Honda: ಹೊಸ ಹೋಂಡಾ ಆಕ್ಟಿವಾ ಇ & ಕ್ಯೂಸಿ1 ಇ-ಸ್ಕೂಟರ್‌ಗಳ ಬಿಡುಗಡೆಗೆ ಡೇಟ್ ಫಿಕ್ಸ್.. ಅತಿ ಕಡಿಮೆ ಬೆಲೆ?

ಹೋಂಡಾ ಸ್ಕೂಟರ್ & ಮೋಟಾರ್‌ಸೈಕಲ್ ಇಂಡಿಯಾ (Honda Scooter & Motorcycle India), ನಂಬರ್ 1 ಸ್ಕೂಟರ್ ತಯಾರಕ ಕಂಪನಿಯಾಗಿದೆ. 2024ರ ನವೆಂಬರ್‌ನಲ್ಲಿ ಹೊಚ್ಚ ಹೊಸ ಆಕ್ಟಿವಾ ಇ (Activa e) ಮತ್ತು ಕ್ಯೂಸಿ1 (QC1) ಹೆಸರಿನ ಎರಡು ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಅನಾವರಣಗೊಳಿಸಿತ್ತು. ಜನವರಿ 1ರಿಂದ ಬುಕ್ಕಿಂಗ್ ಕೂಡ ಶುರು ಮಾಡಲಾಗಿದ್ದು, ಆಸಕ್ತ ಗ್ರಾಹಕರು ರೂ.1,000 ಮುಂಗಡ ಮೊತ್ತವನ್ನು ಪಾವತಿಸುವ ಮೂಲಕ ಈ ಸ್ಕೂಟರ್‌ಗಳನ್ನು ಬುಕ್ಕಿಂಗ್ ಮಾಡಬಹುದು.

ಸದ್ಯ, ನೂತನ ಹೋಂಡಾ ಆಕ್ಟಿವಾ ಇ ಹಾಗೂ ಕ್ಯೂಸಿ1 ಇ-ಸ್ಕೂಟರ್‌ಗಳ ಬಿಡುಗಡೆಗೆ ದಿನಾಂಕವನ್ನು ನಿಗದಿಪಡಿಸಲಾಗಿದೆ ಎಂದು ತಿಳಿದುಬಂದಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ನವದೆಹಲಿಯಲ್ಲಿ ಇದೇ 17 ರಿಂದ 22 ರವರೆಗೆ ಅದ್ದೂರಿಯಾಗಿ ನಡೆಯಲಿರುವ 'ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ-2025'ದಲ್ಲಿ ಈ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟಕ್ಕೆ ತರಲಾಗುತ್ತದೆ. ಆ ಬಳಿಕ ಫೆಬ್ರವರಿಯಲ್ಲಿ ವಿತರಣೆಗಳು ಸಹ ಪ್ರಾರಂಭವಾಗುವ ಸಾಧ್ಯತೆಯಿದೆ.

Honda Activa E And Qc1 Electric Scooters May Be Launch On Auto Expo 2025 Expected Very Low Price

ಹೋಂಡಾ ಆಕ್ಟಿವಾ ಇ (Honda Activa e) ವಿಶೇಷತೆಗಳು: ಈ ಎಲೆಕ್ಟ್ರಿಕ್ ಸ್ಕೂಟರ್ ಅತಿ ಕಡಿಮೆ ಬೆಲೆಗೆ ಮಾರಾಟಕ್ಕೆ ಬರುವ ನೀರಿಕ್ಷೆಯಿದ್ದು, ರೂ.1.20 ಲಕ್ಷದಿಂದ ರೂ.1.30 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದುಕೊಂಡಿರಬಹುದು ಎಂದು ಹೇಳಲಾಗಿದೆ. ನೂತನ 'ಆಕ್ಟಿವಾ ಇ' ಬದಲಾಯಿಸಬಹುದಾದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದ್ದು, ಪ್ರಮುಖ ನಗರಗಳಾದ ಬೆಂಗಳೂರು, ನವದೆಹಲಿ ಮತ್ತು ಮುಂಬೈನ ಖರೀದಿದಾರರಿಗೆ ಮಾತ್ರ ಸಿಗುತ್ತದೆ.

