Honda Activa e Vs QC1: ಎರಡು ಭರ್ಜರಿಯಾಗಿವೆ.. ಬೆಲೆಯೂ ಅಗ್ಗ, ನಿಮಗೆ ಯಾವುದು ಇಷ್ಟ ಹೇಳಿ!
ಹೋಂಡಾ ಸ್ಕೂಟರ್ & ಮೋಟಾರ್‌ಸೈಕಲ್ ಇಂಡಿಯಾ (Honda Scooter & Motorcycle India), ಕಳೆದ ಜನವರಿಯಲ್ಲಿ ಮುಕ್ತಾಯಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ನೂತನ ಕ್ಯೂಸಿ1(QC1) ಹಾಗೂ ಆಕ್ಟಿವಾ ಇ (Activa e) ಇ-ಸ್ಕೂಟರ್‌ಗಳನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿತ್ತು. ನೀವು ಹೊಚ್ಚ ಹೊಸ ಟೂ ವೀಲರ್ವೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ, ಕ್ಯೂಸಿ1 ಮತ್ತು ಆಕ್ಟಿವಾ ಇ ಎಲೆಕ್ಟ್ರಿಕ್ ಸ್ಕೂಟರ್‌ಗಳು ಹೆಚ್ಚು ಸೂಕ್ತವಾಗಲಿವೆ. ಬನ್ನಿ.. ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ.
ಹೊಸ ಹೋಂಡಾ ಕ್ಯೂಸಿ1 ಅತಿ ಕಡಿಮೆ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಸಿಗುತ್ತದೆ. ಇದು ರೂ.90,000 ದರವನ್ನು ಪಡೆದಿದೆ. ಅದೇ ರೀತಿಯಲ್ಲಿ ಹೋಂಡಾ ಆಕ್ಟಿವಾ ಇ ಕೂಡ ಹೆಚ್ಚು ಕೈಗೆಟುಕುವಂತಿದ್ದು, ಸ್ಟ್ಯಾಂಡರ್ಡ್ ಮಾಡೆಲ್ ರೂ.1.17 ಲಕ್ಷ ಮತ್ತು ರೋಡ್‌ಸಿಂಕ್ ಮಾಡೆಲ್ ರೂ.1.52 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ.

ಹೋಂಡಾ ಕ್ಯೂಸಿ1 ಇ-ಸ್ಕೂಟರ್, 1.5 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಸ್ಥಿರ (Fixed) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 80 ಕಿಲೋಮೀಟರ್ ಓಡುತ್ತದೆ. 50 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಮನೆಯಲ್ಲಿ ಸುಲಭವಾಗಿ ಚಾರ್ಜಿಂಗ್ ಮಾಡಬಹುದಾಗಿರುವ ಹಿನ್ನೆಲೆ, ಈ ಸ್ಕೂಟರ್ ದೇಶಾದ್ಯಂತ ಎಲ್ಲ ನಗರಗಳಲ್ಲಿ ಖರೀದಿಗೆ ದೊರೆಯುತ್ತದೆ.
ನೂತನ ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟರ್, 1.5 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಎರಡು ಬದಲಾಯಿಸಬಹುದಾದ (Swappable Battery pack) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಪೂರ್ತಿ ಚಾರ್ಜ್‌ನಲ್ಲಿ 102 ಕಿಲೋಮೀಟರ್ ಕ್ರಮಿಸುತ್ತದೆ. 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಬೆಂಗಳೂರು, ನವದೆಹಲಿ ಮತ್ತು ಮುಂಬೈನಲ್ಲಿ ಮಾತ್ರ ಖರೀದಿಗೆ ಸಿಗುತ್ತದೆ.

ಹೋಂಡಾ ಆಕ್ಟಿವಾ ಇ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಹೆಚ್-ಸ್ಮಾರ್ಟ್ ಕೀನಂತಹ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಅದರ ಹೊರತಾಗಿ ಹೋಂಡಾ ಕ್ಯೂಸಿ1 ಎಲೆಕ್ಟ್ರಿಕ್ ಸ್ಕೂಟರ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಪಡೆದಿದೆ. ಆಕ್ಟಿವಾ ಇ ಒಳಗೊಂಡಿರುವಂತೆ ಕ್ಯೂಸಿ1 ಕೂಡ ಲಗೇಜ್ ಹುಕ್ ಹಾಗೂ ಯುಎಸ್‌ಬಿ-ಸಿ ಚಾರ್ಜಿಂಗ್ ಪಾಯಿಂಟ್ ಅನ್ನು ತನ್ನದಾಗಿಸಿಕೊಂಡಿದ್ದು, ಅನಲಾಗ್ ಕೀ'ಯನ್ನು ಹೊಂದಿದೆ.
ಹೊಸ ಹೋಂಡಾ ಆಕ್ಟಿವಾ ಇ ಹಾಗೂ ಕ್ಯೂಸಿ1 ಇ-ಸ್ಕೂಟರ್‌ಗಳು ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಹಾಗೂ ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್ ಆಯ್ಕೆಯನ್ನು ಒಳಗೊಂಡಿದೆ. ಆಕ್ಟಿವಾ ಇ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದ್ದರೆ, ಕ್ಯೂಸಿ1 ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.
ಹೋಂಡಾ ಆಕ್ಟಿವಾ ಇ ಸ್ಕೂಟರ್‌ಗೆ ಕ್ಯೂಸಿ 1 ಸ್ಕೂಟರ್ ಗಾತ್ರದಲ್ಲಿ ಕೊಂಚ ಚಿಕ್ಕದಾಗಿದ್ದು, ಕಾಲೇಜು ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಸುಲಭವಾಗಿ ಬಳಕೆ ಮಾಡಬಹುದು. ಆಕ್ಟಿವಾ ಇ ಎಲೆಕ್ಟ್ರಿಕ್ ಸ್ಕೂಟರ್‌ನ್ನು ಸ್ವಲ್ಪ ಹೆಚ್ಚಿನ ದೂರದ ಪ್ರದೇಶಗಳಿಗೆ ಕೆಲಸಕ್ಕೆ ಹೋಗಲು ಉಪಯೋಗ ಮಾಡಬಹುದು. ಈ ನೂತನ ಇ-ಸ್ಕೂಟರ್‌ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರಿಗೆ ವಿತರಣೆ ಮಾಡಿದ ಬಳಿಕ, ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications