Honda Activa e & QC1: 102 ಕಿ.ಮೀ ರೇಂಜ್.. ಖರ್ಚಿಲ್ಲದೇ ಆಫೀಸ್‌ಗೆ ಹೋಗಲು ಬೆಸ್ಟ್ ಚಾಯ್ಸ್, ಕಡಿಮೆ ದುಡ್ಡಲ್ಲಿ ಮನೆಗೆ ತನ್ನಿ!
ಹೋಂಡಾ (Honda) ನಂಬಿಕಾರ್ಹ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿದೆ. ದೇಶೀಯವಾಗಿ ಆಕ್ಟಿವಾ ಇ (Activa e) ಹಾಗೂ ಕ್ಯೂಸಿ1 (QC1) ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟಗೊಳಿಸುತ್ತಿದೆ. ಇವು ದಿನಬಳಕೆಗೆ ಹೆಚ್ಚು ಸೂಕ್ತವಾಗಿದ್ದು, ಬೆಂಗಳೂರಿನಂತಹ ಮಹಾನಗರಗಳಲ್ಲಿ ಕಚೇರಿಗೆ ಹೋಗುವವರು ಸುಲಭವಾಗಿ ಬಳಕೆ ಮಾಡಬಹುದು. ನಾವಿಲ್ಲಿ ಈ ಸ್ಕೂಟರ್‌ಗಳ ಬೆಲೆ, ವಿನ್ಯಾಸ, ರೇಂಜ್ (ಮೈಲೇಜ್) ಮತ್ತು ವೈಶಿಷ್ಟ್ಯಗಳ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಸಿಕೊಂಡುವ ಪ್ರಯತ್ನ ಮಾಡಿದ್ದೇವೆ.
ಬೆಲೆ (Price):
ಇವೆರೆಡು ಸ್ಕೂಟರ್‌ಗಳು ಅಗ್ಗದ ದರದಲ್ಲೂ ಲಭ್ಯವಿದ್ದು, ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟರ್‌ನ ಸ್ಟ್ಯಾಂಡರ್ಡ್ ರೂಪಾಂತರ (ವೇರಿಯೆಂಟ್), ರೂ.1.17 ಲಕ್ಷ ಮತ್ತು ರೋಡ್‌ಸಿಂಕ್ ರೂಪಾಂತರ, ರೂ.1.52 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅದೇ ರೀತಿಯಲ್ಲಿ ಕ್ಯೂಸಿ1 ಇ-ಸ್ಕೂಟರ್ ರೂ.90,000 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ.

ವಿನ್ಯಾಸ & ಬಣ್ಣಗಳು (Design & Colors):
ನೂತನ ಹೋಂಡಾ ಆಕ್ಟಿವಾ ಇ ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಎಲ್‌ಇಡಿ ಹೆಡ್‌ಲೈಟ್, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು, ಸಿಂಗಲ್ ಪೀಸ್ ಸೀಟ್, ಬಾಡಿ-ಕಲರ್ ಫ್ರಂಟ್ ಫೆಂಡರ್ ಹಾಗೂ 12-ಇಂಚಿರುವ ಡೈಮಂಡ್ ಕಟ್ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಪರ್ಲ್ ಶಾಲೋ ಬ್ಲೂ, ಪರ್ಲ್ ಮಿಸ್ಟಿ ವೈಟ್ ಹಾಗೂ ಪರ್ಲ್ ಸೆರಿನಿಟಿ ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಹೋಂಡಾ ಕ್ಯೂಸಿ1 ಎಲೆಕ್ಟ್ರಿಕ್ ಸ್ಕೂಟರ್ ಅತುತ್ತಮವಾದ ವಿನ್ಯಾಸವನ್ನು ಪಡೆದಿದೆ. ನೋಡಲು 'ಆಕ್ಟಿವಾ ಇ'ಯಂತೆ ಇದೆ. ಎಲ್‌ಇಡಿ ಹೆಡ್‌ಲೈಟ್, ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ ಲಗೇಜ್ ಹುಕ್ ಒಳಗೊಂಡಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಪರ್ಲ್ ಮಿಸ್ಟಿ ವೈಟ್, ಮ್ಯಾಟ್ ಫಾಗ್ಗಿ ಸಿಲ್ವರ್ ಮೆಟಾಲಿಕ್, ಪರ್ಲ್ ಶಾಲೋ ಬ್ಲೂ ಮತ್ತು ಪರ್ಲ್ ಸೆರಿನಿಟಿ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಕಾರ್ಯಕ್ಷಮತೆ (Performance):
ಹೋಂಡಾ ಆಕ್ಟಿವಾ ಇ 1.5 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ 2 ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 102 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ. 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 7.3 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಇದರಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್ 22 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.
ಅದೇ ರೀತಿಯಲ್ಲಿ ಹೋಂಡಾ ಕ್ಯೂಸಿ1 ಎಲೆಕ್ಟ್ರಿಕ್ ಸ್ಕೂಟರ್ 1.5 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಪ್ಯಾಕ್‌ನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 80 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ. ಈ ಸ್ಕೂಟರ್‌ನ ಎಲೆಕ್ಟ್ರಿಕ್ ಮೋಟಾರ್ 2.4 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) & 77 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ತನ್ನದಾಗಿಸಿಕೊಂಡಿದೆ. 50 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. 9.7 ಸೆಕೆಂಡುಗಳಲ್ಲಿ 0 ರಿಂದ 40 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ವೈಶಿಷ್ಟ್ಯಗಳು (Features):
ಹೊಸ ಹೋಂಡಾ ಆಕ್ಟಿವಾ ಇ 7.0-ಇಂಚಿರುವ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಕೀಲೆಸ್ ಇಗ್ನಿಷಿಯನ್ ಹಾಗೂ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗ (ರೇರ್) ಡುಯಲ್ ಸ್ಪ್ರಿಂಗ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.
ಹೋಂಡಾ ಕ್ಯೂಸಿ1 ಎಲೆಕ್ಟ್ರಿಕ್ ಸ್ಕೂಟರ್ ಎಲ್‌ಸಿಡಿ ಡಿಸ್‌ಪ್ಲೇ, ಅನಲಾಗ್ ಕೀ, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಹಾಗೂ ಪುಶ್-ಬಟನ್ ಸ್ಟಾರ್ಟ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. 89.5 ಕೆಜಿ ತೂಕವು ಇದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.


Click it and Unblock the Notifications