ಅಗ್ಗದ ಬೆಲೆ.. ದಿನನಿತ್ಯದ ಬಳಕೆಗೆ ಹೋಂಡಾ ಆಕ್ಟಿವಾ ಬೆಸ್ಟ್ ಚಾಯ್ಸ್: ಪೆಟ್ರೋಲ್‌ಗೂ ಸೈ.. ಎಲೆಕ್ಟ್ರಿಕ್‌ಗೂ ಜೈ!

ದಿನನಿತ್ಯದ ಬಳಕೆಗೆ ದ್ವಿಚಕ್ರ ವಾಹನಗಳು ತೀರಾ ಅನಿವಾರ್ಯವಾಗಿವೆ. ಅದರಲ್ಲೂ ಸ್ಕೂಟರ್‌ಗಳು ಮಹಿಳೆಯರು ಹಾಗೂ ಪುರುಷರಿಬ್ಬಗೂ ಹೆಚ್ಚು ಸೂಕ್ತವಾಗಲಿವೆ. ದೇಶೀಯ ಮಾರುಕಟ್ಟೆಯಲ್ಲಿ ಹೋಂಡಾ ಆಕ್ಟಿವಾ (Honda activa) ಅತಿಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುವ ಸ್ಕೂಟರ್ ಆಗಿ ಹೊರಹೊಮ್ಮಿದೆ. ಇದು ಹಲವು ವಿಧದಲ್ಲೂ ಖರೀದಿಗೆ ದೊರೆಯಲಿದ್ದು, ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿದೆ. ಜೊತೆಗೆ ಕೈಗೆಟುಕುವ ಬೆಲೆಯಲ್ಲಿ ಕೂಡ ಗ್ರಾಹಕರಿಗೆ ಸಿಗುತ್ತದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಹೋಂಡಾ ಆಕ್ಟಿವಾ 110 (Honda Activa 110): ಈ ಎಲೆಕ್ಟ್ರಿಕ್ ಸ್ಕೂಟರ್ ರೂ.80,950 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಇದು 109.51 ಸಿಸಿ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 7.9 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 9.05 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 45 ರಿಂದ 50 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ.

Honda Activa Best Scooter For Daily Use It Will Available 3 Types Details

ಈ ಆಕ್ಟಿವಾ 110 ಸ್ಕೂಟರ್, ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕನ್ಸೋಲ್‌ (4.2 - ಇಂಚು), ಸ್ಮಾರ್ಟ್‌ಫೋನ್‌ ಕನೆಕ್ಟಿವಿಟಿ, ರೋಡ್‌ಸಿಂಕ್ ಫೋನ್ ಅಪ್ಲಿಕೇಶನ್, ಟರ್ನ್-ಬೈ-ಟರ್ನ್ ನ್ಯಾವಿಗೇಷನ್ & ಕಾಲ್/ ಎಸ್ಎಂಎಸ್ ಅಲರ್ಟ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) ಹಾಗೂ ಹಿಂಭಾಗ (ರೇರ್) ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಹೋಂಡಾ ಆಕ್ಟಿವಾ 125 (Honda Activa 125): ಇದು ಶಕ್ತಿಯುತವಾದ ಸ್ಕೂಟರ್ ಎಂದೇ ಹೆಸರುವಾಗಿದ್ದು, ರೂ.94,442 ರಿಂದ ರೂ.97,146 (ಎಕ್ಸ್-ಶೋರೂಂ) ಬೆಲೆಯಲ್ಲಿ ದೇಶೀಯ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಈ ಸ್ಕೂಟರ್, 123.92 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್‌ನ್ನು ಹೊಂದಿದ್ದು, 47 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ.

Honda Activa Best Scooter For Daily Use It Will Available 3 Types Details

ಈ ಆಕ್ಟಿವಾ 125 ಸ್ಕೂಟರ್ ಟಿಎಫ್‌ಟಿ ಕನ್ಸೋಲ್, ಟರ್ನ್-ಬೈ-ಟರ್ನ್ ನ್ಯಾವಿಗೇಶನ್‌, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಮುಂಭಾಗ (ಫ್ರಂಟ್) ಡಿಸ್ಕ್ ಮತ್ತು ಹಿಂಭಾಗ (ರೇರ್) ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ. ಸರಿ ಸುಮಾರು 5.3 ಲೀಟರ್ ಸಾಮರ್ಥ್ಯವುಳ್ಳ ಫ್ಯುಯೆಲ್ ಟ್ಯಾಂಕ್‌ನ್ನು ತನ್ನದಾಗಿಸಿಕೊಂಡಿದೆ.

ಹೋಂಡಾ ಆಕ್ಟಿವಾ ಇ (Honda Activa e): ಇದೊಂದು ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ. ರೂ.1.17 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 1.5 ಕೆಡಬ್ಲ್ಯೂಹೆಚ್‌ನ 2 ಬ್ಯಾಟರಿ ಪ್ಯಾಕ್‌ ಆಯ್ಕೆಯನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 102 ಕಿ.ಮೀ ವರೆಗೂ ರೇಂಜ್ (ಮೈಲೇಜ್) ನೀಡುತ್ತದೆ.

Honda Activa Best Scooter For Daily Use It Will Available 3 Types Details

ಈ ಎಲೆಕ್ಟ್ರಿಕ್ ಸ್ಕೂಟರ್, 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಪರ್ಲ್ ಸೆರಿನಿಟಿ ಬ್ಲೂ, ಪರ್ಲ್ ಮಿಸ್ಟಿ ವೈಟ್ & ಮ್ಯಾಟ್ ಫಾಗಿ ಸಿಲ್ವರ್ ಮೆಟಾಲಿಕ್ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳೊಂದಿಗೂ ಲಭ್ಯವಿದೆ. ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್ ಮತ್ತು ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, February 11, 2025, 16:21 [IST]
English summary
Honda activa best scooter for daily use it will available 3 types details
Read more on honda motorcycle india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+