Honda Activa e: ಹೊಸ ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಬೇಕೇ.. ಇಲ್ಲಿದೆ ಸಿಹಿಸುದ್ದಿ!

ಹೋಂಡಾ ಆಕ್ಟಿವಾ ಇ (Honda Activa e) ಪ್ರಮುಖ ಎಲೆಕ್ಟ್ರಿಕ್ ಸ್ಕೂಟರ್ ಆಗಿ ಹೊರಹೊಮ್ಮಿದೆ. ಇದು ಹೆಚ್ಚು ಅತ್ಯಾಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಜೊತೆಗೆ ಬದಲಾಯಿಸಬಹುದಾದ ಬ್ಯಾಟರಿ ಪ್ಯಾಕ್ (Swappable Battery Pack) ಆಯ್ಕೆಯನ್ನು ಹೊಂದಿದೆ. ಹೀಗಾಗಿ, ಬೆಂಗಳೂರು, ದೆಹಲಿ ಹಾಗೂ ಮುಂಬೈ ಮಹಾನಗರಗಳಲ್ಲಿ ಮಾತ್ರ ಮಾರಾಟಗೊಳಿಸಲಾಗುತ್ತದೆ. ಇದೀಗ, ನೂತನ ಆಕ್ಟಿವಾ ಇ ಸ್ಕೂಟರ್‌ನ್ನು ಖರೀದಿ ಮಾಡಬಯಸುವ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿಯೊಂದು ಲಭ್ಯವಾಗಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಹೊಚ್ಚ ಹೊಸ ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟರ್‌ ಬ್ಯಾಟರಿ-ಆಸ್-ಎ-ಸರ್ವಿಸ್ (BaaS) ಯೋಜನೆಯಡಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಅಂದರೆ ಆಕ್ಟಿವಾ ಇ-ಸ್ಕೂಟರ್ ಸವಾರರು, ಖಾಲಿಯಾಗಿರುವ ಬ್ಯಾಟರಿ ಪ್ಯಾಕ್‌ನ್ನು ಇ:ಸ್ವಾಪ್ ಚಾರ್ಜಿಂಗ್ ಸ್ಟೇಷನ್‌ನಲ್ಲಿ ನಿಗದಿಪಡಿಸುವ ಜಾಗದಲ್ಲಿ ಇಡಬೇಕು. ಆ ನಂತರ ಮೊದಲೇ ಭರ್ತಿಯಾದ ಬ್ಯಾಟರಿ ಪ್ಯಾಕ್‌ನ್ನು ತೆಗೆದುಕೊಳ್ಳುವುದಾಗಿದೆ. ಅದಕ್ಕಾಗಿ ಇಂತಿಷ್ಟು ಶುಲ್ಕ ವಿಧಿಸಲಾಗುತ್ತದೆ.

Honda Activa e Monthly Battery Subscription Price Cut Details

ಸದ್ಯ ಹೋಂಡಾ ಬ್ಯಾಟರಿ-ಆಸ್-ಎ-ಸರ್ವಿಸ್ ಯೋಜನೆಯ ಚಂದಾದಾರಿಕೆ ಶುಲ್ಕವನ್ನು ಪರಿಷ್ಕರಣೆ ಮಾಡಿದೆ. ಇನ್ಮುಂದೆ ಆಕ್ಟಿವಾ ಇ ಮಾಲೀಕರು ಪ್ರತಿ ತಿಂಗಳು ರೂ.678 (+ಜಿಎಸ್‌ಟಿ) ಶುಲ್ಕವನ್ನು ಪಾವತಿ ಮಾಡಬೇಕು. ಹೋದ ತಿಂಗಳು ರೂ.1,999 ಚಂದಾದಾರಿಕೆ ಶುಲ್ಕವಿತ್ತು. ಈ ಕುರಿತಂತೆ ಕಂಪನಿಯು ಸಹ 'ಎಕ್ಸ್' ಖಾತೆಯಲ್ಲಿ ಪೋಸ್ಟ್ ಮಾಡಿದೆ.

