ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್, ಕ್ಯೂಸಿ1 ಸ್ಕೂಟರ್‌ಗಳಿಗಾಗಿ ಬುಕ್ಕಿಂಗ್ ಪ್ರಾರಂಭ: ಬೆಲೆ ಇಷ್ಟೇನಾ?

ಹೋಂಡಾ ಸ್ಕೂಟರ್ & ಮೋಟಾರ್‌ಸೈಕಲ್ ಇಂಡಿಯಾ (Honda Motorcycle & Scooter India) ಪ್ರಖ್ಯಾತ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿದ್ದು, ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ನವೆಂಬರ್‌ನಲ್ಲಿ ಆಕ್ಟಿವಾ ಇ ಹಾಗೂ ಕ್ಯೂಸಿ1 ಎಂಬ ಎರಡು ಹೊಸ ಇ-ಸ್ಕೂಟರ್‌ಗಳನ್ನು ಅನಾವರಣಗೊಳಿಸಿತ್ತು. ಆದರೆ, ಬೆಲೆಯನ್ನು ಘೋಷಣೆ ಮಾಡಿರಲಿಲ್ಲ. ಇದೀಗ ಈ ಎರಡೂ ಎಲೆಕ್ಟ್ರಿಕ್ ಸ್ಕೂಟರ್ ಗಳ ಖರೀದಿಗಾಗಿ ಬುಕ್ಕಿಂಗ್ ಸ್ವೀಕರಿಸಲು ಪ್ರಾರಂಭವಾಗಿದೆ ಎಂದು ವರದಿಯಾಗಿದೆ. ಫೆಬ್ರುವರಿ ತಿಂಗಳಿನಲ್ಲಿ ಈ ಎಲೆಕ್ಟ್ರಿಕ್ ಸ್ಕೂಟರ್‌ಗಳ ವಿತರಣೆ ಪ್ರಾರಂಭವಾಗಲಿದೆ.

ಹೊಚ್ಚ ಹೊಸ ಹೋಂಡಾ ಆಕ್ಟಿವಾ ಇ (Honda Activa e) ಎಲೆಕ್ಟ್ರಿಕ್ ಸ್ಕೂಟರ್ ರೂ.1.30 ಲಕ್ಷ ಮತ್ತು ಕ್ಯೂಸಿ1 (QC1) ಎಲೆಕ್ಟ್ರಿಕ್ ಸ್ಕೂಟರ್ ರೂ.1 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಮಾರಾಟಕ್ಕೆ ಬರುವ ಸಾಧ್ಯತೆಯಿದೆ. ಮೊದಲ ಹಂತದಲ್ಲಿ ಹೋಂಡಾ ಕಂಪನಿಯು ಬೆಂಗಳೂರು, ದೆಹಲಿ ಮತ್ತು ಮುಂಬೈನಲ್ಲಿ ಈ ಎಲೆಕ್ಟ್ರಿಕ್ ಸ್ಕೂಟರ್ ಗಾಗಿ ಬುಕ್ಕಿಂಗ್ ಅನ್ನು ಪ್ರಾರಂಭಸಲಾಗಿದೆ.

Honda Activa e and QC1 Electric Scooters

ಎರಡೂ ಎಲೆಕ್ಟ್ರಿಕ್ ಸ್ಕೂಟರ್ ಗಳಲ್ಲಿ ಮೊದಲಿಗೆ ಹೋಂಡಾ ಆಕ್ಟಿವಾ ಇ (Honda ACTIVA e) ಸ್ಕೂಟರ್ ವಿಶೇಷತೆ ಬಗ್ಗೆ ಹೇಳುವುದಾದರೆ, ಈ ಎಲೆಕ್ಟಿಕ್ ಸ್ಕೂಟರ್ 1.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ 2 ಬದಲಾಯಿಸಬಹುದಾದ ಆಯ್ಕೆಯನ್ನು ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಪೂರ್ತಿ ಚಾರ್ಜ್‌ನಲ್ಲಿ 102 ಕಿಲೋಮೀಟರ್ ಓಡುತ್ತದೆ. ಇಕಾನ್, ಸ್ಟ್ಯಾಂಡರ್ಡ್ ಹಾಗೂ ಸ್ಪೋರ್ಟ್ ಎಂಬ 3 ವಿಧದ ರೈಡಿಂಗ್ ಮೋಡ್‌ಗಳನ್ನು ಹೊಂದಿದೆ.

