ಹೊಸ Honda Activa 125 ಆನಿವರ್ಸರಿ ಎಡಿಷನ್ ಕುರಿತ ಪ್ರಮುಖಾಂಶಗಳಿವು.. ಯಾರು ಹೇಳಲ್ಲ!

ಹೋಂಡಾ ಮೋಟಾರ್‌ಸೈಕಲ್ & ಸ್ಕೂಟರ್ ಇಂಡಿಯಾದ 25ನೇ ವರ್ಷಾಚರಣೆಯನ್ನು ಆಚರಿಸಲಾಗುತ್ತಿದೆ. ಅದರ ನೆನಪಿಗಾಗಿ ಈಚೆಗೆ 'ಆಕ್ಟಿವಾ 125 ಆನಿವರ್ಸರಿ ಎಡಿಷನ್'ನ್ನು ಅದ್ದೂರಿಯಾಗಿ ಮಾರಾಟಕ್ಕೆ ತರಲಾಗಿದೆ. ಇದು ವಿನ್ಯಾಸದಲ್ಲಿ ಒಂದಷ್ಟು ಹೊಸತನಗಳಿಗೆ ಸಾಕ್ಷಿಯಾಗಿದೆ. ಅದರ ಹೊರತಾಗಿ ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯದಲ್ಲಿ ಯಾವುದೇ ಪ್ರಮುಖವಾದ ಬದಲಾವಣೆಯನ್ನು ಪಡೆದುಕೊಂಡಿಲ್ಲ. ಬನ್ನಿ, ನೂತನ ಸ್ಕೂಟರ್‌ನ ಬೆಲೆ ಹಾಗೂ ವಿಶೇಷತೆಗಳ ಕುರಿತ ಪ್ರಮುಖಾಂಶಗಳು ತಿಳಿಯೋಣ.

ಬೆಲೆ (Price):

ಹೊಚ್ಚ ಹೊಸ ಹೋಂಡಾ ಆಕ್ಟಿವಾ 125 ಆನಿವರ್ಸರಿ ಎಡಿಷನ್ (Honda Activa 125 Anniversary Edition), ಕೈಗೆಟುಕುವ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ಲಭ್ಯವಿದೆ. ರೂ.97,270 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಈಗಾಗಲೇ ಬುಕ್ಕಿಂಗ್‌ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಆಸಕ್ತ ಖರೀದಿದಾರರು ಕಾಯ್ದಿರಿಸಬಹುದು. ಈ ತಿಂಗಳಾಂತ್ಯದೊಳಗೆ ವಿತರಣಾ ಕಾರ್ಯಕ್ಕೂ ಚಾಲನೆ ನೀಡಲಾಗುತ್ತದೆ.

Honda Activa 125 Anniversary Edition Top Things

ವಿನ್ಯಾಸ (Design):

ಈ ಸ್ಕೂಟರ್ ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಅದು ನೋಡುಗರ ಸೆಳೆಯುವಂತಿದೆ. ಬಾಡಿ ಪ್ಯಾನೆಲ್‌ನಲ್ಲಿ ಕಣ್ಣು ಕುಕ್ಕುವಂತಹ ಗ್ರಾಫಿಕ್ಸ್ ಪಡೆದಿದೆ. 25ನೇ ಆನಿವರ್ಸರಿ ಲೋಗೋ ಹಾಗೂ ಪೈರೈಟ್ ಬ್ರೌನ್ ಮೆಟಾಲಿಕ್ ಬಣ್ಣದಲ್ಲಿರುವ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಪರ್ಲ್ ಸೈರನ್ ಬ್ಲೂ ಮತ್ತು ಮ್ಯಾಟ್ ಸ್ಟೀಲ್ ಬ್ಲ್ಯಾಕ್ ಮೆಟಾಲಿಕ್ ಬಣ್ಣಗಳೊಂದಿಗೂ ದೊರೆಯುತ್ತದೆ.

ಸುತ್ತಳತೆ (Dimensions):

ಇದು 1850 ಎಂಎಂ ಉದ್ದ, 707 ಎಂಎಂ ಅಗಲ ಹಾಗೂ 1170 ಎಂಎಂ ಎತ್ತರವು ಇದೆ. ಜೊತೆಗೆ 162 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1260 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. ಸರಿ ಸುಮಾರು 110 ಕೆಜಿ ತೂಕವಿದ್ದು, 5.3 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ತನ್ನದಾಗಿಸಿಕೊಂಡಿದೆ.

ಕಾರ್ಯಕ್ಷಮತೆ (Performance):

ನೂತನ 'ಹೋಂಡಾ ಆಕ್ಟಿವಾ 125 ಆನಿವರ್ಸರಿ ಎಡಿಷನ್' ಪವರ್‌ಟ್ರೇನ್‌ನಲ್ಲೂ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಇದು 123.92 ಸಿಸಿ ಪೆಟ್ರೋಲ್ ಎಂಜಿನ್‌ ಆಯ್ಕೆಯನ್ನು ಪಡೆದಿದೆ. 6500 ಆರ್‌ಪಿಎಂನಲ್ಲಿ 8.42 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 5000 ಆರ್‌ಪಿಎಂನಲ್ಲಿ 10.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 47 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ.

ವೈಶಿಷ್ಟ್ಯಗಳು (Features):

ಈ ಸ್ಕೂಟರ್ 4.2-ಇಂಚಿರುವ ಟಿಎಫ್‌ಟಿ ಕನ್ಸೋಲ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್, ಟರ್ನ್-ಬೈ-ಟರ್ನ್ ನ್ಯಾವಿಗೇಶನ್‌, ಸಿಂಗಲ್ ಸೀಟ್, ಕ್ಯಾರಿ ಹುಕ್ ಹಾಗೂ ಐಡಲ್ ಸ್ಟಾರ್ಟ್/ ಸ್ಟಾಪ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 10 ಸೆಕೆಂಡಿನಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup & Braking System):

ಇದು ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) ಸಿಂಗಲ್ ಸೈಡೆಡ್ ಶಾಕ್ ಅಬ್ಸಾರ್ಬರ್‌ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಸವಾರರ ರಕ್ಷಣೆಗಾಗಿ ಸಿಬಿಎಸ್ (ಕಂಬೈನ್ಡ್ ಬ್ರೇಕಿಂಗ್ ಸಿಸ್ಟಮ್) ಮತ್ತು ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಹೋಂಡಾ ಆಕ್ಟಿವಾ 110 ಆನಿವರ್ಸರಿ ಎಡಿಷನ್ ಕೂಡ ಬಿಡುಗಡೆಯಾಗಿದೆ:

ಈ ಸ್ಕೂಟರ್ ರೂ.92,565 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೆಚ್ಚು-ಕಮ್ಮಿ 'ಆಕ್ಟಿವಾ 125 ಆನಿವರ್ಸರಿ ಎಡಿಷನ್'ನಂತೆಯೇ ವಿನ್ಯಾಸವನ್ನು ಪಡೆದಿದೆ. 109.51 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದ್ದು, 55 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕನ್ಸೋಲ್‌, ಸ್ಮಾರ್ಟ್‌ಫೋನ್‌ ಕನೆಕ್ಟಿವಿಟಿ ಹಾಗೂ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಹೋಂಡಾ ಎಸ್‌ಪಿ125 ಆನಿವರ್ಸರಿ ಎಡಿಷನ್ ಸಹ ಮಾರಾಟಕ್ಕೆ ಬಂದಿದೆ:

ಇದು ರೂ.1.02 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ವಿನ್ಯಾಸವು ಕೂಡ ನವೀನವಾಗಿದೆ. 123.94 ಸಿಸಿ ಸಿಂಗಲ್-ಸಿಲಿಂಡರ್, ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಪಡೆದಿದೆ. 63 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕನ್ಸೋಲ್ ಹಾಗೂ ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ತನ್ನಾದಾಗಿಸಿಕೊಂಡಿದೆ.

Article Published On: Tuesday, August 19, 2025, 15:48 [IST]
English summary
Honda activa 125 anniversary edition top things
Read more on honda motorcycle india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+