ಹೋಂಡಾ ಆಕ್ಟಿವಾ ಇ ವಿಶೇಷತೆಗಳೇನು:

ಇದೊಂದು ಎಲೆಕ್ಟ್ರಿಕ್ ಸ್ಕೂಟರ್ ಆಗಿದ್ದು, ಸ್ಟ್ಯಾಂಡರ್ಡ್ ಹಾಗೂ ರೋಡ್‌ಸಿಂಕ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಕ್ರಮವಾಗಿ ರೂ.1.17 ಲಕ್ಷದಿಂದ ರೂ.1.52 ಲಕ್ಷ ಎಕ್ಸ್-ಶೋರೂಂ ದರವನ್ನು ಪಡೆದಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಪರ್ಲ್ ಶಾಲೋ ಬ್ಲೂ, ಪರ್ಲ್ ಮಿಸ್ಟಿ ವೈಟ್, ಪರ್ಲ್ ಸೆರಿನಿಟಿ ಬ್ಲೂ ಹಾಗೂ ಮ್ಯಾಟ್ ಫಾಗಿ ಸಿಲ್ವರ್ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

Honda Activa e Monthly Battery Subscription Price Cut Details

ಈ ಎಲೆಕ್ಟ್ರಿಕ್ ಸ್ಕೂಟರ್ ಬೆಲೆಗೆ ತಕ್ಕಂತೆ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಎರಡು ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಪೂರ್ತಿ ಚಾರ್ಜ್‌ನಲ್ಲಿ 102 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ. 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ.

ಇದು ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಬಹುಮುಖ್ಯವಾಗಿ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಮತ್ತು ಹೆಚ್-ಸ್ಮಾರ್ಟ್ ಕೀ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಇಕಾನ್, ಸ್ಟ್ಯಾಂಡರ್ಡ್ ಮತ್ತು ಸ್ಪೋರ್ಟ್ ಎಂಬ ಮೂರು ರೈಡಿಂಗ್ ಮೋಡ್‌ಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಹೋಂಡಾ ಆಕ್ಟಿವಾ ಇ ಮಾರಾಟ ಹೇಗಿದೆ:

ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನುಫ್ಯಾಕ್ಚರರ್ಸ್ (SIAM) ಸಂಸ್ಥೆ ನೀಡಿರುವ ಮಾಹಿತಿ ಪ್ರಕಾರ, ಈ ವರ್ಷದ ಮಾರ್ಚ್‌ನಲ್ಲಿ 106 ಯುನಿಟ್ ಹಾಗೂ ಏಪ್ರಿಲ್‌ನಲ್ಲಿ 32 ಯುನಿಟ್‌ ಆಕ್ಟಿವಾ ಇ ಸ್ಕೂಟರ್‌ಗಳನ್ನು ಮಾರಾಟಗೊಳಿಸಲಾಗಿದೆ. ಈ ಮಾರಾಟ ಸಂಖ್ಯೆ ಇಳಿಮುಖವಾಗುತ್ತಿರುವ ಬಗ್ಗೆ ಕಂಪನಿಯು ಯಾವುದೇ ಸ್ಪಷ್ಟವಾದ ಕಾರಣವನ್ನು ಬಹಿರಂಗಪಡಿಸಿಲ್ಲ. ಆದರೂ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರನ್ನು ಆಕರ್ಷಿಸಲು ಬ್ಯಾಟರಿ-ಆಸ್-ಎ-ಸರ್ವಿಸ್ ಚಂದಾದಾರಿಕೆ ಶುಲ್ಕವನ್ನು ಕೆಡಿತಗೊಳಿಸಲಾಗಿದೆ ಎನ್ನಲಾಗಿದೆ.

ಹೋಂಡಾ ಕ್ಯೂಸಿ1 (Honda QC1) ಕೂಡ ಖರೀದಿಗೆ ಲಭ್ಯ:

ಇದು ರೂ.90,000 ಎಕ್ಸ್-ಶೋರೂಂ ಬೆಲೆಯನ್ನು ಒಳಗೊಂಡಿದೆ. 1.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 80 ಕಿ.ಮೀ ಓಡುತ್ತದೆ. ಎಲ್‌ಸಿಡಿ ಡಿಸ್‌ಪ್ಲೇ ಹಾಗೂ ಯುಎಸ್‌ಬಿ-ಸಿ ಚಾರ್ಜಿಂಗ್ ಪಾಯಿಂಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸವಾರರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

Article Published On: Thursday, June 19, 2025, 16:11 [IST]
English summary
Honda activa e monthly battery subscription price cut details
Read more on honda motorcycle india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+