ಈ ಹೋಂಡಾ ಆಕ್ಟಿವಾ ಇ ಎಲೆಕ್ಟ್ರಿಕ್ ಸ್ಕೂಟರ್ 7.0-ಇಂಚಿನ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಹೆಚ್-ಸ್ಮಾರ್ಟ್ ಕೀ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಡುಯಲ್ ಸ್ಪ್ರಿಂಗ್‌ ಸಸ್ಪೆನ್ಷನ್ ಸೆಟಪ್ ಕೂಡ ಹೊಂದಿದ್ದು, ಸವಾರರ ರಕ್ಷಣೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ನ್ನು ಪಡೆದಿದೆ. 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದ್ದು, ಕೇವಲ 7.3 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

Honda Activa e and QC1 Electric Scooters

ಇನ್ನು ಹೋಂಡಾ ಕ್ಯೂಸಿ1 (Honda QC1) ಸ್ಕೂಟರ್ ವಿಶೇಷತೆ ಬಗ್ಗೆ ಹೇಳುವುದಾದರೆ, ಈ ಎಲೆಕ್ಟ್ರಿಕ್ ಸ್ಕೂಟರ್ 1.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ ಆಯ್ಕೆಯನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 80 ಕಿಲೋಮೀಟರ್ ಕ್ರಮಿಸುತ್ತದೆ. 50 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದ್ದು, ಸ್ಟ್ಯಾಂಡರ್ಡ್ & ಇಕಾನ್ ಎಂಬ ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿದೆ.

ನೂತನ ಕ್ಯೂಸಿ1 ಇ-ಸ್ಕೂಟರ್ ಬ್ಲ್ಯೂ, ಪರ್ಲ್ ಮಿಸ್ಟಿ ವೈಟ್, ಮ್ಯಾಟ್ ಫಾಗ್ಗಿ ಸಿಲ್ವರ್ ಮೆಟಾಲಿಕ್, ಪರ್ಲ್ ಇಗ್ನಿಯಸ್ ಬ್ಲ್ಯಾಕ್ & ಪರ್ಲ್ ಶಾಲೋ ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಈ ಎಲೆಕ್ಟ್ರಿಕ್ ಸ್ಕೂಟರ್ 5.0-ಇಂಚಿನ ಎಲ್‌ಸಿಡಿ ಡಿಸ್‌ಪ್ಲೇ, ಯುಎಸ್‌‍ಬಿ ಟೈಪ್-ಸಿ ಚಾರ್ಜಿಂಗ್ ಸಾಕೆಟ್, 26-ಲೀಟರ್ ಸಾಮರ್ಥ್ಯದ ಅಂಡರ್-ಸೀಟ್ ಸ್ಟೋರೇಜ್ ಅನ್ನು ಹೊಂದಿದೆ.

ಹೋಂಡಾ ಸ್ಕೂಟರ್ & ಮೋಟಾರ್‌ಸೈಕಲ್ ಇಂಡಿಯಾ ಕಂಪನಿ ನಮ್ಮ ಕರ್ನಾಟಕದ ಕೋಲಾರ ಜಿಲ್ಲೆಯ ನರಸಾಪುರದಲ್ಲಿರುವ ತಯಾರಿಕಾ ಘಟಕದಲ್ಲಿ ನೂತನ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ತಯಾರಿಸಲು ಉದ್ದೇಶಿಸಿದೆ. ಇವೆರೆಡು ಮಾಡೆಲ್‌ಗ‌ಳು ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದಿರುವುದರಿಂದ ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗಬಹುದು ಎಂದು ಅಂದಾಜಿಸಲಾಗಿದೆ. ಈ ಎಲೆಕ್ಟ್ರಿಕ್ ಸ್ಕೂಟರ್‌ಗಳ ವಿತರಣೆ ಶುರುವಾದ ಮೇಲೆ ದೇಶೀಯ ಗ್ರಾಹಕರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, January 1, 2025, 13:59 [IST]
English summary
Honda activa e and qc1 electric scooters bookings open details
Read more on honda motorcycle india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+