Honda Activa 125 vs Suzuki Access 125: ಎರಡು ಜನಮೆಚ್ಚಿದ ಸ್ಕೂಟರ್‌ಗಳೇ.. ಯಾವುದು ಬೆಸ್ಟ್, ನೀವೇ ಹೇಳಿ!
ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಹೋಂಡಾ ಆಕ್ಟಿವಾ 125 (Honda Activa 125) ಹಾಗೂ ಸುಜುಕಿ ಆಕ್ಸೆಸ್ 125 (Suzuki Access 125) ಜನಪ್ರಿಯ ಸ್ಕೂಟರ್‌ಗಳಾಗಿ ಹೊರಹೊಮ್ಮಿವೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದಿದ್ದು, ಬಜೆಟ್ ಬೆಲೆಯಲ್ಲಿಯೂ ಸಿಗುತ್ತವೆ. ನೀವು ದಿನನಿತ್ಯದ ಬಳಕೆಗಾಗಿ ಈ ಸ್ಕೂಟರ್‌ಗಳಲ್ಲಿ ಒಂದನ್ನು ತೆಗೆದುಕೊಳ್ಳಲು ಆಲೋಚಿಸಿದ್ದೀರಾ.. ನಾವಿಲ್ಲಿ ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.
ಬೆಲೆ (Price): ಹೋಂಡಾ ಆಕ್ಟಿವಾ 125 ಸ್ಕೂಟರ್ ರೂ.94,442 ರಿಂದ ರೂ.97,146 ಬೆಲೆಯನ್ನು ಹೊಂದಿದೆ. ಅದೇ ರೀತಿಯಲ್ಲಿ ಸುಜುಕಿ ಆಕ್ಸೆಸ್ 125 ಸ್ಕೂಟರ್ ರೂ.85,283 ರಿಂದ ರೂ.96,881 (ಎಕ್ಸ್ ಶೋರೂಂ) ದರವನ್ನು ಪಡೆದಿದೆ. ಇವೆರೆಡು ಸ್ಕೂಟರ್‌ಗಳಲ್ಲಿ ಸುಜುಕಿ ಆಕ್ಸೆಸ್ ಅತ್ಯಂತ ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರಿಗೆ ದೊರೆಯುತ್ತದೆ ಎಂದು ಹೇಳಬಹುದು.

ವಿನ್ಯಾಸ & ಬಣ್ಣಗಳು (Design & Colors): ಎರಡು ಸ್ಕೂಟರ್‌ಗಳು ಅತ್ಯುತ್ತಮವಾದ ವಿನ್ಯಾಸವನ್ನೇ ಹೊಂದಿವೆ. ಹೋಂಡಾ ಆಕ್ಟಿವಾ ಸ್ಕೂಟರ್ ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಪರ್ಲ್ ಸೈರನ್ ಬ್ಲೂ & ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಸೇರಿದಂತೆ 6 ಆಕರ್ಷಕ ಬಣ್ಣಗಳೊಂದಿಗೆ ದೊರೆಯುತ್ತದೆ. ಸುಜುಕಿ ಆಕ್ಸೆಸ್ ಸ್ಕೂಟರ್ ಮೆಟಾಲಿಕ್ ಮ್ಯಾಟ್ ಸ್ಟೆಲ್ಲರ್ ಬ್ಲೂ, ಪರ್ಲ್ ಗ್ರೇಸ್ ವೈಟ್ & ಮೆಟಾಲಿಕ್ ಮ್ಯಾಟ್ ಬ್ಲ್ಯಾಕ್ ಒಳಗೊಂಡಂತೆ 4 ಬಣ್ಣಗಳೊಂದಿಗೆ ಲಭ್ಯವಿದೆ.
ಕಾರ್ಯಕ್ಷಮತೆ (Performance): ಹೋಂಡಾ ಆಕ್ಟಿವಾ 125 ಮತ್ತು ಸುಜುಕಿ ಆಕ್ಸೆಸ್ 125 ಸ್ಕೂಟರ್‌ಗಳೆರಡು ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿವೆ. ಆಕ್ಟಿವಾ ಸ್ಕೂಟರ್ 123.92 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 8.4 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 10.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 47 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಸುಜುಕಿ ಆಕ್ಸೆಸ್ 125 ಸ್ಕೂಟರ್ 125 ಸಿಸಿ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 8.3 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 10.2 ಎನ್ಎಂ (ನ್ಯೂಟನ್ ಮೀಟರ್) ಉತ್ಪಾದಿಸುತ್ತದೆ. 45 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಬಹುತೇಕ ಇವೆರೆಡು ಸ್ಕೂಟರ್‌ಗಳ ಮೈಲೇಜ್ ಒಂದೇ ರೀತಿಯಲ್ಲಿದ್ದು, ಸವಾರರು ಸುಲಭವಾಗಿ ದೂರದ ಊರುಗಳಿಗೆ ಸಂಚರಿಸಲು ಸಾಧ್ಯವಾಗಲಿದೆ.
ವೈಶಿಷ್ಟ್ಯಗಳು (Features): ಹೋಂಡಾ ಆಕ್ಟಿವಾ 125 ಹಾಗೂ ಸುಜುಕಿ ಆಕ್ಸೆಸ್ 125 ಸ್ಕೂಟರ್‌ಗಳು ಹೆಚ್ಚು ಆಕರ್ಷಕವಾದ ವೈಶಿಷ್ಟ್ಯಗಳನ್ನು ಪಡೆದುಕೊಂಡಿವೆ. ಆಕ್ಟಿವಾ 125 ಸ್ಕೂಟರ್ ಟಿಎಫ್‌ಟಿ ಕನ್ಸೋಲ್, ಟರ್ನ್-ಬೈ-ಟರ್ನ್ ನ್ಯಾವಿಗೇಶನ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಹಾಗೂ ಐಡಲ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.
ಸುಜುಕಿ ಆಕ್ಸೆಸ್ 125 ಸ್ಕೂಟರ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಕಾಲ್/ಎಸ್ಎಂಎಸ್ ಅಲರ್ಟ್ ಮತ್ತು ರೈನ್ ಅಲರ್ಟ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಡಿಸ್ಕ್ ಮತ್ತು ಹಿಂಭಾಗ (ರೇರ್) ಡ್ರಮ್ ಬ್ರೇಕ್ ಆಯ್ಕೆಯನ್ನು ಪಡೆದಿದೆ. ವಿಶೇಷವೆಂಬಂತೆ ಎರಡು ಸ್ಕೂಟರ್‌ಗಳ ವೈಶಿಷ್ಟ್ಯಗಳು ಒಂದಕ್ಕೊಂದು ಒಂದು ಸವಾಲೆಸೆಯುವ ರೀತಿಯಲ್ಲಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications