Hero: 66 Km ಮೈಲೇಜ್.. ಬೆಲೆಯೂ ಅಗ್ಗ, ಈ ಹೀರೋ ಬೈಕ್ ಕುರಿತ ಪ್ರಮುಖಾಂಶಗಳು!
ಹೀರೋ ಎಕ್ಸ್‌ಟ್ರೀಮ್ 125ಆರ್ (Hero Xtreme 125R) ಜನಪ್ರಿಯ ಬೈಕ್ ಎಂದೇ ಹೆಸರುವಾಸಿಯಾಗಿದೆ. ಇದನ್ನು ಯುವ ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ತಯಾರಿಸಲಾಗಿದ್ದು, ಬಜೆಟ್ ಬೆಲೆಯಲ್ಲಿಯೂ ಸಿಗುತ್ತದೆ. ನೀವು ಹೊಚ್ಚ ಹೊಸ ಮೋಟಾರ್‌ಸೈಕಲ್‌ವೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ 'ಎಕ್ಸ್‌ಟ್ರೀಮ್ 125ಆರ್' ಅತ್ಯುತ್ತಮವಾದ ಆಯ್ಕೆಯಾಗಲಿದೆ. ಬನ್ನಿ, ಈ ಬೈಕ್‌ನ ದರವೆಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಪ್ರಮುಖಾಂಶಗಳು ಏನೆಂಬುದನ್ನು ತಿಳಿಯೋಣ.
ಬೆಲೆ & ರೂಪಾಂತರಗಳು (Price & Variants):
ಇದು ಕನಿಷ್ಠ ರೂ.92,500 ಹಾಗೂ ಗರಿಷ್ಠ ರೂ.1.04 ಲಕ್ಷ (ಎಕ್ಸ್-ಶೋರೂಂ - ನವದೆಹಲಿ) ಬೆಲೆಯನ್ನು ಒಳಗೊಂಡಿದೆ. ಬಡ ಹಾಗೂ ಮಧ್ಯಮ ವರ್ಗದ ಖರೀದಿದಾರರು ಸುಲಭವಾಗಿ ಕೊಂಡುಕೊಳ್ಳಬಹುದು. ಎಬಿಎಸ್ ಸಿಂಗಲ್ ಸೀಟ್ ಹಾಗೂ ಎಬಿಎಸ್ ಸ್ಪ್ಲಿಟ್ ಸೀಟ್ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ವಿನ್ಯಾಸ & ಬಣ್ಣಗಳು (Design & Colors):
ಈ ಮೋಟಾರ್‌ಸೈಕಲ್ ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಉತ್ತಮವಾದ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಎಲ್ಇಡಿ ಟೈಲ್ ಲ್ಯಾಂಪ್ ಹಾಗೂ 17 ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ರಸ್ತೆಯ ಮೇಲೆ ಬಿಗಿಯಾದ ಹಿಡಿತ ಒದಗಿಸಲು ಉತ್ತಮವಾದ ಟೈರ್‌ಗಳನ್ನು ಹೊಂದಿದೆ. ಸ್ಟಾಲಿಯನ್ ಬ್ಲ್ಯಾಕ್, ಅಬ್ರಾಕ್ಸ್ ಆರೆಂಜ್, ಫೈರ್‌ಸ್ಟಾರ್ಮ್ ರೆಡ್, ಬ್ಲ್ಯಾಕ್ ಪರ್ಲ್ ರೆಡ್, ಕೋಬಾಲ್ಟ್ ಬ್ಲೂ ಹಾಗೂ ಬ್ಲ್ಯಾಕ್ ಲೀಫ್ ಗ್ರೀನ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಸುತ್ತಳತೆ (Dimensions):
ನೂತನ 'ಎಕ್ಸ್‌ಟ್ರೀಮ್ 125ಆರ್' ಹೆಚ್ಚು ದೊಡ್ಡ ಗಾತ್ರದಲ್ಲಿದೆ. 2,009 ಎಂಎಂ ಉದ್ದ, 793 ಎಂಎಂ ಅಗಲ ಹಾಗೂ 1,051 ಎಂಎಂ ಎತ್ತರವಿದೆ. 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1319 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ. ಬರೋಬ್ಬರಿ 136 ಕೆಜಿ ತೂಕವಿದೆ.
ಕಾರ್ಯಕ್ಷಮತೆ (Performance):
ಇದು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 124.7 ಸಿಸಿ ಏರ್ ಕೂಲ್ಡ್, ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 66 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 95 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 6.3 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ವೈಶಿಷ್ಟ್ಯಗಳು (Features):
ಈ ಬೈಕ್ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಬಹುಮುಖ್ಯವಾಗಿ 4.2-ಇಂಚಿನ ಕಲರ್ ಎಲ್‍ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, ಐಡಲ್ ಸ್ಟಾರ್ಟ್/ ಸ್ಟಾಪ್ ಟೆಕ್ನಾಲಜಿ, ಎಂಜಿನ್ ಕಿಲ್ ಸ್ವಿಚ್ ಮತ್ತು ಸ್ಯಾರಿ ಗಾರ್ಡ್‌ನ್ನು ಹೊಂದಿದೆ. ಸೀಟ್ ಎತ್ತರ 794 ಎಂಎಂ ಇದೆ. 10 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ.
ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup & Braking System):
ಹೊಸ 'ಹೀರೋ ಎಕ್ಸ್‌ಟ್ರೀಮ್ 125ಆರ್' ಮೋಟಾರ್‌ಸೈಕಲ್ ಸವಾರರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.
ಪ್ರತಿಸ್ಪರ್ಧಿ ಬೈಕ್‌ಗಳು (Rival Bikes):
ಇದಕ್ಕೆ ಸಾಲು - ಸಾಲು ಪ್ರತಿಸ್ಪರ್ಧಿಯಾಗಿವೆ. ಬಜಾಜ್ ಪಲ್ಸರ್ ಎನ್125 (Bajaj Pulsar N125), ಹೋಂಡಾ ಎಸ್‌ಪಿ 125 (Honda SP 125), ಟಿವಿಎಸ್ ರೈಡರ್ 125 (TVS Raider 125) ಹಾಗೂ ಬಜಾಜ್ ಪಲ್ಸರ್ ಎನ್ಎಸ್125 (Bajaj Pulsar NS125) ಪ್ರಬಲವಾದ ಎದುರಾಳಿಯಾಗಿವೆ.


Click it and Unblock the Notifications








