿದೆ. ಬನ್ನಿ.. ಈ ನೂತನ ಸ್ಕೂಟರ್‌ ಮಾಡೆಲ್‌ಗಳ ಬೆಲೆ ಹಾಗೂ ವಿಶೇಷತೆ ಕುರಿತಂತೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ.

ಹೀರೋ ಜೂಮ್ 110 (Hero Xoom 110): ಈ ಸ್ಕೂಟರ್ ರೂ.72,284 ರಿಂದ ರೂ.82,617 ಎಕ್ಸ್ ಶೋರೂಂ ಬೆಲೆಯನ್ನು ಖರೀದಿಗೆ ದೊರೆಯುತ್ತದೆ. 110.9 ಸಿಸಿ ಏರ್-ಕೋಲ್ಡ್ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 8.15 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 8.7 ಎನ್ಎಂ (ನ್ಯೂಟನ್ ಮೀಟರ್) ಹೊರಹಾಕುತ್ತದೆ.

Hero Xoom Scooter Models Best For Buy Affordable Price And Best Mileage Details

ಈ ಹೀರೋ ಜೂಮ್ 110 ಸ್ಕೂಟರ್ 53.4 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಪೋಲ್‌ಸ್ಟಾರ್ ಬ್ಲೂ, ಸ್ಪೋರ್ಟ್ ರೆಡ್, ಬ್ಲ್ಯಾಕ್ ಹಾಗೂ ಮ್ಯಾಟ್ ಅಬ್ರಾಕ್ಸ್ ಆರೆಂಜ್ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್, ಗ್ಲೋವ್‌ಬಾಕ್ಸ್ ಮತ್ತು ಬೂಟ್‌ಲೈಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಹೀರೋ ಜೂಮ್ 125 (Hero Xoom 125): ಇದು ರೂ.86,900 (ಎಕ್ಸ್ ಶೋರೂಂ) ಬೆಲೆಯನ್ನು ಪಡೆದಿದೆ. 124.6 ಸಿಸಿ ಏರ್-ಕೋಲ್ಡ್ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 9.8 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 10.4 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 45 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡಬಹುದು ಎಂದು ಅಂದಾಜಿಸಲಾಗಿದೆ.

Hero Xoom Scooter Models Best For Buy Affordable Price And Best Mileage Details

ನೂತನ ಹೀರೋ ಜೂಮ್ 125 ಸ್ಕೂಟರ್, ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಸ್ಪೋರ್ಟಿ ಎಲ್ಇಡಿ ಹೆಡ್‌ಲೈಟ್ ಹಾಗೂ ಸ್ಲಿಮ್ ಡುಯಲ್ ಎಲ್ಇಡಿ ಟೈಲ್ ಲೈಟ್‌ಗಳನ್ನು ಪಡೆದಿದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್‌, ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್/ ಡ್ರಮ್ ಬೈಕ್‌ಗಳನ್ನು ಹೊಂದಿದೆ.

ಹೀರೋ ಜೂಮ್ 160 (Hero Xoom 160): ಈ ಸ್ಕೂಟರ್, ರೂ.1.48 ಲಕ್ಷ ಎಕ್ಸ್ ಶೋರೂಂ ದರವನ್ನು ಒಳಗೊಂಡಿದೆ. 156-ಸಿಸಿ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 40 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡಬಹುದು ಎಂದು ಹೇಳಲಾಗಿದೆ. ಕ್ಯಾಸ್ಟ್ ಪರ್ಲ್ ಸಮ್ಮಿಟ್ ವೈಟ್ ಮತ್ತು ಕ್ಯಾಸ್ಟ್ ಕ್ಯಾನ್ಯನ್ ರೆಡ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ.

Hero Xoom Scooter Models Best For Buy Affordable Price And Best Mileage Details

ಈ ಹೀರೋ ಜೂಮ್ ಸ್ಕೂಟರ್ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್‌, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಐ3ಎಸ್ ಸಿಸ್ಟಮ್ ಮತ್ತು ಸೈಲೆಂಟ್ ಸ್ಟಾರ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡಬಲ್ ಡಿಸ್ಕ್ ಬೈಕ್‌ಗಳನ್ನು ಹೊಂದಿದ್ದು, 12-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ.

ಡ್ರೈವ್‌ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Wednesday, January 29, 2025, 23:01 [IST]
English summary
Hero xoom scooter models best for buy affordable price and best mileage details
Read more on hero motocorp india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+