ಹೊಸ ಹೋಂಡಾ ಆಕ್ಟಿವಾ ಇ ಎಲೆಕ್ಟ್ರಿಕ್ ಸ್ಕೂಟರ್, 1.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ 2 ಬ್ಯಾಟರಿ ಪ್ಯಾಕ್‌ಗಳನ್ನು ಒಳಗೊಂಡಿದೆ. ಸಿಂಗಲ್ ಚಾರ್ಜ್‌ನಲ್ಲಿ 102 ಕಿಲೋಮೀಟರ್ ಕ್ರಮಿಸುತ್ತದೆ. ಹೊರಭಾಗದಲ್ಲಿಯೂ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ನವೀನ-ಶೈಲಿಯ ಎಲ್ಇಡಿ ಹೆಡ್‌ಲೈಟ್, ಡಿಆರ್‌ಎಲ್‌ಗಳನ್ನು ಪಡೆದಿದೆ.

Honda Activa E And Qc1 Electric Scooters May Be Launch On Auto Expo 2025 Expected Very Low Price

ಈ 'ಆಕ್ಟಿವಾ ಇ' ಸ್ಕೂಟರ್ ಪರ್ಲ್ ಶಾಲೋ ಬ್ಲೂ, ಪರ್ಲ್ ಮಿಸ್ಟಿ ವೈಟ್ ಮತ್ತು ಪರ್ಲ್ ಸೆರಿನಿಟಿ ಬ್ಲೂ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಇದು ಇಕಾನ್, ಸ್ಟ್ಯಾಂಡರ್ಡ್ & ಹಾಗೂ ಸ್ಪೋರ್ಟ್ ಎಂಬ ಮೂರು ರೈಡಿಂಗ್ ಮೋಡ್‌ಗಳನ್ನು ಪಡೆದಿದೆ. 7.0-ಇಂಚಿನ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಮತ್ತು ಹೆಚ್ ಸ್ಮಾರ್ಟ್ ಕೀ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

ಹೋಂಡಾ ಕ್ಯೂಸಿ1 (Honda QC1) ವಿಶೇಷತೆಗಳು: ಈ ಎಲೆಕ್ಟ್ರಿಕ್ ಸ್ಕೂಟರ್ ಸಹ ಬಜೆಟ್ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಾಗುವ ನೀರಿಕ್ಷೆಯಿದೆ. ಇದು ರೂ.1 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿರಬಹುದು ಎಂದು ಹೇಳಲಾಗಿದೆ. ನೂತನ ಕ್ಯೂಸಿ1 ಇ-ಸ್ಕೂಟರ್ 1.5 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ ಆಯ್ಕೆಯನ್ನು ಒಳಗೊಂಡಿದೆ. ಸಿಂಗಲ್ ಚಾರ್ಜ್‌ನಲ್ಲಿ 80 ಕಿಲೋಮೀಟರ್ ಓಡುತ್ತದೆ.

ನೂತನ ಹೋಂಡಾ ಕ್ಯೂಸಿ1 ಇ-ಸ್ಕೂಟರ್‌ನಲ್ಲಿ ಉಪಯೋಗಿಸಲಾಗಿರುವ ಎಲೆಕ್ಟ್ರಿಕ್ ಮೋಟಾರ್ 1.8 ಕೆಡಬ್ಲ್ಯೂ ಪೀಕ್ ಪವರ್ & 77 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಎಲ್‌ಸಿಡಿ ಡಿಸ್‌ಪ್ಲೇ, ಯುಎಸ್‌‍ಬಿ ಟೈಪ್-ಸಿ ಚಾರ್ಜಿಂಗ್ ಸಾಕೆಟ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇದರ ಬ್ಯಾಟರಿ ಪ್ಯಾಕ್ ಮನೆಗೆ ವಿದ್ಯುತ್ ಬಳಕೆಯಲ್ಲಿ ಕೊಂಚ ಬೇಗನೆ ಚಾರ್ಜ್ ಆಗಲಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Wednesday, January 8, 2025, 10:46 [IST]
English summary
Honda activa e and qc1 electric scooters may be launch on auto expo 2025 expected very low price
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+