1.17 ಲಕ್ಷ.. 102 ಕಿ.ಮೀ ರೇಂಜ್.. ಶೋರೂಂಗೆ ಬಂದೇ ಬಿಡ್ತು ಹೊಸ ಹೋಂಡಾ ಆಕ್ಟಿವಾ ಇ-ಸ್ಕೂಟರ್ ಶೀಘ್ರ ವಿತರಣೆ?
ಹೋಂಡಾ ಸ್ಕೂಟರ್ & ಮೋಟಾರ್‌ಸೈಕಲ್ ಇಂಡಿಯಾ (Honda Scooter & Motorcycle India), ವಿಶ್ವಾಸಾರ್ಹ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿದೆ. ಕಳೆದ ತಿಂಗಳು ಅದ್ದೂರಿಯಾಗಿ ತೆರೆಬಿದ್ದಿದ್ದ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಕಂಪನಿಯು ಹೊಚ್ಚ ಹೊಸ ಕ್ಯೂಸಿ1(QC1) ಹಾಗೂ ಆಕ್ಟಿವಾ ಇ (Activa e) ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಟಕ್ಕೆ ತಂದಿತ್ತು. ಸದ್ಯ, ಹೋಂಡಾ ಕಂಪನಿಯು ನೂತನ 'ಆಕ್ಟಿವಾ ಇ' ಮಾಡೆಲ್‌ನ್ನು ದೇಶಾದ್ಯಂತ ವಿವಿಧ ಶೋರೂಂಗಳಿಗೆ ತಲುಪಿಸುವ ಕಾರ್ಯಕ್ಕೆ ಚಾಲನೆ ನೀಡಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ಮುಂದಿನ ವಾರದಿಂದಲೇ ಈ ಸ್ಕೂಟರ್‌ನ ವಿತರಣೆಗಳು ಶುರುವಾಗಲಿದೆ.
ನೂತನ ಹೋಂಡಾ ಆಕ್ಟಿವಾ ಇ (Honda Activa e) ವಿಶೇಷತೆಗಳೇನು: ಈ ಸ್ಕೂಟರ್ ಎರಡು ವಿಧದಲ್ಲಿ ಖರೀದಿಗೆ ದೊರೆಯುತ್ತದೆ. ಇದರ ಸ್ಟ್ಯಾಂಡರ್ಡ್ ಮಾಡೆಲ್ ರೂ.1.17 ಲಕ್ಷ ಹಾಗೂ ರೋಡ್‌ಸಿಂಕ್ ಮಾಡೆಲ್ ರೂ.1.52 ಲಕ್ಷ ಎಕ್ಸ್-ಶೋರೂಂ ಬೆಲೆಯನ್ನು ಹೊಂದಿದೆ. ಈ ಸ್ಕೂಟರ್ ಬದಲಾಯಿಸಬಹುದಾದ ಬ್ಯಾಟರಿ ಪ್ಯಾಕ್ (Swappable Battery pack) ಒಳಗೊಂಡಿರುವುದರಿಂದ ಬೆಂಗಳೂರು, ನವದೆಹಲಿ ಹಾಗೂ ಮುಂಬೈನಲ್ಲಿ ಮಾತ್ರ ಮಾರಾಟ ಮಾಡಲಾಗುತ್ತದೆ.

ಹೊಸ ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟರ್ ಹೊರಭಾಗದಲ್ಲಿ ಉತ್ತಮವಾದ ವಿನ್ಯಾಸವನ್ನು ಪಡೆದಿದೆ. ಎಲ್ಇಡಿ ಹೆಡ್‌ಲೈಟ್, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು, ಸಿಂಗಲ್ ಪೀಸ್ ಸೀಟ್ ಮತ್ತು 12-ಇಂಚಿನ ಡೈಮಂಡ್-ಕಟ್ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಇದರೊಟ್ಟಿಗೆ ಪರ್ಲ್ ಶಾಲೋ ಬ್ಲೂ, ಪರ್ಲ್ ಮಿಸ್ಟಿ ವೈಟ್, ಪರ್ಲ್ ಸೆರಿನಿಟಿ ಬ್ಲೂ, ಮ್ಯಾಟ್ ಫಾಗಿ ಸಿಲ್ವರ್ ಮೆಟಾಲಿಕ್ ಮತ್ತು ಪರ್ಲ್ ಇಗ್ನಿಯಸ್ ಬ್ಲ್ಯಾಕ್ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಈ ಆಕ್ಟಿವಾ ಇ 1.5 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಎರಡು ಬ್ಯಾಟರಿ ಪ್ಯಾಕ್‌ನ್ನ ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 102 ಕಿ.ಮೀ ಓಡುತ್ತದೆ. ಇದರಲ್ಲಿ ಉಪಯೋಗಿಸುವ ಎಲೆಕ್ಟ್ರಿಕ್ ಮೋಟಾರ್ 6 ಕೆಡಬ್ಲ್ಯೂ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 22 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ನೂತನ ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟರ್ ಕೇವಲ 7.3 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಇಕಾನ್, ಸ್ಟ್ಯಾಂಡರ್ಡ್ & ಸ್ಪೋರ್ಟ್ ಎಂಬ ರೈಡಿಂಗ್ ಮೋಡ್‌ಗಳನ್ನು ತನ್ನದಾಗಿಸಿಕೊಂಡಿದೆ. 7.0-ಇಂಚಿನ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ನ್ನು ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.
ಹೊಸ ಆಕ್ಟಿವಾ ಇ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗ (ರೇರ್) ಡುಯಲ್ ಸ್ಪ್ರಿಂಗ್ ಸಸ್ಪೆನ್ಷನ್ ಸೆಟಪ್ ಆಯ್ಕೆಯನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ. ಈ ಸ್ಕೂಟರ್‌ಗೆ ಟಿವಿಎಸ್ ಐಕ್ಯೂಬ್, ಓಲಾ ಎಸ್1 ಹಾಗೂ ಬಜಾಜ್ ಚೇತಕ್ ಮಾಡೆಲ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.
ಹೋಂಡಾ ಕ್ಯೂಸಿ1 (Honda QC1) ಕೂಡ ಖರೀದಿಗೆ ಲಭ್ಯ: ಇದು ರೂ.90,000 ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿವೆ. 1.5 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಹೊಂದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 80 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಎಲ್‌ಸಿಡಿ ಡಿಸ್‌ಪ್ಲೇ, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಸಾಕೆಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.
Source: Team BHP


Click it and Unblock the Notifications