ಬಡವರು ತೆಗೆದುಕೊಳ್ಳಬಹುದು: Honda Activa ಸೇರಿ ಈ ಜನಪ್ರಿಯ ಸ್ಕೂಟರ್‌ಗಳ ಬೆಲೆ ಭಾರೀ ಇಳಿಕೆ, ಹೊಸ ದರವೆಷ್ಟು?

ನಿನ್ನೆಯಿಂದಲೇ ಪರಿಷ್ಕೃತ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರಗಳು ಅಧಿಕೃತವಾಗಿ ಜಾರಿಗೊಂಡಿವೆ. ಇದರ ಸಂಪೂರ್ಣ ಲಾಭವನ್ನು ದ್ವಿಚಕ್ರ ವಾಹನ ತಯಾರಕ ಕಂಪನಿಗಳು ತಮ್ಮ ಗ್ರಾಹಕರಿಗೆ ವರ್ಗಾಯಿಸುತ್ತಿವೆ. ಜನಪ್ರಿಯ ಸ್ಕೂಟರ್‌ಗಳಾದ ಹೋಂಡಾ ಆಕ್ಟಿವಾ 125, ಟಿವಿಎಸ್ ಜೂಪಿಟರ್ 125 ಮತ್ತು ಸುಜುಕಿ ಆಕ್ಸೆಸ್ 125ಗಳ ಬೆಲೆಯು ದೊಡ್ಡ ಮಟ್ಟದಲ್ಲಿ ಇಳಿಕೆಯಾಗಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಹೋಂಡಾ ಆಕ್ಟಿವಾ 125 (Honda Activa 125):

ಇದು ನಂ.1 ಸ್ಕೂಟರ್ ಎಂದೇ ಹೆಸರುವಾಸಿಯಾಗಿದೆ. ಜಿಎಸ್‌ಟಿ ಪರಿಷ್ಕರಣೆ ಬಳಿಕ, ಅತಿ ಕಡಿಮೆ ಬೆಲೆಯಲ್ಲಿ ಖರೀದಿದಾರರಿಗೆ ಲಭ್ಯವಿದೆ. ಡಿಎಲ್ಎಕ್ಸ್ (DLX) ರೂಪಾಂತರ ರೂ.88,339 ಹಾಗೂ ಹೆಚ್-ಸ್ಮಾರ್ಟ್ (H-SMART) ರೂಪಾಂತರ ರೂ.91,983 (ಎಕ್ಸ್-ಶೋರೂಂ) ದರವನ್ನು ಪಡೆದಿದೆ.

Honda Activa 125 TVS Jupiter 125 And Suzuki Access 125 Scooters New Price Details

ಈ ಸ್ಕೂಟರ್ ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಪರ್ಲ್ ಸೈರನ್ ಬ್ಲೂ ಮತ್ತು ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 1,850 ಎಂಎಂ ಉದ್ದ, 707 ಎಂಎಂ ಅಗಲ ಮತ್ತು 1,170 ಎಂಎಂ ಎತ್ತರವಿದೆ. 162 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1260 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ನೂತನ ಆಕ್ಟಿವಾ 123.92-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 47 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 5.3 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಪಡೆದಿದೆ. ಟಿಎಫ್‌ಟಿ ಕನ್ಸೋಲ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಹಾಗೂ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

Honda Activa 125 TVS Jupiter 125 And Suzuki Access 125 Scooters New Price Details

ಟಿವಿಎಸ್ ಜೂಪಿಟರ್ 125 (Tvs Jupiter 125):

ಇದೊಂದು ವಿಶ್ವಾಸಾರ್ಹ ಸ್ಕೂಟರ್ ಆಗಿದೆ. ಜಿಎಸ್‌ಟಿ ಪರಿಷ್ಕರಣೆ ನಂತರ, ತುಂಬಾ ಅಗ್ಗದ ದರದಲ್ಲಿ ಲಭ್ಯವಿದೆ. ಇದರ ಡ್ರಮ್ - ಅಲಾಯ್ (Drum - Alloy) ರೂಪಾಂತರ ರೂ.82 900, ಡಿಸ್ಕ್ (Disc) ರೂಪಾಂತರ ರೂ.87,400, ಡಿಟಿ ಎಸ್ಎಕ್ಸ್‌ಸಿ (DT SXC) ರೂಪಾಂತರ, ರೂ.89,600 ಮತ್ತು ಸ್ಮಾರ್ಟ್‌ಕನೆಕ್ಟ್ (SmartXonnect) ರೂಪಾಂತರ ರೂ.92,300 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ.

ಈ ಸ್ಕೂಟರ್ ಉತ್ತಮವಾದ ವಿನ್ಯಾಸವನ್ನು ಹೊಂದಿದೆ. ಪ್ರಿಸ್ಟಿನ್ ವೈಟ್, ಇಂಡಿಬ್ಲೂ, ಡಾನ್ ಆರೆಂಜ್ ಮತ್ತು ಟೈಟಾನಿಯಂ ಗ್ರೇ ಎಂಬ ಬಣ್ಣಗಳನ್ನು ಪಡೆದಿದೆ. 124.8-ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 57 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಹಾಗೂ ಯುಎಸ್‌‍ಬಿ ಚಾರ್ಜಿಂಗ್ ಸಾಕೆಟ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸವಾರರ ರಕ್ಷಣೆಗಾಗಿ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.

Honda Activa 125 TVS Jupiter 125 And Suzuki Access 125 Scooters New Price Details

ಸುಜುಕಿ ಆಕ್ಸೆಸ್ 125 (Suzuki Access 125):

ಇದು ದಿನಬಳಕೆಗೆ ಹೆಚ್ಚು ಸೂಕ್ತವಾಗಿದ್ದು, ಪ್ರಮುಖ ಸ್ಕೂಟರ್ ಆಗಿಯೂ ಹೊರಹೊಮ್ಮಿದೆ. ಜಿಎಸ್‌ಟಿ ಪರಿಷ್ಕರಣೆ ಬಳಿಕ, ಸ್ಟ್ಯಾಂಡರ್ಡ್ ಎಡಿಷನ್ ಡ್ರಮ್ ಬ್ರೇಕ್ (Standard Edition Drum Brake) ರೂಪಾಂತರ ರೂ.80,572, ಸ್ಪೆಷನ್ ಎಡಿಷನ್ ಡಿಸ್ಕ್ ಬ್ರೇಕ್ (Special Edition Disc Brake) ರೂಪಾಂತರ ರೂ.86,715, ರೈಡ್ ಕನೆಕ್ಟ್ ಎಡಿಷನ್ ಡಿಸ್ಕ್ ಬ್ರೇಕ್ (Ride Connect Edition Disc Brake) ರೂಪಾಂತರ, ರೂ.91,117 ಹಾಗೂ ರೈಡ್ ಕನೆಕ್ಟ್ ಟಿಎಫ್‌ಟಿ ಎಡಿಷನ್ (Ride Connect TFT Edition) ರೂಪಾಂತರ ರೂ.97,166 (ಎಕ್ಸ್-ಶೋರೂಂ) ದರವನ್ನು ಪಡೆದಿದೆ.

ಈ ಸ್ಕೂಟರ್ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. 124-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 47 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. ಟಿಎಫ್‌ಟಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಮತ್ತು ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

Article Published On: Tuesday, September 23, 2025, 15:42 [IST]
English summary
Honda activa 125 tvs jupiter 125 and suzuki access 125 scooters new price details
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+